ರಾಜ್ಯ ಸರ್ಕಾರದ ಖಾಲಿ ಹುದ್ದೆಗಳ ಭರ್ತಿಗೆ ಕಲ್ಲಂಡೂರು ಡಾ‌.ಕೆ ನಾಗರಾಜ್ ಒತ್ತಾಯ

ಕೋಲಾರ: ರಾಜ್ಯ ಸರ್ಕಾರದ 43 ಇಲಾಖೆಗಳಲ್ಲಿ ಸುಮಾರು 2.80 ಲಕ್ಷದಷ್ಟು ಖಾಲಿಯಿರುವ ಸರ್ಕಾರಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಿ ನಿರುದ್ಯೋಗ ಪದವೀಧರರಿಗೆ ಉದ್ಯೋಗ ನೀಡುವಂತೆ ಆಗ್ನೇಯ ಪದವೀಧರ ಕ್ಷೇತ್ರದ ಜೆಡಿಯು ಅಭ್ಯರ್ಥಿ ಹಾಗೂ ಪಕ್ಷದ ಯುವ ಘಟಕದ ರಾಜ್ಯ ಅಧ್ಯಕ್ಷ ಕಲ್ಲಂಡೂರು ಡಾ.ಕೆ ನಾಗರಾಜ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ರಾಜ್ಯಾದ್ಯಂತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ‘ಎ’ ದರ್ಜೆಯ 16,000, ‘ಬಿ’ ದರ್ಜೆಯ 16,000 ‘ಸಿ’ ದರ್ಜೆಯ 1,66,000, ಮತ್ತು ‘ಡಿ’ ದರ್ಜೆಯ 77,000 ಸೇರಿದಂತೆ ಒಟ್ಟು 2.80 ಲಕ್ಷದಷ್ಟು ಹುದ್ದೆಗಳು ಖಾಲಿ ಇವೆ ಎಂದು ಸರ್ಕಾರದ ಅಂಕಿಅಂಶಗಳ ಮೂಲಕವೇ ಬಹಿರಂಗಗೊಂಡಿದ್ದು ಅ ಹುದ್ದೆಗಳಿಗೆ ಭರ್ತಿ ಮಾಡುವ ಜೊತೆಗೆ ಎಲ್ಲಾ ಇಲಾಖೆಗಳಲ್ಲಿನ ಗುತ್ತಿಗೆ ಪದ್ಧತಿಯಲ್ಲಿ ನಿರ್ವಹಿಸುತ್ತಿರುವ ನೌಕರರನ್ನು ಕಾಯಂ ಉದ್ಯೋಗಿಗಳ್ನಾಗಿ ನೇಮಕ ಮಾಡಿಕೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಯಲ್ಲಿ
ಯುವನಿಧಿ ಯೋಜನೆಯನ್ನು ಜಾರಿ ಮಾಡಿದ್ದು ಒಳ್ಳೆಯ ಬೆಳವಣಿಗೆಯಾಗಿದೆ ಆದರೆ ಪದವಿ ಮತ್ತು ಡಿಪ್ಲೋಮಾ ಮುಗಿಸಿದ ನಿರುದ್ಯೋಗಿಗಳಿಗೆ ಮಾತ್ರವಲ್ಲದೆ ಎಲ್ಲಾ ಅರ್ಹ ನಿರುದ್ಯೋಗಿಗಳಿಗೂ ಈ ಯೋಜನೆಯನ್ನು ವಿಸ್ತರಿಸಬೇಕು ಎಷ್ಟೋ ಯುವಕರು ಪದವಿಯನ್ನು ಪಡೆದು ಉದ್ಯೋಗಕ್ಕಾಗಿ ಕಾಯುತ್ತಿದ್ದು ಅವರಿಗೆ ಅವಕಾಶ ಮಾಡಲು ಕೂಡಲೇ ಖಾಲಿ ಹುದ್ದೆಗಳ ನೇಮಕಾತಿಗೆ ಸರ್ಕಾರವು ಮುಂದಾಗಬೇಕು ಎಂದರು.

ರಾಜ್ಯ ಸರಕಾರಿ ನೌಕರರಿಗೆ ನೂತನ ಪಿಂಚಣಿ ಯೋಜನೆಯಿಂದ ಸಾಕಷ್ಟು ತೊಂದರೆಗಳಾಗಿದ್ದು ಕೂಡಲೇ ಎನ್.ಪಿ.ಎಸ್ ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆ( ಒಪಿಎಸ್) ಯನ್ನು ಮರು ಸ್ಥಾಪಿಸುವ ಮೂಲಕ ಸರ್ಕಾರಿ ನೌಕರರ ಹಿತ ಕಾಪಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಕಲ್ಲಂಡೂರು ಡಾ.ಕೆ ನಾಗರಾಜ್ ಒತ್ತಾಯಿಸಿದರು.

Leave a Reply

Your email address will not be published. Required fields are marked *

error: Content is protected !!