ರಾಜ್ಯ ಸರ್ಕಾರ ಕಾಣೆಯಾಗಿದೆ: ಸಿಎಂ ಹಾಗೂ ಸಚಿವರನ್ನು ಹುಡುಕಿಕೊಡಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ನರೇಂದ್ರ ಮೋದಿಯವರು ಮೂರನೇ ಬಾರಿ ಪ್ರಧಾನಿಯಾದ ಒಂದು ತಿಂಗಳಲ್ಲಿ ಕಾಂಗ್ರೆಸ್ ದೇಶಾದ್ಯಂತ ಇಬ್ಬಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.

ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕರ್ನಾಟಕದ ಇತಿಹಾಸದಲ್ಲಿ ಇಷ್ಟು ದೊಡ್ಡ ನಾಟಕ ಮಾಡುವ ಸರ್ಕಾರ ಇನ್ನೊಂದಿಲ್ಲ.‌ ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆದ ಮೇಲೆ ತಮ್ಮ ತತ್ವ ಸಿದ್ದಾಂತ ಗಾಳಿಗೆ ತೂರಿ ತಮ್ಮ ಸ್ಥಾನ ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದ್ದಾರೆ ಎಂದು ಹೇಳಿದರು.

ಅನ್ಯಾಯಕ್ಕೆ ಸಿದ್ದರಾಮಯ್ಯ ಕಾರಣ

ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ಆರಂಭವಾಗಿಲ್ಲ. ಬರಗಾಲ ಬಿದ್ದಿದೆ  ಬರ ಪರಿಹಾರ ನೀಡಿಲ್ಲ. ಯಾವ ನೈತಿಕತೆ ಇಟ್ಟುಕೊಂಡು ದೆಹಲಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ‌. ನಾಚಿಕೆಯಾಗಬೇಕು ಇವರಿಗೆ. ಯುಪಿಎ ಸರ್ಕಾರದ ಅವಧಿಯಲ್ಲಿ ರಾಜ್ಯಕ್ಕೆ ಎಷ್ಟು ಅನುದಾನ ಬಂದಿದೆ. ಎನ್ ಡಿಎ ಅವಧಿಯಲ್ಲಿ ಎಷ್ಟು ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಲಿ, ಯುಪಿಎ ಅವಧಿಯಲ್ಲಿ 82 ಸಾವಿರ ಕೋಟಿ ಮಾತ್ರ ಬಂದಿದೆ. ಮೋದಿ ಕಲಾವದಲ್ಲಿ 2.82 ಲಕ್ಷ ಕೋಟಿ ಬಂದಿದೆ. ಎನ್ ಡಿಎ ಅವಧಿಯಲ್ಲಿ ಎರಡು ಲಕ್ಷ ಕೋಟಿ ರೂ ಹೆಚ್ಚಿಗೆ ಬಂದಿದೆ. ರಾಜ್ಯಕ್ಕೆ  ಅನ್ಯಾಯ ಮಾಡಿದವರು ಮನಮೋಹನ್ ಸಿಂಗ್ ಮತ್ತು ಸಿದ್ದರಾಮಯ್ಯ ಎಂದು ವಾಗ್ದಾಳಿ ನಡೆಸಿದರು.

ಮೊದಲು ರಾಜ್ಯಗಳಿಗೆ ಅನುದಾನ ಶೇ 32% ಬರುತ್ತಿತ್ತು. ಮೋದಿಯವರು ಅದನ್ನು  ಶೇ 42% ಹೆಚ್ಚಳ ಮಾಡಿದ್ದಾರೆ. ಹಣಕಾಸು ಆಯೋಗ ಕೇಂದ್ರ ಸರ್ಕಾರಕ್ಕೂ ಸಂಬಂಧ ಇಲ್ಲ. ಅದು ಎಲ್ಲ ರಾಜ್ಯಗಳಿಗೂ ಭೇಟಿ ನೀಡಿ, ಬಡತನ, ಜಸಂಖ್ಯೆ ತಲಾ ಆದಾಯ ಎಲ್ಲವನ್ನು ಪರಿಗಣನೆ ಮಾಡುತ್ತದೆ. 15 ನೇ ಹಣಕಾಸು ಆಯೋಗ ರಾಜ್ಯಕ್ಕೆ ಭೇಟಿ ನೀಡಿದಾಗ ಸಿದ್ದರಾಮಯ್ಯ ಅವರ ಸರ್ಕಾರ ಇತ್ತು. ಆಗ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ತಿಳಿಸಲು ವಿಫಲವಾಗಿದೆ. ರಾಜ್ಯದ ಪಾಲು ಶೇ 4.7 % ದಿಂದ ಶೇ 3.6% ಕ್ಕೆ  ಕಡಿಮೆಯಾಗಲು ಸಿದ್ದರಾಮಯ್ಯ ಅವರೆ  ನೇರ ಕಾರಣ ಎಂದು ವಾಗ್ದಾಳಿ ನಡೆಸಿದರು.

