ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ (ಡಿಜಿ ಮತ್ತು ಐಜಿಪಿ) ಪ್ರವೀಣ್ ಸೂದ್ ಅವರು ಮುಂದಿನ ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರಾಗಲಿದ್ದಾರೆ.
ಸಿಬಿಐ ಹಾಲಿ ನಿರ್ದೇಶಕರಾಗಿರುವ ಸುಭೋಧ್ ಕುಮಾರ್ ಅವರ ಅಧಿಕಾರಾವಧಿ ಇದೇ ತಿಂಗಳಾಂತ್ಯಕ್ಕೆ ಮುಕ್ತಾಯವಾಗಲಿದ್ದು, ಈ ಹಿನ್ನೆಲೆ ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿರುವ ಪ್ರವೀಣ್ ಸೂದ್ ಅವರನ್ನು ನೇಮಕ ಮಾಡಲಾಗಿದೆ. 1986 ರ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿರುವ ಪ್ರವೀಣ್ ಸೂದ್, ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದು, ಅವರ ಸೇವಾ ಅವಧಿ ಇನ್ನೂ ಒಂದು ವರ್ಷವಿದೆ.
ಪ್ರಸ್ತುತ ಸಿಬಿಐ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಸುಭೋಧ್ ಕುಮಾರ್ ಜೈಸ್ವಾಲ್ ಅವರ ಅಧಿಕಾರಾವಧಿ ಇದೇ ಮೇ. 25 ರಂದು ಮುಕ್ತಾಯಗೊಳ್ಳಲಿದೆ. 1985 ರ ಮಹಾರಾಷ್ಟ್ರ ಕೇಡರ್‌ನ ಐಪಿಎಸ್ ಅಧಿಕಾರಿಯಾಗಿರುವ ಸುಭೋಧ್ ಕುಮಾರ್ ಅವರು, 2021, ಮೇ 26 ರಂದು ಸಿಬಿಐ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದರು.
ಆಯ್ಕೆ ಹೇಗೆ..?
ಪ್ರಧಾನ ಮಂತ್ರಿ, ಸಿಜೆಐ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿಯು ಎರಡು ವರ್ಷಗಳ ನಿಗದಿತ ಅವಧಿಗೆ ಸಿಬಿಐ ನಿರ್ದೇಶಕರನ್ನು ಆಯ್ಕೆ ಮಾಡುತ್ತದೆ. ಅಧಿಕಾರಾವಧಿಯನ್ನು ಐದು ವರ್ಷಗಳವರೆಗೆ ವಿಸ್ತರಿಸಬಹುದು.
ಕೇಂದ್ರೀಯ ತನಿಖಾ ದಳ (CBI )ಎಂಬುದು ಭಾರತದ ಒಂದು ಸರ್ಕಾರಿ ಸಂಸ್ಥೆಯಾಗಿದ್ದು, ಅಪರಾಧದ ತನಿಖಾ ಘಟಕವಾಗಿ, ರಾಷ್ಟ್ರೀಯ ಭದ್ರತಾ ಸಂಸ್ಥೆಯಾಗಿ ಮತ್ತು ಗುಪ್ತಚರ ಸಂಸ್ಥೆಯಾಗಿ ಅದು ಸೇವೆ ಸಲ್ಲಿಸುತ್ತದೆ. 1963 ರ ಏಪ್ರಿಲ್ 1 ರಂದು ಇದು ಸ್ಥಾಪಿಸಲ್ಪಟ್ಟಿತು. “ದುಡಿಮೆ, ನಿಷ್ಪಕ್ಷಪಾತತೆ, ಸಮಗ್ರತೆ” ಎಂಬುದು ಇದರ ಧ್ಯೇಯವಾಕ್ಯವಾಗಿದೆ.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…