2024ರ ಜೂನ್ ತಿಂಗಳಲ್ಲಿ ನಡೆಯಲಿರುವ ರಾಜ್ಯದ ಕರ್ನಾಟಕ ರಾಜ್ಯ ವಿಧಾನಪರಿಷತ್ ಪದವೀಧರ, ಶಿಕ್ಷಕರ ಕ್ಷೇತ್ರಗಳ ಚುನಾವಣೆ ಹಿನ್ನೆಲೆ, ರಾಜ್ಯ ವಿಧಾನ ಪರಿಷತ್ ಚುನಾವಣೆ ಉಸ್ತುವಾರಿಗಳನ್ನ ನೇಮಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶಿಸಿದ್ದಾರೆ.
ಒಟ್ಟು ಏಳು ಮಂದಿಯನ್ನ ರಾಜ್ಯ ವಿಧಾನಪರಿಷತ್ ಉಸ್ತುವರಿಗಳನ್ನಾಗಿ ನೇಮಕ ಮಾಡಲಾಗಿದೆ.
1) ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಬಿ.ಶ್ರೀರಾಮುಲು
2) ನೈರುತ್ಯ ಪದವೀಧರ ಕ್ಷೇತ್ರಕ್ಕೆ ಸಿ.ಟಿ ರವಿ
3) ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಆರ್.ಅಶೋಕ್
4) ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಡಿ.ವಿ.ಸದಾನಂದಗೌಡ
5) ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಸಿ.ಟಿ ರವಿ
6) ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಕೆ.ಎಸ್. ಈಶ್ವರಪ್ಪ
7) ಬೆಂಗಳೂರು ಶಿಕ್ಷಕರ ಕ್ಷೇತ್ರ ಸಿ.ಎಸ್.ಅಶ್ವತ್ಥ್ ನಾರಾಯಣ್