ರಾಜ್ಯ ಸರ್ಕಾರದಿಂದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕೋಲಾರ: ಸರ್ಕಾರಿ ಸೇವೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ರಾಜ್ಯ ಸರ್ಕಾರಿ ನೌಕರ ವೃಂದ ಎ, ಬಿ ಮತ್ತು ಸಿ ಗುಂಪಿಗೆ ರಾಜ್ಯ ಸರ್ಕಾರವು ನೀಡುವ ಸರ್ವೋತ್ತಮ ನಾಗರಿಕ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು ಕೂಡಲೇ ಸಂಬಂಧಿಸಿದ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಎ.ಅಜಯ್ ಕುಮಾರ್ ನೌಕರರಲ್ಲಿ ಮನವಿ ಮಾಡಿದ್ದಾರೆ

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿದ ಅವರು 2024 ಮತ್ತು 2025ನೇ ಸಾಲಿನ ಎರಡು ವರ್ಷಗಳ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆಯಲು ತಮ್ಮ ನಾಮ ನಿರ್ದೇಶನಗಳನ್ನು ಏಪ್ರಿಲ್ 14 ರೊಳಗಾಗಿ ಆನ್ಲೈನ್ ಮೂಲಕ ಸಲ್ಲಿಸಲು ಕೋರಿದೆ ಅರ್ಜಿಯನ್ನು ಆನ್ಲೈನ್ ಮೂಲಕ ಮಾತ್ರವೇ ಸಲ್ಲಿಸಬಹುದಾಗಿದೆ ಈ ಮೂಲಕ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ರಾಜ್ಯ ಹಾಗೂ ಜಿಲ್ಲಾ ಮಟ್ಟದ ಪ್ರಶಸ್ತಿಗಳಿಗಾಗಿ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಈ ಸಂಬಂಧ ಸರ್ಕಾರಿ ಆದೇಶವನ್ನು ವೀಕ್ಷಿಸಿ ಪರಿಶೀಲಿಸಬಹುದಾಗಿದೆ ಎಂದು ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಎ.ಅಜಯ್ ಕುಮಾರ್ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *