ರಾಜ್ಯ ಕ್ರೀಡಾ ಶಾಲೆ-ವಸತಿ ನಿಲಯಗಳ ಪ್ರವೇಶಾತಿ: ಜನವರಿ 16 ರಿಂದ ಆಯ್ಕೆ ಪ್ರಕ್ರಿಯೆ

2024-25 ನೇ ಸಾಲಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಜ್ಯ ಕ್ರೀಡಾ ಶಾಲೆ/ವಸತಿ ನಿಲಯಗಳಿಗೆ 8ನೇ ತರಗತಿ ಮತ್ತು ಪ್ರಥಮ ಪಿ.ಯು.ಸಿ.ಗೆ ಪ್ರವೇಶ ನೀಡಲು ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯನ್ನು ತಾಲ್ಲೂಕುವಾರು ನಡೆಸಲಾಗುತ್ತಿದೆ. 7ನೇ ತರಗತಿ ಮತ್ತು 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕ್ರೀಡಾಪಟುಗಳು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ.

ದೇವನಹಳ್ಳಿ ತಾಲ್ಲೂಕಿನಲ್ಲಿ 16.01.2024 ರ ಬೆಳಗ್ಗೆ 09.30 ಗಂಟೆಗೆ ದೇವನಹಳ್ಳಿ ಟೌನ್ ಕ್ರೀಡಾಂಗಣ ದಲ್ಲಿ, ಹೊಸಕೋಟೆ ತಾಲ್ಲೂಕಿನಲ್ಲಿ 18.01.2024 ರಂದು ಬೆಳಗ್ಗೆ 9.30 ಗಂಟೆ ಶ್ರೀ ಚನ್ನಭೈರೇಗೌಡ ಕ್ರೀಡಾಂಗಣದಲ್ಲಿ, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 19.01.2024 ಬೆಳಗ್ಗೆ 9.30 ಗಂಟೆಗ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ, ನೆಲಮಂಗಲ ತಾಲ್ಲೂಕಿನಲ್ಲಿ 20.01.2024 ಬೆಳಗ್ಗೆ 9.30 ಗಂಟೆ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣ ದಲ್ಲಿ ಕ್ರೀಡಾಪಟುಗಳು ಅಯ್ಕೆ ಪ್ರಕ್ರಿಯೆ ನಡೆಯಲಿದೆ.

ಕ್ರೀಡಾಶಾಲೆ/ವಸತಿ ನಿಲಯಗಳಿಗೆ ಆಯ್ಕೆ ಪ್ರಕ್ರಿಯೆ ನಡೆಸಲು ಕ್ರೀಡಾಪಟುಗಳಿಗೆ ಇರಬೇಕಾದ ಅರ್ಹತೆ ಮತ್ತು ನಾರ್ಮ್ಸ್ ಗಳು 8ನೇ ತರಗತಿಗೆ ಪ್ರವೇಶ ಪಡೆಯುವವರು ಆಯಾ ವರ್ಷದ ಜೂನ್ 01 ಕ್ಕೆ 14 ವರ್ಷದೊಳಗಿರಬೇಕು.

ಪ್ರಥಮಪಿ.ಯು.ಸಿ ಪ್ರವೇಶ ಪಡೆಯಲು ಇಚ್ಚಿಸುವವರು ಆಯಾ ವರ್ಷದ ಜೂನ್ 01 ರಂದು 17 ವರ್ಷದೊಳಗಿರಬೇಕು.

ಬಾಲಕರು ಮತ್ತು ಬಾಲಕಿಯರಿಗೆ ಅಥ್ಲೆಟಿಕ್ಸ್, ಹಾಕಿ ಬ್ಯಾಸ್ಕೆಟ್ ಬಾಲ್, ವಾಲಿಬಾಲ್, ಪುಟ್ಬಾಲ್ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು.

