
ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕಗೊಂಡ ಯುವ ಕಾಂಗ್ರೆಸ್ ಮುಖಂಡ ಚೇತನ್ ಅವರು ಅ.6ರಂದು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಪೂಜೆ ಸಲ್ಲಿಸಿದ ಬಳಿಕ ಅವರು ಅಧಿಕಾರ ಸ್ವೀಕರಿಸಿ, ಪಕ್ಷದ ಮುಖಂಡರು ಹಾಗೂ ಗಣ್ಯರ ಆಶೀರ್ವಾದ ಪಡೆದರು.
ಈ ಹಿನ್ನೆಲೆ ನೂತನವಾಗಿ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕಗೊಂಡ ಯುವ ಕಾಂಗ್ರೆಸ್ ಮುಖಂಡ ಚೇತನ್ ಅವರಿಗೆ ಇಂದು ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್, ಹೇಮಾವತಿ ರಮೇಶ್, ಲಕ್ಷ್ಮಾ ನಾಯಕ್, ರವಿ, ವಕೀಲ ಆರ್.ವಿ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹೂಗುಚ್ಛ ನೀಡುವ ಮೂಲಕ ಅಭಿನಂದಿಸಿ ಶುಭಕೋರಿದರು.
ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕಗೊಂಡ ಯುವ ಕಾಂಗ್ರೆಸ್ ಮುಖಂಡ ಚೇತನ್ ಅವರು ದೊಡ್ಡಬಳ್ಳಾಪುರ ತಾಲೂಕಿನ ಮೊಮ್ಮಗ ಎಂದು ತಿಳಿದುಬಂದಿದೆ….