ಕಳೆದ ಎರಡು ವರ್ಷಗಳಿಂದ ಡಯಾಲಿಸಿಸ್ ನೌಕರರಿಗೆ ಸರಿಯಾದ ವೇತನ ಸಮಸ್ಯೆ ಹಾಗೂ ಇತರೆ ಸೌಲಭ್ಯಗಳನ್ನು ನೀಡದ ಹಿನ್ನೆಲೆ ಆಗಸ್ಟ್ 2ರಿಂದ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ರಾಜ್ಯ ಡಯಾಲಿಸಿಸ್ ನೌಕರರ ಸಂಘ ನಿರ್ಧರಿಸಿದೆ.
ಅನಿರ್ದಿಷ್ಟಾವಧಿ ಪ್ರತಿಭಟನೆ ಹಿನ್ನೆಲೆ ನಾಳೆಯಿಂದ ರಾಜ್ಯದ್ಯಾಂತ ಡಯಾಲಿಸಿಸ್ ಸೇವೆ ಬಂದ್ ಆಗುವ ಸಾಧ್ಯತೆ ಇದೆ.
ರಾಜ್ಯದ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಒಟ್ಟು 167 ಡಯಾಲಿಸಿಸ್ ಕೇಂದ್ರಗಳಿದ್ದು, 1 ಸಾವಿರಕ್ಕೂ ಅಧಿಕ ಸಿಬ್ಬಂದಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಈ ನೌಕರರು ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಬಿಆರ್ ಎಸ್ ಮತ್ತು ಸಂಜೀವಿನಿ ಸಂಸ್ಥೆಗಳ ಅಡಿಯಲ್ಲಿ ಡಯಾಲಿಸಿಸ್ ನೌಕರರು ಕೆಲಸ ಮಾಡುತ್ತಿದ್ದಾರೆ.
ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವವರೆಗೆ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಡಯಾಲಿಸಿಸ್ ನೌಕರರ ಸಂಘದ ಅಧ್ಯಕ್ಷ ಚೇತನ್ ತಿಳಿಸಿದ್ದಾರೆ.