ಮೋದಿಯವರ ಕಾಲದಲ್ಲಿ ಆಯುಷ್ಮಾನ್ ಭಾರತ ಯೋಜನೆ ಅಡಿಯಲ್ಲಿ 60 ಲಕ್ಷ ಜನರಿಗೆ ಆರೋಗ್ಯ ಸೌಲಭ್ಯ ಪಡೆದಿದ್ದಾರೆ. ಮುದ್ರಾ ಯೋಜನೆ ಅಡಿಯಲ್ಲಿ 60 ಲಕ್ಷ ಯುವಕರಿಗೆ ಬ್ಯಾಂಕ್ ಸಾಲ ನೀಡಿದ್ದಾರೆ. ಸ್ಮಾರ್ಟ್ ಸಿಟಿ ಯೋಜನೆಗಳನ್ನು ಮೊದಿ ಸರ್ಕಾರ ನೀಡಿದೆ. ಕಾಂಗ್ರೆಸ್ ‌ಕಾಲದಲ್ಲಿ 85 ಕಿ. ಮೀ ರೈಲ್ವೆ ವಿದ್ಯುದೀಕರಣ ಆಗಿತ್ತು. ನಮ್ಮ ಅವಧಿಯಲ್ಲಿ 3500 ಕಿ. ಮೀ ರೈಲ್ವೆ ವಿದ್ಯುದೀಕರಣ ಆಗಿದೆ. ರಾಷ್ಟ್ರೀಯ ಹೆದ್ದಾರಿ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ 65 ವರ್ಷದಲ್ಲಿ 6500 ಕೀ. ಮೀ ಅಭಿವೃದ್ಧಿ ಮಾಡಲಾಗಿತ್ತು. ನಮ್ಮ ಮೊದಿ ಅವರ ಅವಧಿಯಲ್ಲಿ 13000 ಕಿ.ಮೀ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪಡೆಸಿದ್ದಾರೆ‌. ರಾಜ್ಯಕ್ಕೆ ಅನ್ಯಾಯ ಮಾಡಿದ್ದು ಮನಮೊಹನ್ ಸಿಂಗ್ ಸರ್ಕಾರ. ಕೊವಿಡ್ ಸಮಯದಲ್ಲಿ ಮೋದಿ ಸರ್ಕಾರದಲ್ಲಿ ರಾಜ್ಯಕ್ಕೆ 10 ಕೋಟಿ ಲಸಿಕೆ ನೀಡಿದ್ದಾರೆ. ಒಂದು ವೇಳೆ ಆ ಸಮಯದಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ರಸ್ತೆಯಲ್ಲಿ ಹೆಣ ಬೀಳುತ್ತಿದ್ದವು ಎಂದು ಹೇಳಿದರು.

ಕೃಷ್ಣಾ3 ನೇ ಹಂತದ ಯೊಜನೆಗೆ ನಾವು ಚಾಲನೆ ಕೊಟ್ಡಿದ್ದೇವೆ. ಅದನ್ನು ಸಿದ್ದರಾಮಯ್ಯ ಮುಂದುವರೆಸಿಲ್ಲ. ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಸ್ಥಗಿತಗೊಳಿಸಿದ್ದಾರೆ‌. ಕೇಂದ್ರ ಸರ್ಕಾರ ಭದ್ರಾ ಯೋಜನೆಗೆ ಬಜೆಟ್ ನಲ್ಲಿ ಮೀಸಲಿಟ್ಟಿರುವ 5300 ಕೋಟಿ ರೂ. ಹಣವನ್ನು ಪಡೆಯಲು ಸರಿಯಾದ ರೀತಿಯಲ್ಲಿ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿಲ್ಲ. ಕಾವೇರಿ ಕೊಳ್ಳದ ಯೋಜನೆಗಳು ಸ್ಥಗಿತವಾಗಿವೆ. ನಾವು ಪ್ರವಾಹ ಬಂದಾಗ ನೇರವಾಗಿ ರೈತರ ಅಕೌಂಟ್ ಗೆ ಹಣ ವರ್ಗಾವಣೆ ಮಾಡಿದ್ದೇವೆ. ಯಾವ ಸರ್ಕಾರ ರೈತರು, ಮಹಿಳೆಯರು, ಬಡವರ ಕಷ್ಟಕ್ಕೆ ಸ್ಪಂದಿಸುವುದಿಲ್ಲವೋ ಅದು ಇದ್ದೂ ಸತ್ತಂತೆ. ಸಿದ್ದರಾಮಯ್ಯನವರೇ ನಿಮ್ಮ ಸರ್ಕಾರದ ಇತರ ಇಲಾಖೆಗಳಲ್ಲಿ ಏನು ನಡೆಯುತ್ತಿದೆ ಎಂದು ನೋಡಿ, ಕೇವಲ ವರ್ಗಾವಣೆ ದಂಧೆ ಮಾಡಿಕೊಂಡು ತಿರುಗಾಡುತ್ತಿದ್ದೀರಾ ಎಂದು ಆರೋಪಿಸಿದರು.

