ದೇವನಹಳ್ಳಿಯಲ್ಲಿ ನಡೆದ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಹಾಗು ಪ್ರೌಢಶಾಲೆಗಳ ಬಾಲಕ/ಬಾಲಕಿಯರ 600 ಮೀ. ಓಟದ ಸ್ಪರ್ಧೆಯಲ್ಲಿ 14/17 ವಯೋಮಿತಿಯ ವಿಭಾಗದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಜಿಜಿಎಂಎಸ್ ಶಾಲೆಯ ವಿದ್ಯಾರ್ಥಿನಿ ಅಮೃತಾ ರವಿ ಅಪ್ಪಣ್ಣನವರ್ ಪ್ರಥಮ ಸ್ಥಾನ ಪಡೆಯುವ ಮೂಲಕ ಶಿವಮೊಗ್ಗದಲ್ಲಿ ನ.13ರಿಂದ ನಡೆಯಲಿರುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಇವರ ಸಾಧನೆಗೆ ಶಾಲಾ ದೈಹಿಕ ಶಿಕ್ಷಕರಾದ ಮುಕೇಶ್ ಬಾಬು, ಶಾಲಾ ಸಿಬ್ಬಂದಿಗಳು ಹಾಗು ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.