ಕೋಲಾರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದ್ದು ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ನಮಗೆ ಅನುದಾನಕ್ಕೆ ಏನು ಕೊರತೆಯಿಲ್ಲ. ಎಷ್ಟೇ ಅನುದಾನ ಬೇಕಾದರೂ ತಂದು ಅಭಿವೃದ್ದಿ ಮಾಡಲು ಬದ್ದರಾಗಿದ್ದೇವೆ ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ತಿಳಿಸಿದರು.
ತಾಲೂಕಿನ ವೇಮಗಲ್-ಕುರಗಲ್ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಬುಧವಾರ ಮುಖ್ಯಮಂತ್ರಿಗಳ ನಗರೋತ್ಥಾನ -4 ರ ಅಡಿಯಲ್ಲಿ ವಿವಿಧ ಕಾಮಗಾರಿಗಳು ಸೇರಿದಂತೆ ಇಂದಿರಾ ಕ್ಯಾಂಟೀನ್ ಗುದ್ದಲಿ ಪೂಜೆ, ಎಸ್ ಎಫ್ ಸಿ ಮುಕ್ತ ನಿಧಿ ಯೋಜನೆಯಲ್ಲಿ 136 ಮಕ್ಕಳಿಗೆ ಸಹಾಯ ಧನ ಹಾಗೂ ಪೌರ ಕಾರ್ಮಿಕರಿಗೆ ಮತ್ತು ಜಲಗಾರರಿಗೆ ಸಮವಸ್ತ್ರ ವಿತರಣೆ ಮಾಡಿ ಮಾತನಾಡಿದ ಅವರು, ನರಸಾಪುರ ಮತ್ತು ವೇಮಗಲ್ ಈಗಾಗಲೇ ಕೈಗಾರಿಕಾ ಪ್ರದೇಶವಾಗಿದ್ದು, ಇಲ್ಲಿ ಹೆಚ್ಚಿನ ಜನಸಂಖ್ಯೆ ಇದೆ. ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತದೆ. ಕ್ಷೇತ್ರದ ಜನರಿಗೆ ಬೆಳಕಾಗುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಕೆಲಸ ಕೊಡುವ ನಮ್ಮ ಉದ್ದೇಶವಾಗಿದೆ ಎಂದರು.
ಜನಸಂಖ್ಯೆಯು ಹೆಚ್ಚಾದಂತೆ ಅಧಿಕಾರಿಗಳಿಗೆ ಕೆಲಸದ ಒತ್ತಡವನ್ನು ಕಡಿಮೆಯಾಗುವಂತೆ ಮಾಡಲು ವೇಮಗಲ್ ನರಸಾಪುರವನ್ನು ಅವಳಿ ಪುರಸಭೆಯಾಗಿ ಮಾಡಿ, ವೇಮಗಲ್ ತಾಲೂಕು ಕೇಂದ್ರವನ್ನಾಗಿ ಮಾಡಲು ಸರಕಾರ ಈಗಾಗಲೇ ಚಿಂತನೆ ನಡೆಸಿದ್ದು, ಆದಷ್ಟು ಶೀಘ್ರವಾಗಿ ಸರಕಾರ ಕಾನೂನು ಪ್ರಕಾರವೇ ಜಾರಿ ಮಾಡಲಿದೆ. ಆಯಾ ಭಾಗದ ಜನರ ಸಮಸ್ಯೆಗಳನ್ನು ಆಲಿಸಲು ಹಾಗೂ ಕುಂದುಕೊರತೆಯನ್ನು ಬಗೆಹರಿಸಲು ವಾರದಲ್ಲಿ ಎರಡು ದಿನ ಗ್ರಾಪಂ ಮಟ್ಟದಲ್ಲಿ ಜನ ಸಂಪರ್ಕ ಸಭೆಗಳನ್ನು ನಡೆಸಿ, ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಅಧಿಕಾರಿಗಳಿಂದ ಉತ್ತರ ಹಾಗೂ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಗ್ರಾಮ ಪಂಚಾಯಿತಿಗಳಿಗೆ ಕೇವಲ ನರೇಗಾದಲ್ಲಿ ಮಾತ್ರ ಅನುದಾನ ಬರುತ್ತದೆ. ಆದರೆ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆಯಾದರೆ ವಿವಿಧ ಮೂಲಗಳಿಂದ ಸರಕಾರಗಳಿಂದ ಅನುದಾನವನ್ನು ಪಡೆಯಬಹುದು. ಈಗಾಗಲೇ ವೇಮಗಲ್-ಕುರಗಲ್ ಪಟ್ಟಣ ಪಂಚಾಯತಿ ಅಭಿವೃದ್ಧಿಗೆ ಸರಕಾರ 20 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಕಂದಾಯ ಸಚಿವ ಕೃಷ್ಣಬೈರೇಗೌಡ ಮುತುವರ್ಜಿಯಿಂದ ಈಗಾಗಲೇ ಸರ್ಕಾರದೊಂದಿಗೆ ಮಾತನಾಡಿ ವೇಮಗಲ್ ತಾಲೂಕು ಕೇಂದ್ರ ಮಾಡಿ ಅಭಿವೃದ್ಧಿಗೆ ಪೂರಕವಾದ ಅಂಶಗಳನ್ನು ತಯಾರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಲಾಗಿದೆ. ಸರ್ಕಾರದಿಂದ ದೊರೆಯುವ ಎಲ್ಲಾ ಯೋಜನೆಗಳನ್ನು ತಲುಪಿಸುವ ಜೊತೆಗೆ ಕ್ಷೇತ್ರದಲ್ಲಿ ಆದ್ಯತೆ ಮೇರೆಗೆ ಮೂಲಸೌಲಭ್ಯಗಳನ್ನು ಕಲ್ಪಿಸಿ ಅಭಿವೃದ್ಧಿಯಲ್ಲಿ ಮಾದರಿಯಾಗುವಂತೆ ಮಾಡುವುದು ಕಾಂಗ್ರೆಸ್ ಸರಕಾರದ ಗುರಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಮಾತನಾಡಿ, ವೇಮಗಲ್ ಪಟ್ಟಣ ಪಂಚಾಯತಿಯಾಗಿ ಎರಡು ವರ್ಷವಾಗಿದ್ದು ಕೆಲವು ಕಾನೂನು ತೊಡಕುಗಳನ್ನು ಸರಿಪಡಿಸಿ ಕೂಡಲೇ ಚುನಾವಣೆ ನಡೆಸಿ ಜನರ ಅಭಿವೃದ್ಧಿಗೆ ಕ್ರಮ ವಹಿಸಬೇಕು. ಸರಕಾರ ಬಂದಾಗಿನಿಂದ ಗ್ಯಾರಂಟಿಗಳು ಜಾರಿಯಲ್ಲಿತ್ತು. ಸಾಮಾನ ಜನರ ದೃಷ್ಟಿಯಿಂದ ಆಡಳಿತ ಸುಧಾರಣೆಯಾಗುವಂತೆ ಮಾಡಬೇಕು ಭವಿಷ್ಯದಲ್ಲಿ ವೇಮಗಲ್ ಹೋಬಳಿಯನ್ನು ತಾಲೂಕು ಮಾಡಿ ಜನರಿಗೆ ಅನುಕೂಲವಾಗುವಂತೆ ಮಾಡಬೇಕು. ಅಭಿವೃದ್ಧಿ ವಿಚಾರದಲ್ಲಿ ಸದಾ ಸರಕಾರ ಮತ್ತು ಜನಪ್ರತಿನಿಧಿಗಳಿಗೆ ಮನವರಿಕೆ ಮಾಡುವುದು ನನ್ನ ಉದ್ದೇಶವಾಗಿದೆ ಎಂದರು.
ಈ ಸಂದರ್ಭದಲ್ಲಿ ವೇಮಗಲ್ ಪಟ್ಟಣ ಪಂಚಾಯತಿ ಆಡಳಿತಾಧಿಕಾರಿ ಹಾಗೂ ತಹಶಿಲ್ದಾರ್ ಹರ್ಷವರ್ಧನ್, ತಾಪಂ ಮಾಜಿ ಅಧ್ಯಕ್ಷರಾದ ಉದಯಶಂಕರ್, ಮುನಿಯಪ್ಪ, ಮುಖಂಡರಾದ ನಾಗನಾಳ ಸೋಮಣ್ಣ, ಗದ್ದೆಕಣ್ಣೂರು ದಯಾನಂದ್, ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ಚಂಜಿಮಲೆ ರಮೇಶ್, ವೆಂಕಟೇಶ್, ಸಿಎಂಎಂ ಮಂಜು, ಖಾಜಿಕಲ್ಲಹಳ್ಳಿ ಮುನಿರಾಜು, ನಾಗರಾಜ್, ಜರೀನ ತಾಜ್, ರವಿಕುಮಾರ್, ಪರ್ಜೇನಹಳ್ಳಿ ನಾಗೇಶ್, ಮುಂತಾದವರು ಇದ್ದರು
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…