Categories: ಕೋಲಾರ

ರಾಜ್ಯ ಬಜೆಟ್ ನಲ್ಲಿ ಮಾವು ಬೆಳಗಾರರ ಸಮಸ್ಯೆಗಳಿಗೆ ಒತ್ತು ನೀಡುವಂತೆ ರೈತ ಸಂಘ ಮನವಿ

ಕೋಲಾರ: ಮಾರ್ಚ್-7ರ ರಾಜ್ಯ ಬಜೆಟ್‌ನಲ್ಲಿ ಮಾವು ಬೆಳೆಗಾರರ ಸಮಸ್ಯೆಗಳ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡಿ ಮಾವಿನ ಹಣ್ಣಿಗೆ ಸೂಕ್ತ ಮಾರುಕಟ್ಟೆ ಒದಗಿಸಲು ಹಾಗೂ ಮಾವು ಸಂಸ್ಕರಣ ಘಟಕ ಸ್ಥಾಪಿಸಲು ೩೦೦ ಕೋಟಿ ಅನುದಾನವನ್ನು ಮೀಸಲಿಡಬೇಕೆಂದು ರೈತ ಸಂಘದ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ ಪತ್ರಿಕಾ ಹೇಳಿಕೆ ಮುಖಾಂತರ ಮಾನ್ಯ ಮುಖ್ಯ ಮಂತ್ರಿಗಳನ್ನು ಒತ್ತಾಯಿಸಿದರು.

ನಗರದ ಪುರಸಭೆ ಆವರಣದಲ್ಲಿ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ರವರು ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ಕೋಲಾರ ಜಿಲ್ಲೆಯನ್ನು ಪ್ರತಿ ಬಜೆಟ್‌ನಲ್ಲೂ ನಿರ್ಲಕ್ಷೆ ಮಾಡುತ್ತಿರುವ ಸರ್ಕಾರಗಳ ಮೇಲೆ ಒತ್ತಡ ಹಾಕುವಲ್ಲಿ ಸ್ಥಳೀಯ ಜನ ಪ್ರತಿನಿಧಿಗಳು ವಿಫಲವಾಗಿದ್ದಾರೆಂದು ಆರೋಪ ಮಾಡಿದರು.

ಇಡೀ ದೇಶ ವಿದೇಶಗಳಿಗೆ ಮಾವನ್ನು ನೀಡುವ ಮಾವು ಬೆಳೆಗಾರರ ಸಮಸ್ಯೆಗಳನ್ನು ಗಂಭೀರವಾಗಿ ಸರ್ಕಾರ ಪರಿಗಣಿಸುವಲ್ಲಿ ವಿಫಲವಾಗಿದೆ. ಬೆಲೆ ಕುಸಿತ ರೋಗ, ಮತ್ತಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವ ಜೊತೆಗೆ ಬೆಲೆ ಕುಸಿತವಾದಾಗ ಮಾವನ್ನು ಸಂರಕ್ಷಣೆ ಮಾಡಲು ಸಂಸ್ಕರಣ ಘಟಕಗಳಿಲ್ಲದೆ, ಮಾವನ್ನು ರಸ್ತೆಗಳಲ್ಲಿ ಸುರಿಯಬೇಕಾದ ಪರಿಸ್ಥಿತಿ ಇದ್ದರೂ ಸಮಸ್ಯೆಯನ್ನು ಗಂಭೀರವಾಗಿ ಸರ್ಕಾರ ಪರಿಗಣಿಸಿ ಶಾಶ್ವತ ಪರಿಹಾರ ನೀಡುವಲ್ಲಿ ವಿಫಲವಾಗಿದೆ ಎಂದು ಆಕ್ರೋಷ ವ್ಯಕ್ತಪಡಿಸಿದರು.

ತಾಲ್ಲೂಕು ಅಧ್ಯಕ್ಷರಾದ ತರ‍್ನಹಳ್ಳಿ ಆಂಜಿನಪ್ಪ ಮಾತನಾಡಿ ಕೋಟ್ಯಾಂತರ ರೂಪಾಯಿ ವ್ಯವಹಾರ ನಡೆಯುವ ಮಾವು ಮಾರುಕಟ್ಟೆಗೆ ಸೂಕ್ತವಾದ ಜಾಗವಿಲ್ಲ. ಸಿ.ಸಿ. ಕ್ಯಾಮರಗಳಿಲ್ಲ. ಮೂಲಭೂತ ಸೌಕರ್ಯಗಳಿಲ್ಲದೆ, ಬದುಕುಕಟ್ಟಿಕೊಳ್ಳಲು ಬರುವ ಕಾರ್ಮಿಕರು, ರೈತರು, ವ್ಯಾಪಾರಸ್ಥರು ಆರೋಗ್ಯವಾಗಿ ಬಂದು ಅನಾರೋಗ್ಯ ಪೀಡಿತರಾಗಬೇಕಾದ ಮಟ್ಟಕ್ಕೆ ಮಾರುಕಟ್ಟೆ ಹದಗೆಟ್ಟಿದ್ದರೂ ಸರಿಪಡಿಸದ ತಾಲ್ಲೂಕು ಆಡಳಿತ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು.

ಮಾವು ಬೆಲೆ ಕುಸಿತವಾದಾಗ ಪಸಲನ್ನು ಸಂರಕ್ಷಣೆ ಮಾಡಲು ಮಾವು ಸಂಸ್ಕರಣ ಘಟಕಗಳ ಸ್ಥಾಪನೆಗೆ ಹಾಗೂ ಮಾರುಕಟ್ಟೆಯ ಅಭಿವೃದ್ದಿಗಾಗಿ ರಾಜ್ಯ ಬಜೆಟ್‌ನಲ್ಲಿ ೩೦೦ ಕೋಟಿ ಅನುದಾನವನ್ನು ಬಿಡುಗಡೆ ಮಾಡಿ ಮಾವು ಬೆಳೆಗಾರರ ರಕ್ಷಣೆ ಮಾಡಬೇಕೆಂದು ಒತ್ತಾಯಿಸಿದರು.

ಪತ್ರಿಕಾ ಹೇಳಿಕೆ ನೀಡುವಾಗ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ಆಲವಾಟಿ ಶಿವು, ರಾಜೇಂದ್ರಗೌಡ, ಹೆಬ್ಬಣಿ ಆನಂದರೆಡ್ಡಿ, ಯಲ್ಲಣ್ಣ, ಮಂಗಸಂದ್ರ ತಿಮ್ಮಣ್ಣ, ಗಿರೀಶ್, ಪುತೇರಿ ರಾಜು, ಮುಂತಾದವರು ಇದ್ದರು.

Ramesh Babu

Journalist

Share
Published by
Ramesh Babu

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

2 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

18 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago