ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಮಹಿಳಾ ಚೆಸ್ ವಿಭಾಗದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಶಿಕ್ಷಕಿ ಜಯಶ್ರೀ

ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ತುಮಕೂರಿನಲ್ಲಿ ಆಯೋಜನೆ ಮಾಡಲಾಗಿತ್ತು. ಕ್ರೀಡಾಕೂಟದಲ್ಲಿ ವಿವಿಧ ಕ್ರೀಡೆಗಳನ್ನ ಆಯೋಜನೆ‌ ಮಾಡಲಾಗಿತ್ತು. ಈ ಕ್ರೀಡಾಕೂಟದ ಮಹಿಳಾ ಚೆಸ್ ವಿಭಾಗದಲ್ಲಿ ಉತ್ತಮವಾಗಿ ತಮ್ಮ ಆಟದ ಕೌಶಲ್ಯ ಪ್ರದರ್ಶನ ಮಾಡುವ ಮೂಲಕ ಗೆದ್ದು ಬೀಗಿದ ತಾಲ್ಲೂಕಿನ ಅರಳುಮಲ್ಲಿಗೆ ಬಾಗಿಲು ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕಿ ಜಯಶ್ರೀ.

ರಾಜ್ಯಮಟ್ಟದಲ್ಲಿ ಅಭೂತಪೂರ್ವ ಗೆಲುವು ಸಾಧಿಸುವ ಮೂಲಕ ಗೋವಾದಲ್ಲಿ ನಡೆಯುವ ರಾಷ್ಟ್ರಮಟ್ಟದ ಮಹಿಳಾ ಚೆಸ್ ಸ್ಪರ್ಧೆಗೆ ಆಯ್ಕೆ ಆಗಿ ತಾಲೂಕಿಗೆ ಕೀರ್ತಿತಂದಿದ್ದಾರೆ.

ಜಯಶ್ರೀ ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ‌ ಸಾಸಲು ಹೋಬಳಿಯ‌ ಲಿಂಗದವೀರನಹಳ್ಳಿ ಮಜರಾ ಪುಟ್ಟಲಿಂಗಯ್ಯನಪಾಳ್ಯದವರಾಗಿದ್ದು, ಪ್ರಸ್ತುತ ನಗರದ ಅರಳುಮಲ್ಲಿಗೆ ಬಾಗಿಲು ಪ್ರೌಢಶಾಲೆಯಲ್ಲಿ ಸಹಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ರಾಷ್ಟ್ರಮಟ್ಟದ ಚೆಸ್ ವಿಭಾಗಕ್ಕೆ ಆಯ್ಕೆಯಾದ ಶಿಕ್ಷಕಿ ಜಯಶ್ರೀ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಪ್ರಶಂಸನಾ ಪತ್ರ ನೀಡುವ ಮೂಲಕ ಅಭಿನಂದಿಸಿದರು.

ಅದೇರೀತಿ ತಾಲೂಕಿನ ಶಿಕ್ಷಕ ಹಾಗೂ ಸರ್ಕಾರಿ ನೌಕರರ ಸಂಘವೂ ಸಹ ಅಭಿನಂದನೆ ಸಲ್ಲಿಸಿ ರಾಷ್ಟ್ರಮಟ್ಟದಲ್ಲೂ ವಿಜಯಶಾಲಿಯಾಗಲೆಂದು ಶುಭ ಹಾರೈಸಿದ್ದಾರೆ.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

5 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

19 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

24 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 days ago