ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿಯ ಸದಸ್ಯರ ನೇಮಕಾತಿಗೆ ಪ್ರಸ್ತಾವನೆ ಸಲ್ಲಿಸಲು ಅವಕಾಶ

ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿಯ ಸದಸ್ಯರ  ನೇಮಕಾತಿಗೆ ನಾಮ ನಿರ್ದೇಶನ ಮಾಡುವ ಸಲುವಾಗಿ ಪ್ರಾದೇಶಿಕ ವ್ಯಾಪ್ತಿಯಲ್ಲಿ ಬಾಲ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸಮಾಜ ಸೇವಕರು (ಇಬ್ಬರು), ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ (ಒಬ್ಬರು), ಮಹಿಳಾ ಪ್ರತಿನಿಧಿಗಳು (ಇಬ್ಬರು) ಹಾಗೂ ಅಲ್ಪಸಂಖ್ಯಾತರ ಪ್ರತಿನಿಧಿಗಳು (ಒಬ್ಬರು) ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ಅವರ ವಿವರಗಳನ್ನೊಳಗೊಂಡ ಸೂಕ್ತ ಪ್ರಸ್ತಾವನೆಯನ್ನು ಫೆಬ್ರವರಿ 29 ರ ಸಂಜೆ 4:30 ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕೊಠಡಿ ಸಂಖ್ಯೆ 103-ಎ, ಜಿಲ್ಲಾಡಳಿತ ಭವನ,  ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ  ಇಲ್ಲಿಗೆ ಸೂಕ್ತ ದಾಖಲಾತಿಗಳೊಂದಿಗೆ ಸಲ್ಲಿಸಬಹುದಾಗಿದೆ.

ಷರತ್ತುಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಖ್ಯವಾಗಿ ಕೆಲಸ ನಿರ್ವಹಿಸಿದವರಾಗಿರಬೇಕು. ಜಿಲ್ಲೆಯಲ್ಲಿ ಮಕ್ಕಳ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿದವರಾಗಿರಬೇಕು. ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆಯಡಿ ಕಾರ್ಯನಿರ್ವಹಿಸಿದವರಿಗೆ ಪ್ರಥಮ ಆದ್ಯತೆಯನ್ನು ನೀಡಲಾಗುವುದು. ವಿವಿಧ ಇಲಾಖೆಗಳಲ್ಲಿ ಮಕ್ಕಳ ಕ್ಷೇತ್ರಗಳಲ್ಲಿ ಕರ್ತವ್ಯ ನಿರ್ವಹಿಸಿರುವವರು ಮಾತ್ರ ಅರ್ಹರಾಗಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-29569998 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಅಧ್ಯಕ್ಷರಾದ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

2 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

4 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

4 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

4 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

9 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

10 hours ago