ಖಜಾನೆ ತುಂಬಿದ್ದರೆ ಬರ ಪರಿಹಾರಕೊಡಿ

ಶಾಸಕರ ಅನುದಾನ ಕೂಡ ಬಿಡುಗಡೆ ಮಾಡಿಲ್ಲ. ಕಾಂಗ್ರೆಸ್ ಶಾಸಕರಿಗೂ 25 ಕೋಟಿ ರೂ. ಹಣ ನೀಡುತ್ತೇವೆ ಎಂದು ಅವರಿಗೂ  ಅನ್ಯಾಯ ಮಾಡುತ್ತಿದ್ದಾರೆ. ಖಜಾನೆ ತುಂಬಿದ್ದರೆ ರೈತರಿಗೆ ಬರ ಪರಿಹಾರ ಕೊಡಿ, ಕಲ್ಯಾಣ ಕರ್ನಾಟಕಕ್ಕೆ 3000 ಕೋಟಿ ಬಿಡುಗಡೆ ಮಾಡಲು ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ. ಆದರೆ, ಅದನ್ನು ಬಿಡುಗಡೆ ಮಾಡಿಲ್ಲ. ಮೋದಿಯವರು ರಾಜ್ಯಕ್ಕೆ ಸ್ಮಾರ್ಟ್ ಸಿಟಿ, ಹೈವೆ, ರೈಲ್ವೆ, ಕೈಗಾರಿಕೆಗಳನ್ನು ನೀಡಿದ್ದಾರೆ. ಮೋದಿಯವರು ಪ್ರಧಾನಿ ಯಾಗಿದ್ದಾಗ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುವುದು ಇವರ ಪುಣ್ಯ. ಮನಮೋಹನ್ ಸಿಂಗ್ ಸರ್ಕಾರ ಇದ್ದಿದ್ದರೆ ನಿಮಗೆ ಚಿಪ್ ಕೊಡುತ್ತಿದ್ದರು ಎಂದರು.

ರಾಜೀನಾಮೆ ನೀಡಲಿ

ರಾಜ್ಯ ಖಜಾನೆ ಖಾಲಿ ಮಾಡಿ ಜನರಿಗೆ ಸುಳ್ಳು ಹೇಳಿ ದೆಹಲಿಗೆ ಶೋಕಿ‌ಮಾಡಲು ಕಾಂಗ್ರೆಸ್ ನಾಯಕರು ಹೋಗಿದ್ದಾರೆ. ರಾಜ್ಯಕ್ಕೆ ಅನ್ಯಾಯ ಮಾಡಿರುವ ಕಾಂಗ್ರೆಸ್ ‌ಸರ್ಕಾರ. ರಾಜಿನಾಮೆ ನೀಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ  ಅಧಿಕಾರದಲ್ಲಿ ಇರಲು ನೈತಿಕತೆ ಇಲ್ಲ. ಮಹಾತ್ಮಾ ಗಾಂಧಿ ಫೊಟೊ ಹಾಕಿಕೊಂಡು ಜಾಹಿರಾತು ನೀಡಿ ಗಾಂಧಿಗೂ ಅವಮಾನ ಮಾಡಿದ್ದಾರೆ ಎಂದು ಹೇಳಿದರು.

ಸಿಎಂ, ಮಂತ್ರಿಗಳನ್ನು ಹುಡುಕಿಕೊಡಿ

ವಿಧಾನಸೌಧ ಸಂಪೂರ್ಣ ಖಾಲಿಯಾಗಿದ್ದು, ಸರ್ಕಾರ ಖಾಣೆಯಾಗಿದೆ. ಸಿಎಂ, ಮಂತ್ರಿಗಳನ್ನು ಹುಡುಕಿಕೊಡಿ ಎಂದು ವಾರೆಂಟ್ ಹೊರಡಿಸಬೇಕು ಎಂದು ಇದೇ ಬೊಮ್ಮಾಯಿ ಹೇಳಿದರು.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

8 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

11 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

11 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

12 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

13 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

18 hours ago