ರಾಜ್ಯ ‘ಕೈ’ ಸರ್ಕಾರಕ್ಕೆ ಎರಡು ವರ್ಷ: ಬೆಂ.ಗ್ರಾ ಜಿಲ್ಲೆಯಲ್ಲಿ ಸಾಧನ ಸಮಾವೇಶ: ಇನ್ನೇನು ಕೆಲವ ಕ್ಷಣಗಳಲ್ಲಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆಗಮನ: ಉದ್ಘಾಟನೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮದ ಜೊತೆಗೆ ಸರ್ಕಾರದ ಎರಡು ವರ್ಷದ ಸಾಧನ ಸಮಾವೇಶ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಸಿಎಂ‌ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆಶಿ ಸೇರಿದಂತೆ ಹಲವು ಸಚಿವರು, ಶಾಸಕರು ಆಗಮಿಸಿ ಚಾಲನೆ ನೀಡಲಿದ್ದಾರೆ.

ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರ ಘನ ಉಪಸ್ಥಿತಿ, ಗೃಹ ಸಚಿವರಾದ ಡಾ. ಜಿ.ಪರಮೇಶ್ವರ್, ಕಾನೂನು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಎಚ್.ಕೆ ಪಾಟೀಲ್, ಇಂಧನ ಸಚಿವರಾದ ಕೆ.ಜೆ ಜಾರ್ಜ್ ಅವರು ವಿಶೇಷ ಉಪಸ್ಥಿತಿ ಇರಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಅವರು ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಸಾರಿಗೆ ಸಚಿವರು ರಾಮಲಿಂಗಾ ರೆಡ್ಡಿ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು ಎಂ.ಬಿ ಪಾಟೀಲ್, ಆಹಾರ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ದಿನೇಶ್ ಗುಂಡೂರಾವ್, ಸಮಾಜ ಕಲ್ಯಾಣ ಇಲಾಖೆ ಸಚಿವರು ಡಾ. ಎಚ್.ಸಿ ಮಹಾದೇವಪ್ಪ, ಲೋಕೋಪಯೋಗಿ ಸಚಿವರು ಸತೀಶ್ ಜಾರಕಿಹೊಳಿ, ಕಂದಾಯ ಸಚಿವರು ಕೃಷ್ಣ ಬೈರೇಗೌಡ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಪ್ರಿಯಾಂಕಾ ಖರ್ಗೆ, ಕೃಷಿ ಮಾರುಕಟ್ಟೆ ಸಚಿವರು ಶಿವಾನಂದ ಪಾಟೀಲ್, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವರು ಜಮೀರ್ ಅಹ್ಮದ್ ಖಾನ್, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮೆ ಸಚಿವರು ಶರಣ ಬಸಪ್ಪ ದರ್ಶನಾಪುರ, ಅರಣ್ಯ ಇಲಾಖೆ ಸಚಿವರು ಈಶ್ವರ ಖಂಡ್ರೆ, ಕೃಷಿ ಸಚಿವರು ಎನ್. ಚಲುವರಾಯಸ್ವಾಮಿ, ತೋಟಗಾರಿಕೆ ಇಲಾಖೆ ಸಚಿವರು ಎಸ್.ಎಸ್ ಮಲ್ಲಿಕಾರ್ಜುನ, ಪೌರಾಡಳಿತ ಮತ್ತು ಹಜ್ ಇಲಾಖೆ ಸಚಿವರು ರಹೀಂ ಖಾನ್, ಕಾರ್ಮಿಕ ಸಚಿವರು ಸಂತೋಷ ಲಾಡ್, ವೈದ್ಯಕೀಯ ಶಿಕ್ಷಣ ಸಚಿವರು ಡಾ. ಶರಣ ಪ್ರಕಾಶ್ ಪಾಟೀಲ್, ರೇಷ್ಮೆ ಇಲಾಖೆ ಸಚಿವರು ಕೆ. ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಸಚಿವರು ತಂಗಡಗಿ ಶಿವರಾಜ್ ಸಂಗಪ್ಪ, ಸಾಂಖ್ಯೀಕ ಇಲಾಖೆ ಸಚಿವರು ಡಿ. ಸುಧಾಕರ, ಸಹಕಾರ ಇಲಾಖೆ ಸಚಿವರು ಕೆ.ಎನ್ ರಾಜಣ್ಣ, ನಗರಾಭಿವೃದ್ಧಿ ಸಚಿವರು ಬಿ.ಎಸ್ ಸುರೇಶ್, ಒಳನಾಡು ಜಲಸಾರಿಗೆ ಸಚಿವರು ಮಂಕಾಳ ಎಸ್. ವೈದ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಲಕ್ಷ್ಮೀ ಹೆಬ್ಬಾಳ್ಕರ್, ಶಾಲಾ ಶಿಕ್ಷಣ ಸಚಿವರು ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವರು ಎಮ್.ಸಿ ಸುಧಾಕರ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರು ಎನ್.ಎಸ್ ಬೋಸರಾಜು, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ ಅಧ್ಯಕ್ಷರು ಶರತ್ ಕುಮಾರ್ ಬಚ್ಚೆಗೌಡ, ವಿರೋಧ ಪಕ್ಷದ ನಾಯಕರು ಆರ್. ಅಶೋಕ್, 5ನೇ ಹಣಕಾಸು ಆಯೋಗದ ಅಧ್ಯಕ್ಷರು ಸಿ.ನಾರಾಯಣಸ್ವಾಮಿ ಅವರು ಗೌರವ ಉಪಸ್ಥಿತಿ ಇರಲಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯರು ಡಾ.ಕೆ ಸುಧಾಕರ್, ನೆಲಮಂಗಲ ವಿಧಾನಸಭಾ ಶಾಸಕರು ಎನ್. ಶ್ರೀನಿವಾಸ್, ದೊಡ್ಡಬಳ್ಳಾಪುರ ವಿಧಾನಸಭಾ ಶಾಸಕರು ಧೀರಜ್ ಮುನಿರಾಜು, ವಿಧಾನ ಪರಿಷತ್ ಶಾಸಕರು ಎಸ್. ರವಿ, ವಿಧಾನ ಪರಿಷತ್ ಶಾಸಕರು ಪುಟ್ಟಣ್ಣ, ವಿಧಾನ ಪರಿಷತ್ ಶಾಸಕರು ಎಮ್.ಟಿ.ಬಿ ನಾಗರಾಜು, ವಿಧಾನ ಪರಿಷತ್ ಶಾಸಕರು ರಾಮೋಜಿಗೌಡ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಯರು ಬಿ. ರಾಜಣ್ಣ, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅಧ್ಯಕ್ಷರು ವಿ. ಶಾಂತಕುಮಾರ್ ಸೇರಿ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ನಾಮನಿರ್ದೇಶಿತ ಸದಸ್ಯರು, ಎಲ್ಲಾ ಪ್ರಾಧಿಕಾರದ ಅಧ್ಯಕ್ಷರು  ಉಪಾಧ್ಯಕ್ಷರು, ಸದಸ್ಯರು, ಎಲ್ಲಾ ಗ್ರಾಮ ಪಂಚಾಯಿತಿಯ ಅಧ್ಯಕ್ಷರು/ ಉಪಾಧ್ಯಕ್ಷರು, ಸದಸ್ಯರು ಹಾಗೂ ಸಾರ್ವಜನಿಕರು ಪಾಲ್ಗೊಳ್ಳಲಿದ್ದಾರೆ.