ರಾಜ್ಯ ಕ್ರೀಡಾಶಾಲೆ/ವಸತಿ ನಿಲಯಗಳಿಗೆ (ಕಿರಿಯರ ವಿಭಾಗ) ಪ್ರವೇಶ ಕೋರುವ ಅಭ್ಯರ್ಥಿಗಳ ದೈಹಿಕ ಸಾಮರ್ಥ್ಯ/ಶಕ್ತಿ, ಚಾಕಚಕ್ಯತೆ, ಸಹಿಷ್ಣುತೆ, ಕುಶಲತೆ, ವೇತ ಹಾಗೂ ಆಯಾ ಕ್ರೀಡೆಗೆ ಅಗತ್ಯವಿರುವ ಕನಿಷ್ಟ ಎತ್ತರ ಇವುಗಳನ್ನು ಪ್ರಥಮ ಹಂತದ ಆಯ್ಕೆಯಲ್ಲಿ(ಭಾಗ-1) ಪರೀಕ್ಷಿಸುವುದು ಹಾಗೂ ಈ ಪರೀಕ್ಷೆಗಳಲ್ಲಿ ಒಟ್ಟಾರೆ ಶೇ 50ಕ್ಕೂ ಹೆಚ್ಚು ಅಂಕಗಳನ್ನು ಪಡೆದವರಿಗೆ ಎರಡನೇ ಹಂತದ ಆಯ್ಕೆ ಪರೀಕ್ಷೆಗೆ ಅವಕಾಶ ಮಾಡಿಕೊಡುವುದು.

8ನೇ ತರಗತಿ ಕ್ರೀಡಾಶಾಲೆ/ವಸತಿ ನಿಲಯಗಳ ಪ್ರವೇಶಕ್ಕೆ ಜಿಲ್ಲಾ ಮಟ್ಟ, ವಿಭಾಗ ಮಟ್ಟದ ಹಾಗೂ ರಾಜ್ಯ ಮಟ್ಟದ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವುದು ಕಡ್ಡಾಯ.

ಪ್ರಥಮ ಪಿಯುಸಿ ಪ್ರವೇಶಕ್ಕೆ ವಿಭಾಗ ಮಟ್ಟದ ಆಯ್ಕೆ ಪ್ರಕ್ರಿಯೆಯಲ್ಲಿ ಕ್ರೀಡಾಪಟುಗಳು ನೇರವಾಗಿ ಭಾಗವಹಿಸತಕ್ಕದ್ದು. ಅರ್ಹರಿಗೆ ರಾಜ್ಯ ಮಟ್ಟದ ಆಯ್ಕೆ ಶಿಬಿರದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗುವುದು.

ಅರ್ಜಿಗಳನ್ನು ಈ ಕಚೇರಿಯಲ್ಲಿ ಅಥವಾ ಮೇಲೆ ಹೇಳಿದಂತೆ ಆಯ್ಕೆ ನಡೆಯುವ ಸ್ಥಳಗಳಲ್ಲಿ(ಕ್ರೀಡಾಂಗಣ) ಪಡೆಯತಕ್ಕದ್ದು. ವಿಭಾಗ ಮಟ್ಟಕ್ಕೆಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು.

8ನೇ ತರಗತಿ ಮತ್ತು ಪ್ರಥಮ ಪಿ.ಯು.ಸಿ. ಪ್ರವೇಶಕ್ಕೆ ವಿಭಾಗ ಮಟ್ಟದ ಆಯ್ಕೆ ಪ್ರಕ್ರಿಯೆಯು ಶ್ರೀ ಕಂಠೀರವ ಕ್ರೀಡಾಂಗಣ, ಬೆಂಗಳೂರು ಇಲ್ಲಿ 27.01.2024 ರಂದು ಕಿರಿಯರ ವಿಭಾಗಕ್ಕೆ ಹಾಗೂ 28.01.2024 ರಂದು ಹಿರಿಯರ ವಿಭಾಗಕ್ಕೆ ಅಥ್ಲೆಟಿಕ್ಸ್, ಬ್ಯಾಸ್ಕೆಟ್‌ಬಾಲ್, ಪುಟ್ಬಾಲ್, ಜಿಮ್ನಾಸ್ಟಿಕ್, ಹಾಕಿ, ಜುಡೋ, ವಾಲಿಬಾಲ್, ಕುಸ್ತಿ, ಸ್ಪರ್ಧೆಗಳು ನಡೆಯಲಿದೆ.

