ರಾಜ್ಯ ಸಿವಿಲ್ ಸೇವಾ ಹುದ್ದೆಗಳಿಗೆ ನೇರ ನೇಮಕಾತಿ

ರಾಜ್ಯ ಸರ್ಕಾರದ ಎಲ್ಲಾ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಹಲವಾರು ಜನಪ್ರತಿನಿಧಿಗಳು,ಸಂಘ ಸಂಸ್ಥೆಗಳು ಸಲ್ಲಿಸಿದ ಮನವಿ ಪರಿಗಣಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಅನುಮೋದನೆಯೊಂದಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಇಂದು ಆದೇಶ ಪ್ರಕಟಿಸಿದೆ.

ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಯಾಗುವವರೆಗೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಅಥವಾ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಮುಂದಿನ ಆದೇಶದವರೆವಿಗೂ ಹೊರಡಿಸಬಾರದೆಂದು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಲಾಗಿತ್ತು.

ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಅಗತ್ಯ ಮಾರ್ಪಾಡುಗಳೊಂದಿಗೆ ಅಂಗೀಕರಿಸಿ, ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗಳನ್ನು 5 ಪ್ರವರ್ಗಗಳ ಬದಲಾಗಿ ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು 3 ಪ್ರವರ್ಗಗಳಾಗಿ ವರ್ಗೀಕರಿಸಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಶೇಕಡ 17 ರಷ್ಟು ಮೀಸಲಾತಿಯನ್ನು ಪ್ರವರ್ಗ- ಎರಲ್ಲಿನ ಸಮುದಾಯಗಳಿಗೆ ಶೇಕಡ 6 ರಷ್ಟು, ಪ್ರವರ್ಗ-ಬಿ ರಲ್ಲಿನ ಸಮುದಾಯಗಳಿಗೆ ಶೇಕಡ 6 ರಷ್ಟು ಮತ್ತು ಪ್ರವರ್ಗ – ಸಿ ರಲ್ಲಿನ ಸಮುದಾಯಗಳಿಗೆ ಶೇಕಡ 5 ರಷ್ಟು ನಿಗದಿಪಡಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿರುತ್ತದೆ.

ಈ ಹಿಂದೆ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆ ಬಯಸಿ ಅರ್ಜಿಗಳನ್ನು ಸಲ್ಲಿಸಿ ಭಾಗವಹಿಸುವ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಗೆ ಕ್ರಮವಾಗಿ 2 ವರ್ಷಗಳ ಸಡಿಲಿಕೆ ನೀಡಲು ತೀರ್ಮಾನಿಸಲಾಗಿರುತ್ತು.

ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one-time measure) 2 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿತ್ತು.

ಆದರೆ ಹಲವಾರು ಜನಪ್ರತಿನಿದಿಗಳು ಮತ್ತು ಸಂಘ ಸಂಸ್ಥೆಗಳು ಮನವಿ ಸಲ್ಲಿಸಿ ರಾಜ್ಯ ಸಿವಿಲ್ ಸೇವೆಗಳಿಗೆ ಮಾಡುವ ನೇರ ನೇಮಕಾತಿಯಲ್ಲಿ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ನೀಡುವಂತೆ ಕೋರಿದ್ದರು.

*ಸದರಿ ಮನವಿಗಳನ್ನು ಸರ್ಕಾರವು ಪರಿಶೀಲಿಸಿ ಒಂದು ಬಾರಿಗೆ ಮಾತ್ರ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ನೀಡಲು* ತೀರ್ಮಾನಿಸಿ, ದಿನಾಂಕ: 06.09.2025ರ ಆದೇಶದ ಹಿಂಪಡೆದು, ಈ ಆದೇಶ ಹೊರಡಿಸಿದ ದಿನಾಂಕದ ನಂತರ ಮುಂದಿನ ದಿನಾಂಕ 31-12-2027 ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one-time measure) 3 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, (ಸೇವಾ ನಿಯಮಗಳು) ಆದೇಶ ಹೊರಡಿಸಿದೆ.

Ramesh Babu

Journalist

Recent Posts

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

2 hours ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

13 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

20 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

23 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

1 day ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

1 day ago