ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿಯ ಸದಸ್ಯರ ನೇಮಕಾತಿಗೆ ನಾಮ ನಿರ್ದೇಶನ ಮಾಡುವ ಸಲುವಾಗಿ ಪ್ರಾದೇಶಿಕ ವ್ಯಾಪ್ತಿಯಲ್ಲಿ ಬಾಲ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸಮಾಜ ಸೇವಕರು (ಇಬ್ಬರು), ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ (ಒಬ್ಬರು), ಮಹಿಳಾ ಪ್ರತಿನಿಧಿಗಳು (ಇಬ್ಬರು) ಹಾಗೂ ಅಲ್ಪಸಂಖ್ಯಾತರ ಪ್ರತಿನಿಧಿಗಳು (ಒಬ್ಬರು) ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ಅವರ ವಿವರಗಳನ್ನೊಳಗೊಂಡ ಸೂಕ್ತ ಪ್ರಸ್ತಾವನೆಯನ್ನು ಫೆಬ್ರವರಿ 29 ರ ಸಂಜೆ 4:30 ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕೊಠಡಿ ಸಂಖ್ಯೆ 103-ಎ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿಗೆ ಸೂಕ್ತ ದಾಖಲಾತಿಗಳೊಂದಿಗೆ ಸಲ್ಲಿಸಬಹುದಾಗಿದೆ.
ಷರತ್ತುಗಳು
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಖ್ಯವಾಗಿ ಕೆಲಸ ನಿರ್ವಹಿಸಿದವರಾಗಿರಬೇಕು. ಜಿಲ್ಲೆಯಲ್ಲಿ ಮಕ್ಕಳ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿದವರಾಗಿರಬೇಕು. ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆಯಡಿ ಕಾರ್ಯನಿರ್ವಹಿಸಿದವರಿಗೆ ಪ್ರಥಮ ಆದ್ಯತೆಯನ್ನು ನೀಡಲಾಗುವುದು. ವಿವಿಧ ಇಲಾಖೆಗಳಲ್ಲಿ ಮಕ್ಕಳ ಕ್ಷೇತ್ರಗಳಲ್ಲಿ ಕರ್ತವ್ಯ ನಿರ್ವಹಿಸಿರುವವರು ಮಾತ್ರ ಅರ್ಹರಾಗಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-29569998 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಅಧ್ಯಕ್ಷರಾದ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.