 *ಕೋವಿಡ್ ಮುನ್ನೆಚ್ಚರಿಕೆ ಸೂಚನೆಗಳು*

ಆಯ್ಕೆ ಪ್ರಕ್ರಿಯೆ ನಡೆಯುವ ಸ್ಥಳದಲ್ಲಿ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಆಯ್ಕೆಗೆ ಬರುವ ಕ್ರೀಡಾಪಟುಗಳು ಕಡ್ಡಾಯವಾಗಿ ಕೋವಿಡ್‌ ಟೆಸ್ಟ್ ಮಾಡಿಸಿದ ವರದಿಯನ್ನು ತಪ್ಪದೇ ಹಾಜರುಪಡಿಸುವುದು. ವರದಿ ನೆಗೆಟಿವ್ ಬಂದಲ್ಲಿ ಮಾತ್ರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು.

ಪೋಷಕರು ಕ್ರೀಡಾಪಟುಗಳೊಂದಿಗೆ ಬಂದಾಗ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು.

ಹಿರಿಯರ ಆಯ್ಕೆಯಲ್ಲಿ ಭಾಗವಹಿಸಲಿಚ್ಛಿಸುವ ಅಭ್ಯರ್ಥಿಗಳು ತಾಲ್ಲೂಕು ಕೇಂದ್ರಗಳಲ್ಲಿ ಕಿರಿಯರ ಆಯ್ಕೆ ಪ್ರಕ್ರಿಯೆ ನಡೆಸುವಾಗಲೆ ಅರ್ಜಿ ನಮೂನೆಗಳನ್ನು ಪಡೆಯುವುದು. ಅಂತಹ ಕ್ರೀಡಾಪಟುಗಳು ಮೇಲೆ ತಿಳಿಸಿದ ದಿನಾಂಕಗಳಂದು ನಡೆಯುವ ಆಯ್ಕೆ ಪ್ರಕ್ರಿಯೆಗೆ ನೇರವಾಗಿ ವರದಿ ಮಾಡಿಕೊಳ್ಳುವುದು. ಹಿರಿಯರ ವಿಭಾಗದ ಆಯ್ಕೆಗೆ ತೆರಳುವ ಕ್ರೀಡಾಪಟುಗಳಿಗೆ ಯಾವುದೇ ರೀತಿಯ ಪ್ರಯಾಣಭತ್ಯೆ ಹಾಗೂ ದಿನಭತ್ಯೆ ನೀಡಲಾಗುವುದಿಲ್ಲ.

ಆಯ್ಕೆಯಾದ ಕಿರಿಯ/ಹಿರಿಯ ವಿಭಾಗದ ಕ್ರೀಡಾಪಟುಗಳು ನಿಗದಿತ ಅರ್ಜಿ ನಮೂನೆಯಲ್ಲಿ ವಿವರಗಳನ್ನು ಭರ್ತಿ ಮಾಡಿ ಪೋಷಕರ ಸಹಿ ಪಡೆದು ಆಯ್ಕೆ ಪ್ರಕ್ರಿಯೆ ಸ್ಥಳದಲ್ಲಿ ಅಥವಾ ಸಂಬಂಧಪಟ್ಟ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರುಗಳ ಮುಖಾಂತರ ಈ ಕಚೇರಿಗೆ ಸಲ್ಲಿಸುವುದು.

ಹೆಚ್ಚಿನ ವಿವರಗಳಿಗಾಗಿ ಕಚೇರಿಯ ದೂ.ಸಂಖ್ಯೆ 080-29787443, ಮೊ.ಸಂಖ್ಯೆ 9980590960 / 9632778567 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

8 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

8 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

12 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

14 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

17 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

21 hours ago