ರಾಜ್ಯ ಸರ್ಕಾರ ಭಿಕ್ಷೆ ಪಾತ್ರೆಯನ್ನು ಇಟ್ಟುಕೊಂಡಿದೆ. ಭಿಕ್ಷೆ ಬೇಡೋದನ್ನ ಬಿಟ್ಟು ಬೇರೇನು ಮಾಡ್ತಿಲ್ಲ ಅವರು. ಏಕೆಂದರೆ, ಅವರ ಖಜಾನೆ ಖಾಲಿಯಾಗಿದೆ.. ಮೆಟ್ರೋ ದರವನ್ನ ಹೆಚ್ಚು ಮಾಡಿ ಎಂದು ರೈಲ್ವೆ ಇಲಾಖೆಗೆ ಪತ್ರ ಬರೆದಿದ್ದು ಯಾರು…? ನಮ್ಮ ಕೈಯಲ್ಲಿ ಮೆಟ್ರೋವನ್ನ ಸುಧಾರಣೆ, ನಿರ್ವಹಣೆ ಮಾಡೋದಕ್ಕೆ ಆಗ್ತಿಲ್ಲ ಎಂದು ಕೇಂದ್ರಕ್ಕೆ ಪತ್ರ ಬರೆದಿದ್ದು ರಾಜ್ಯ ಸರ್ಕಾರ ಅಲ್ವಾ….? ದರ ಹೆಚ್ಚಿಗೆ ಮಾಡೋದು ಬೇಡ ಎಂತಾ ನಾವು ಕೇಂದ್ರಕ್ಕೆ ಹೇಳ್ತೀವಿ..ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದರು.
ಕೆಎಂಎಫ್ ಮತ್ತು ಬೆಂಗಳೂರು ಹಾಲು ಒಕ್ಕೂಟ(ಬಮೂಲ್) ಮತ್ತು ಕೊನಘಟ್ಟ ಹಾಲು ಉತ್ಪಾದಕರ ಸಹಕಾರ ಸಂಘ, ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿ ನಿನ್ನೆ (ಭಾನುವಾರ) ತಾಲ್ಲೂಕು ಮಟ್ಟದ ಅಧಿಕ ಹಾಲು ಕರೆಯುವ ಸ್ಪರ್ಧೆಯನ್ನು ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ವಿಬಿ–ಜಿ ರಾಮ್-ಜಿ ಯೋಜನೆಯಡಿಯಲ್ಲಿ 40% ಹಣದಿಂದ ಗ್ರಾಮೀಣ ಕರ್ನಾಟಕ ಅಭಿವೃದ್ಧಿ ಮಾಡಬೇಕು ಎಂದು ಹೇಳ್ತೀರಾ… ಅದಕ್ಕೂ ಹಣ ಇಲ್ಲ ನಿಮ್ಮ ಹತ್ರ… ಈ ಯೋಜನೆಯಲ್ಲಿ ಪಾರದರ್ಶಕತೆ, ಭ್ರಷ್ಟಾಚಾರ ನಿಗ್ರಹ ಮಾಡಿ, ತಂತ್ರಜ್ಞಾನ ಬಳಸಿ ಅಭಿವೃದ್ಧಿ ಮಾಡಲು ವಿಬಿ–ಜಿ ರಾಮ್-ಜಿ ಕಾಯ್ದೆ ತಂದಿದ್ದೇವೆ. ಅದಕ್ಕೆ ಕಾಂಗ್ರೆಸ್ ನವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ…ಎಂದರು.
ನರೇಗಾದಲ್ಲಿ ಮಹಾತ್ಮ ಗಾಂಧಿ ಅವರ ಹೆಸರಲ್ಲಿ ವ್ಯಾಪಕ ಭ್ರಷ್ಟಾಚಾರ ಆಗ್ತಾ ಇತ್ತು. ಇದನ್ನ ತಡೆಹಿಡಿಯಲು ವಿಬಿ–ಜಿ ರಾಮ್-ಜಿ ಕಾಯ್ದೆ ಜಾರಿ ಮಾಡಿದ್ದೇವೆ. ಅದಕ್ಕೆ ಅವರು ಸ್ವಾಗತ ಮಾಡಬೇಕಿತ್ತು. ಈ ವರ್ಷ ಅವರು 8 ಲಕ್ಷ ಕೋಟಿಗೂ ಹೆಚ್ಚು ಸಾಲ ಮಾಡಿದ್ದಾರೆ…ಕಳೆದ ಎರಡೂವರೆ ವರ್ಷದಲ್ಲಿ ಪ್ರತಿ ವರ್ಷ ಒಂದು ಲಕ್ಷ ಕೋಟಿ ಸಾಲ ಮಾಡಿದ್ದಾರೆ.. ಈ ರಾಜ್ಯದ ಆರ್ಥಿಕ ಶಿಸ್ತನ್ನು ಸಂಪೂರ್ಣ ಹಾಳು ಮಾಡಿದ್ದಾರೆ. ಎಸ್ ಎಂ ಕೃಷ್ಣಾ ರವರು ಮುಖ್ಯಮಂತ್ರಿಗಳಾಗಿದ್ದಾಗ ಇಡೀ ದೇಶದಲ್ಲಿ ಮೊದಲ ಬಾರಿಗೆ ವಿತ್ತಿಯ ಜವಾಬ್ದಾರಿ ಹೊಣಗಾರಿಕೆ ಕಾಯ್ದೆಯನ್ನು ಜಾರಿಗೆ ತಂದಿದ್ದರು. ನಮ್ಮ ರಾಜ್ಯ ದೇಶಕ್ಕೆ ಮಾದರಿಯಾಗಿತ್ತು. ಆದರೆ, ಈಗಿನ ಸರ್ಕಾರ ಅದರ ಪ್ರಕಾರ ನಡೆದುಕೊಳ್ಳುತ್ತಿಲ್ಲ ಎಂದು ಹೇಳಿದರು.
ರೈತರ ಮಕ್ಕಳಿಗೆ ಸ್ಕಾಲರ್ ಶಿಪ್ ಕೊಡುವ ವಿದ್ಯಾಸಿರಿ ಯೋಜನೆಯನ್ನ ನಿಲ್ಲಿಸಿದ್ದಾರೆ. ಹಾಲಿನ ದರ ಹೆಚ್ಚಿಗೆ ಮಾಡಿಲ್ಲ. ರೈತರು ಸಂಕಷ್ಟದಲ್ಲಿದ್ದಾರೆ. ಸರ್ಕಾರ ರೈತರಪರ ಕಾಳಜಿ ವಹಿಸಿ ಅವರ ಅಗತ್ಯತೆಗಳನ್ನು ಪೂರೈಸಬೇಕು ಎಂದು ಒತ್ತಾಯಿಸಿದರು..
ಈ ವೇಳೆ ಶಾಸಕ ಧೀರಜ್ ಮುನಿರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು..
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…