ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇ. 38.75 ರಿಂದ ಶೇ. 42.5 ಗೆ ಹೆಚ್ಚಿಸಿ ಮಂಜೂರು ಮಾಡಲು ನಮ್ಮ ಸರ್ಕಾರವು ಹರ್ಷಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಸರ್ಕಾರದ ಮುಂದೆ ಶೇ.4ರಷ್ಟು ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡುವಂತೆ ಬೇಡಿಕೆ ಇಟ್ಟಿತ್ತು. ಕೇಂದ್ರ ಸರ್ಕಾರವು ಶೇ.4ರಷ್ಟು ತುಟ್ಟಿ ಭತ್ಯೆ ಹೆಚ್ಚಿಸಿ, ಜನವರಿ 1ರಿಂದ ಪೂರ್ವಾನ್ವಯವಾಗುವಂತೆ ಆದೇಶ ಹೊರಡಿಸಿತ್ತು. ಅದೇ ರೀತಿ ಕರ್ನಾಟಕದಲ್ಲೂ ತುಟ್ಟಿ ಭತ್ಯೆಯನ್ನು ಜನವರಿ 1ರಿಂದ ಪೂರ್ವಾನ್ವಯವಾಗುವಂತೆ ಶೇ. 4 ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರಕ್ಕೆ ನೌಕರರ ಸಂಘ ಪತ್ರ ಬರೆದು ಮನವಿ ಮಾಡಿತ್ತು.
ಈ ಹಿನ್ನೆಲೆ ಪ್ರಸ್ತುತ ಮೂಲ ವೇತನದ ಶೇ. 38.75 ರಿಂದ ಶೇ. 42.5 ಗೆ ಹೆಚ್ಚಿಸಿ ಮಂಜೂರು ಮಾಡಲು ನಿರ್ಧಾರ ಮಾಡಿದೆ.