ರಾಜ ಕಾಲುವೆಯಾದ ರೈಲ್ವೆ ಅಂಡರ್ ಪಾಸ್- ಅವೈಜ್ಞಾನಿಕ ಟೋಲ್ ರಸ್ತೆ- ಇದರಿಂದ ಸಾರ್ವಜನಿಕರಿಗೆ ಸಾವು ನೋವಾದ್ರೆ ಜೈಲಿಗೆ ಹೋಗ್ತಿರಾ- ಅಧಿಕಾರಿಗಳಿಗೆ ವಾರ್ನ್ ಮಾಡಿದ ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರ ನಗರದ ರೈಲ್ವೆ ನಿಲ್ದಾಣ ಸಮೀಪದಲ್ಲಿರುವ ರೈಲ್ವೆ ಅಂಡರ್ ಪಾಸ್ ಅವೈಜ್ಞಾನಿಕವಾಗಿ ನಿರ್ಮಾಣವಾಗಿದ್ದು, ಮಳೆ ಬಂದರೆ ಅಂಡರ್ ಪಾಸ್ ತುಂಬಾ ನೀರು ನಿಂತು ಕೆಸರು ಗದ್ದೆ, ಕೆರೆಯಂತಾಗಿ ವಾಹನ ಸವಾರರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗುತ್ತದೆ….‌ ಈ ಹಿನ್ನೆಲೆ ಇಂದು ಶಾಸಕ ಧೀರಜ್ ಮುನಿರಾಜ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಧೀರಜ್ ಮುನಿರಾಜ್, ರೈಲ್ವೆ ಅಂಡರ್ ಪಾಸ್, ಹಿಂದೂಪುರ-ಯಲಹಂಕ ಹೆದ್ದಾರಿ, ನಗರಸಭೆ ಒಳಚರಂಡಿ ಕಾಮಗಾರಿ ಸೇರಿ ಎಲ್ಲಾ ಕಾಮಗಾರಿಗಳು ಅವೈಜ್ಞಾನಿಕವಾಗಿ ನಡೆದಿದ್ದು, ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆ ಆಗುತ್ತಿದೆ. ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯ ಕೆಲಸಗಳಿಂದ ಜನರಿಗೆ ಸಾವು- ನೋವು ಉಂಟಾದರೆ ಅಧಿಕಾರಿಗಳೇ ನೇರ ಹೊಣೆ. ನಿಮ್ಮ ಮೇಲೆ ಎಫ್ ಐಆರ್ ದಾಖಲಿಸಿ ಜೈಲಿಗೆ ಕಳುಹಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಹಿಂದೂಪುರ-ಯಲಹಂಕ ರಾಜ್ಯ ಹೆದ್ದಾರಿಯು ದೊಡ್ಡಬಳ್ಳಾಪುರ ಮೂಲಕ ಹಾದು ಹೋಗುತ್ತದೆ. ಇದು ಟೋಲ್ ರಸ್ತೆ ಆಗಿರುವುದರಿಂದ ಟೋಲ್ ವಸೂಲಾತಿ ದಿನೇ ದಿನೇ ಹೆಚ್ಚಾಗುತ್ತಿದೆ… ಟೋಲ್ ವಸೂಲಿ ಮಾಡುತ್ತಿರುವವರು ರಸ್ತೆ ಅಭಿವೃದ್ಧಿ, ರಸ್ತೆ ದುರಸ್ತಿ, ಎಲ್ಲಾ ಜಂಕ್ಷನ್ ಗಳಲ್ಲಿ ಹೈ-ಮಾಸ್ಟ್ ಲೈಟ್, ಸೂಚನಾ ಫಲಕಗಳು ಸೇರಿದಂತೆ ಇನ್ನಿತರೆ ಸುಗಮ ಸಂಚಾರಕ್ಕೆ ಬೇಕಾಗುವ ಸವಲತ್ತುಗಳನ್ನು ಒದಗಿಸಬೇಕು. ಆದರೆ, ಇದನ್ನು ಯಾವುದೂ ಮಾಡದೇ  ಹಣ ವಸೂಲಿ ಮಾಡಿಕೊಂಡು ತೆಪ್ಪಗಿದ್ದಾರೆ. ಟೋಲ್ ವಸೂಲಿ ಮಾಡುವವರಿಗೆ ಹತ್ತು ವಾರ ಗಡುವು ನೀಡುತ್ತೇನೆ, ಸೂಕ್ತ ರೀತಿಯಲ್ಲಿ ಕೆಲಸ ಮಾಡದಿದ್ದರೆ, ಜುಲೈ ಅಧಿವೇಶನ ನಂತರ ನನ್ನ ಮೇಲೆ ಕೇಸ್ ಆದರೂ ಚಿಂತೆ ಇಲ್ಲ ಟೋಲ್ ವಸೂಲಿಯನ್ನು ನಿಲ್ಲಿಸುತ್ತೇನೆ ಎಂದು ಎಚ್ಚರಿಸಿದರು….

