Categories: ಬೆಳಗಾವಿ

ರಾಜ್ಯ ಮಹಿಳಾ ಹೋರಾಟಗಾರ್ತಿಗೆ ಲವ್, ಸೆಕ್ಸ್, ದೋಖಾ ಆರೋಪ: ನ್ಯಾಯಕ್ಕಾಗಿ ದೋಖಾ ಮಾಡಿದ ಯೋಧನ ಮನೆ ಮುಂದೆ ರಾಜ್ಯ ಮಹಿಳಾ ಹೋರಾಟಗಾರ್ತಿ ಧರಣಿ

ಓರ್ವ ಸೈನಿಕನ ವಿರುದ್ಧ ರಾಜ್ಯ ಮಹಿಳಾ ಹೋರಾಟಗಾರ್ತಿಯೊಬ್ಬರು ಲವ್, ಸೆಕ್ಸ್ ಮತ್ತು ದೋಖಾ ಆರೋಪ ಮಾಡಿ ನ್ಯಾಯಕ್ಕಾಗಿ ಯೋಧನ ಮನೆ ಮುಂದೆ ಹೋರಾಟಗಾರ್ತಿ ಧರಣಿ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ನಗರದ ಮಚ್ಚೆ ಗ್ರಾಮದ ನಿವಾಸಿ ಹೋರಾಟಗಾರ್ತಿ ಪ್ರಮೋದಾ ಹಜಾರೆ ಅವರು ಬಿಜಗರ್ಣಿ ಗ್ರಾಮದ ಯೋಧ ಅಕ್ಷಯ್ ನಲವಡೆ ವಿರುದ್ಧ ವಂಚನೆ ಆರೋಪ ಮಾಡಿದ್ದಾರೆ.

ಆರು ವರ್ಷದ ಹಿಂದೆ ಫೇಸ್ಬುಕ್​ನಲ್ಲಿ ಹೋರಾಟಗಾರ್ತಿ ಪ್ರಮೋದಾ ಹಜಾರೆ ಅವರಿಗೆ ಯೋಧ ಅಕ್ಷಯ್ ನಲವಡೆ ಪರಿಚಯವಾಗಿದ್ದ. ತನಗಿಂತ ಹದಿನಾಲ್ಕು ವರ್ಷ ಮೇಲ್ಪಟ್ಟ ಮಹಿಳೆ ಜೊತೆಗೆ ಪ್ರೀತಿ ಮಾಡಿದ್ದ. ಮದುವೆ ಆಗುವುದಾಗಿ ಹೋರಾಟಗಾರ್ತಿಗೆ ನಂಬಿಸಿದ್ದ. ಆರು ವರ್ಷದ ಹಿಂದೆ ಮನೆಯ ದೇವರ ಕೋಣೆ ಮುಂದೆ ಪ್ರಮೋದಾ ಮತ್ತು ಅಕ್ಷಯ್ ಮದುವೆಯಾಗಿದ್ದರು. ಬಳಿಕ ಆತ ಸೇನೆಯಿಂದ ರಜೆಗೆ ಬಂದಾಗ ಹದಿನೈದು ದಿನಗಳ ಕಾಲ ಪ್ರಮೋದಾ ಬಳಿ ಇರುತ್ತಿದ್ದ ಎನ್ನಲಾಗಿದೆ.

