ರಾಜ್ಯ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆ ವಿಚಾರ: ಪಕ್ಷದಲ್ಲಿ ನಾನು ಅಧ್ಯಕ್ಷನಾಗಬೇಕು ಅಂತ ಸಾಕಷ್ಟು ಜನ ಹಿರಿಯ ನಾಯಕರಿಗೆ ಆಸೆ ಇತ್ತು- ಈ ನಿರ್ಧಾರ ತಪ್ಪು- ಸರಿ ಬಗ್ಗೆ ಚರ್ಚೆ ಮಾಡಬಾರದು- ಮಾಜಿ ಸಚಿವ ಶ್ರೀರಾಮುಲು

ರಾಜ್ಯ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆ ವಿಚಾರವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣದಲ್ಲಿ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಆರ್.ಶ್ರೀರಾಮುಲು, ಪಕ್ಷದಲ್ಲಿ ನಾನು ಅಧ್ಯಕ್ಷನಾಗಬೇಕು ಅಂತ ಸಾಕಷ್ಟು ಜನ ಹಿರಿಯ ನಾಯಕರಿಗೆ ಆಸೆ ಇತ್ತು. ಎಲ್ಲರಿಗೂ ಎಲ್ಲಾ ಸಮಯದಲ್ಲು ಸಮಾಧಾನ ಮಾಡಲು ಆಗಲ್ಲ. ಇಂದು ತೆಗೆದುಕೊಂಡ ನಿರ್ಧಾರ ತಪ್ಪಾ ಸರಿಯಾ ಅನ್ನೋದು ಚರ್ಚೆ ಮಾಡಬಾರದು. ಒಮ್ಮೆ ನಮ್ಮ‌ ಹಿರಿಯ ನಾಯಕರು ತೀರ್ಮಾನ ತೆಗೆದುಕೊಂಡ ಮೇಲೆ ಒಟ್ಟಾಗಿ ಕೆಲಸ ಮಾಡಬೇಕು. ವಿಜಯೇಂದ್ರ ಅವರಿಗೆ ಸಂಪೂರ್ಣ ಸಹಕಾರ ನೀಡಿ ಒಗ್ಗಟ್ಟಾಗಿ ಹೋಗುವ ಕೆಲಸ ನಾವೆಲ್ಲ ಮಾಡುತ್ತೇವೆ ಎಂದರು.

ನಮ್ಮ ನಾಯಕರ ಆದೇಶದ ಮೇರೆಗೆ ಯುವ ನಾಯಕ ಬಿ.ವೈ.ವಿಜಯೇಂದ್ರ ಅವರಿಗೆ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಘೋಷಣೆಯಾಗಿದೆ. ರಾಜ್ಯದ ಜನ ಹಾಗೂ ಬಿಜೆಪಿ ಕಾರ್ಯಕರ್ತರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣದಲ್ಲಿ ಮಾಜಿ ಸಚಿವ ಆರ್.ಶ್ರೀರಾಮುಲು ಪ್ರತಿಕ್ರಿಯೆ ನೀಡಿದರು.

ವಿಜಯೇಂದ್ರ ಅವರನ್ನ ಆಯ್ಕೆ ಮಾಡುವ ಮೂಲಕ ಹೈಕಮಾಂಡ್ ರಾಜ್ಯದ ಯುವಕರಿಗೆ ಸ್ಫೂರ್ತಿ ತುಂಬುವ ಕೆಲಸ ಮಾಡಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಯಡಿಯೂರಪ್ಪ ಅವರಂತೆ ವಿಜಯೇಂದ್ರ ಅವರು ಪಕ್ಷ ಕಟ್ಟುವ ಕೆಲಸ ಮಾಡಬೇಕಿದೆ. ಕಳೆದ ಚುನಾವಣೆಯಲ್ಲಿ ನಮ್ಮಂತೆ ಸಾಕಷ್ಟು ಜನ ಸೋತಿದ್ದಾರೆ. ಹೀಗಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಅವರು ಕೆಲಸ ಮಾಡಬೇಕಿದೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

20 minutes ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

10 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

23 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago