ರಾಜ್ಯ ಬಜೆಟ್​ ಗಾತ್ರ 4 ಲಕ್ಷ ಕೋಟಿ: ದೊಡ್ಡಬಳ್ಳಾಪುರದಲ್ಲಿ 20 ಎಕರೆ ಪ್ರದೇಶದಲ್ಲಿ ಜಿಲ್ಲಾ ಕ್ರೀಡಾಂಗಣ: 5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಸೈಕ್ಲಿಂಗ್ ವೆಲೋಡ್ರೋಮ್ ನಿರ್ಮಾಣ

ನನ್ನ ರಾಜಕೀಯ ಜೀವನದ 16ನೇ ಬಜೆಟ್ ಮಂಡನೆಗೆ ಈ ದಿನ ಸಿದ್ಧನಾಗಿದ್ದೇನೆ. ಹದಿನಾರು ಬಾರಿ ಈ ರಾಜ್ಯದ ಬಜೆಟ್ ಮಂಡನೆ ಮಾಡಲು ಅವಕಾಶ ನೀಡಿರುವ ಕರ್ನಾಟಕದ ಸಮಸ್ತ ಜನತೆಗೆ ನಾನು ಕೃತಜ್ಞ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬುದ್ಧ, ಬಸವ, ಗಾಂಧಿ, ಅಂಬೇಡ್ಕರರ ಆಶಯಗಳಲ್ಲಿ ನಂಬಿಕೆಯನ್ನಿಟ್ಟು, ಅದರಂತೆ ನಡೆಯುತ್ತಿರುವ ನಾವು ಈ ಬಜೆಟ್ ಮೂಲಕ ಸಮಸಮಾಜದ ಕನಸನ್ನು ನನಸಾಗಿಸುವತ್ತ ಮತ್ತಷ್ಟು ದೃಢಹೆಜ್ಜೆಯನ್ನಿಡುವ ಪ್ರಯತ್ನ ಮಾಡಿದ್ದೇವೆ. ಮುಂದಿನ ಒಂದು ವರ್ಷಗಳ‌ ಕಾಲದ ರಾಜ್ಯದ ಸಮಗ್ರ ಅಭಿವೃದ್ಧಿಗೆ ಈ ಬಜೆಟ್ ದಾರಿದೀಪವಾಗಲಿದೆ ಎಂಬುದು ನಿಸ್ಸಂಶಯ ಎಂದು ಹೇಳಿದರು.

2025-26ನೇ ಸಾಲಿನ ರಾಜ್ಯ ಬಜೆಟ್​ ಗಾತ್ರ 4 ಲಕ್ಷ ಕೋಟಿ ರೂಪಾಯಿ ಆಗಿದೆ.

ದೊಡ್ಡಬಳ್ಳಾಪುರ ತಾಲ್ಲೂಕಿನ ಆದಿನಾರಾಯಣ ಹೊಸಹಳ್ಳಿಯ 20 ಎಕರೆ ಪ್ರದೇಶದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕ್ರೀಡಾಂಗಣ ನಿರ್ಮಾಣ ಹಾಗೂ ಸೈಕ್ಲಿಂಗ್ ಕ್ರೀಡೆ ಉತ್ತೇಜನಕ್ಕೆ 5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಸೈಕ್ಲಿಂಗ್ ವೆಲೋಡ್ರೋಮ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!