Ramesh Babu

Journalist

Recent Posts

ಹಿಂಬದಿಯಿಂದ ಬೈಕ್‌ಗೆ ಕಾರು ಡಿಕ್ಕಿ: ದಂಪತಿ ಸಾವು

ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…

8 hours ago

ಬಿಗ್ ಬಾಸ್ ಮತ್ತು ಏಷ್ಯನ್ ಗೇಮ್ಸ್……

ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…

9 hours ago

ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ- ಆರ್.ವಿ. ಮಹೇಶ್

ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…

21 hours ago

ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ 18ರ ಹರೆಯದ ವಿದ್ಯಾರ್ಥಿ

ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…

21 hours ago

ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ತೇಜಸ್ವಿನಿ.ಸಿ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…

22 hours ago

ಬರದ ನಡುವೆ ಜಾನುವಾರುಗಳಿಗೆ ಹಸಿರು ಆಸರೆ: 70 ಎಕರೆಯಲ್ಲಿ ಹಸಿಹುಲ್ಲು ಬೆಳವಣಿಗೆಗೆ ಜಿಪಂ ಕ್ರಮ: ಮತ್ತಷ್ಟು ಸರ್ಕಾರಿ ಜಮೀನು ಹುಲ್ಲುಗಾವಲಾಗಿ ಪರಿವರ್ತನೆ

ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…

1 day ago