ಇದೇ ವೇಳೆ ಅಕ್ಷಯ್​ಗೆ ಒಂಬತ್ತು ಯುವತಿಯರ ಜೊತೆಗೆ ನಂಟಿರುವುದು ಬೆಳಕಿಗೆ ಬಂದಿದೆ. ಅದನ್ನು ಪ್ರಶ್ನೆ ಮಾಡಿದ ಬಳಕ ಎಲ್ಲರನ್ನೂ ಬಿಟ್ಟು ಹೋರಾಟಗಾರ್ತಿ ಪ್ರಮೋದಾ ಹಜಾರೆ ಜೊತೆಗೆ ಇರುವುದಾಗಿ ಅಕ್ಷಯ್ ಹೇಳಿದ್ದ. ಮೊನ್ನೆ ಅಕ್ಷಯ್ ರಜೆಗೆ ಬಂದಾಗ ಬೇರೊಬ್ಬ ಯುವತಿ ಜೊತೆಗೆ ಎಂಗೇಜ್ಮೆಂಟ್ ಮಾಡಿಕೊಂಡಿದ್ದ ಎನ್ನಲಾಗಿದೆ. ಈ ವಿಚಾರ ಗೊತ್ತಾಗಿ ಪ್ರಮೋದಾ ಅಕ್ಷಯ್ ಮನೆಗೆ ಹೋಗಿದ್ದರು. ಹಿರಿಯರು, ಕುಟುಂಬಸ್ಥರು ಕೂಡಿಕೊಂಡು ಸರಿಪಡಿಸುವುದಾಗಿ ಹೇಳಿ ಕಳಿಸಿದ್ದರು. ಬಳಿಕ ಮದುವೆ ಆಗಲ್ಲ ಎಂದು ಅಕ್ಷಯ್ ಉಲ್ಟಾ ಹೊಡೆದಿದ್ದ.

ಇದೀಗ ಅಕ್ಷಯ್ ಇಂದು ಮದುವೆ ಆಗಿದ್ದಾನೆ ಎಂದು ಆತನ ಮನೆಗೆ ಪ್ರಮೋದಾ ಬಂದಿದ್ದಾರೆ. ಆದರೆ, ಅಕ್ಷಯ್ ಕುಟುಂಬಸ್ಥರು ಮನೆಗೆ ಬೀಗ ಹಾಕಿಕೊಂಡು ಹೋಗಿದ್ದಾರೆ. ಸಾಯುವವರೆಗೂ ಮ‌ನೆ ಮುಂದೆ ಕುಳಿತುಕೊಳ್ಳುತ್ತೇನೆ ಎಂದು ಕಣ್ಣೀರಿಟ್ಟಿದ್ದಾರೆ. ಸಾಕಷ್ಟು ಮಹಿಳೆಯರಿಗೆ ನ್ಯಾಯ ಕೊಡಿಸಿದ್ದೇನೆ ತನ್ನ ನೆರವಿಗೆ ಬರುವಂತೆ ಪ್ರಮೋದಾ ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಬರದ ನಡುವೆ ಜಾನುವಾರುಗಳಿಗೆ ಹಸಿರು ಆಸರೆ: 70 ಎಕರೆಯಲ್ಲಿ ಹಸಿಹುಲ್ಲು ಬೆಳವಣಿಗೆಗೆ ಜಿಪಂ ಕ್ರಮ: ಮತ್ತಷ್ಟು ಸರ್ಕಾರಿ ಜಮೀನು ಹುಲ್ಲುಗಾವಲಾಗಿ ಪರಿವರ್ತನೆ

ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…

6 hours ago

ನಕಲಿ ಔಷಧಿಗಳ ಮಾರಾಟ ಜಾಲದ ಕಿಂಗ್‌ಪಿನ್ ಪ್ರಶಾಂತ್ ಪೊಲೀಸರ ವಶಕ್ಕೆ

ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…

1 day ago

ಒಂದು ವಾರದೊಳಗೆ ಮಳೆಯಾಗದಿದ್ದರೆ ಬಿತ್ತನೆಯಾದ ಬೆಳೆಗೂ ಕುತ್ತು | ರಾಗಿ, ಮೆಕ್ಕೆಜೋಳಕ್ಕೆ ತೇವಾಂಶದ ಕೊರತೆ | ಕೆರೆ-ಕುಂಟೆಗಳು ಖಾಲಿ, ಮೇವಿನ ಕೊರತೆಯ ಆತಂಕ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…

1 day ago

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ  ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…

2 days ago

ಮಹಾಲಯ ಅಮಾವಾಸ್ಯೆ – ಪಿತೃ ಪಕ್ಷ – ಎಡೆ ಹಬ್ಬ….

ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…

2 days ago

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

3 days ago