ರೈಲ್ವೆ ನಿಲ್ದಾಣ ಜಂಕ್ಷನ್ ಬಳಿ ಪಿಡಬ್ಲ್ಯೂಡಿ ರಸ್ತೆ, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ(KRDCL) ರಸ್ತೆ, ರೈಲ್ವೆ ರಸ್ತೆ, ನಗರಸಭೆ ರಸ್ತೆ ಹಾದು ಹೋಗುತ್ತವೆ. ಈ ನಾಲ್ಕು ರಸ್ತೆಗಳಿಂದ ಬರುವ ನೀರು ರೈಲ್ವೆ ಅಂಡರ್ ಪಾಸ್ ಬಳಿ ನಿಲ್ಲುತ್ತವೆ. ಇವರಿಗೆ ಅನುಕೂಲಕ್ಕೆ ತಕ್ಕಂತೆ ರಸ್ತೆ ಕಾಮಗಾರಿ ಮಾಡಿಕೊಂಡಿದ್ದಾರೆ. ಇವರು ಮಾಡಿರುವ ರಸ್ತೆಗಳು ವಾಹನ ಸವಾರರು ಸುಗಮವಾಗಿ ಸಂಚರಿಸಲು ಆಗುತ್ತಿಲ್ಲ. ಇದರಿಂದ ವಾಹನ ಸವಾರರಿಗೆ ಕಿರಿಕಿರಿ ಉಂಟಾಗುತ್ತಿದೆ. ಇದಕ್ಕೆ ಶಾಸಕನಾದ ನನಗೆ ಸಾರ್ವಜನಿಕರು ಪ್ರಶ್ನೆ ಕೇಳುತ್ತಿದ್ದಾರೆ. ನಾನು ಯಾರಿಗೆ ಉತ್ತರ ಕೊಡಬೇಕು ಎಂದು ಹೇಳಿದರು.

ಇಲ್ಲಿ ರಸ್ತೆ, ಚರಂಡಿ, ಕಸದ ಸಮಸ್ಯೆ ಸೇರಿದಂತೆ ಇನ್ನಿತರೆ ಸಮಸ್ಯೆಗಳು ತಾಂಡವಾಡುತ್ತಿವೆ. ಸಂಬಂಧಪಟ್ಟ ಇಲಾಖಾಧಿಕಾರಿಗಳ ನಡುವೆ ಸಮನ್ವಯ ಕೊರತೆ ಎದ್ದು ಕಾಣುತ್ತಿದೆ. ತ್ವರಿತವಾಗಿ ಸಂಬಂಧಪಟ್ಟ ಇಲಾಖಾಧಿಕಾರಿಗಳ ಸಭೆ ಕರೆದು ಸಮಸ್ಯೆ ಬಗೆಹರಿಸುವ ಕೆಲಸ ಮಾಡಲಾಗುವುದು ಎಂದರು.

ರೈಲ್ವೆ ಅಂಡರ್ ಪಾಸ್ ಅವೈಜ್ಞಾನಿಕತೆಯಿಂದ ಕೂಡಿದೆ. ಇದರ ಕಾಮಗಾರಿ 2017ರಲ್ಲಿ ಪ್ರಾರಂಭವಾಗಿ 2025ರಲ್ಲಿ ಮುಕ್ತಾಯ ಮಾಡಲಾಗುತ್ತದೆ. ಆದರೆ, ಕಾಮಗಾರಿ ಪರಿಪೂರ್ಣತೆ ಕಂಡಿಲ್ಲ. ಪಾದಚಾರಿಗಳು ಓಡಾಡಲು ಜಾಗವಿಲ್ಲ. ಸ್ಕೈವಾಕ್ ಇಲ್ಲ. ಇಲ್ಲಿ ಓವರ್ ಬ್ರಿಡ್ಜ್ ನಿರ್ಮಾಣಕ್ಕೆ ರೈಲ್ವೆ ಸಚಿವ ವಿ.ಸೋಮಣ್ಣ ಅವರ ಬಳಿ ಮಾತನಾಡಿದ್ದೇನೆ. ಎಳ್ಳುಪುರ, ವೀರಾಪುರ ಬಳಿ ರೈಲ್ವೆ ಬ್ರಿಡ್ಜ್ ನಿರ್ಮಾಣಕ್ಕೂ ಕೇಳಿದ್ದೇವೆ ಎಂದು ಹೇಳಿದರು.

22ಕೋಟಿ ವೆಚ್ಚದಲ್ಲಿ ಗತಿಶಕ್ತಿ ಯೋಜನೆಯಡಿ ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣ ಮೇಲ್ದರ್ಜೆಗೇರಿಸಲಾಗುತ್ತಿದೆ. ಕಾರ್ಗೋ ಟರ್ಮಿನಲ್ ನಿರ್ಮಾಣ‌ ಸಹ ಆಗುತ್ತಿದೆ. ಗೌರಿಬಿದನೂರು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಕ್ಕೆ ಹೊಸ ರೈಲು ಬೇಕು ಎಂದು ರೈಲ್ವೆ ಸಚಿವ ವಿ.ಸೋಮಣ್ಣ ಅವರ ಬಳಿ ಕೇಳಿದ್ದೇವೆ ಎಂದರು…

ಈ ವೇಳೆ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ನಗರಸಭೆ ಸದಸ್ಯ ಪದ್ಮನಾಭ್,‌ ನಗರಸಭೆ ಪೌರಾಯುಕ್ತಾ ಕಾರ್ತೀಕೇಶ್ವರ್, ಟೋಲ್ ಅಧಿಕಾರಿಗಳು, ಪಿಡಬ್ಲ್ಯೂಡಿ ಅಧಿಕಾರಿಗಳು, ನಗರಸಭೆ ಅಧಿಕಾರಿಗಳು, ಎನ್ ಎಚ್ ಎ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು…

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

11 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

12 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

14 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

15 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

17 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

22 hours ago