ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ಕಳ್ಳರ ಹಾವಳಿ ಹೆಚ್ಚಾಗಿದೆ. ಇದರಿಂದ ರೋಗಿಗಳು ಜೀವ ಭಯದಲ್ಲಿ ರಾತ್ರಿ ಕಳೆಯುವಂತಾಗಿದೆ.
ತಡರಾತ್ರಿ ಸುಮಾರು 1ಗಂಟೆ ಸಮಯದಲ್ಲಿ ಅಪರಿಚಿತನೊಬ್ಬ ತಾಯಿ ಮತ್ತು ಮಕ್ಕಳ ವಿಭಾಗಕ್ಕೆ ನುಸುಳಿ ರೋಗಿ ಸಂಬಂಧಿಕನ ಮೊಬೈಲ್ ಹಾಗೂ ಕೊರಳಲ್ಲಿದ್ದ ಸರವನ್ನ ಕದಿಯಲು ಯತ್ನಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ರೋಗಿ ಸಂಬಂಧಿಕ ಮಲಗಿದ್ದನ್ನು ಗಮನಿಸಿದ ಕಳ್ಳ ಮೊದಲು ಕೊರಳಲ್ಲಿದ್ದ ಸರವನ್ನು ಕದಿಯಲು ಯತ್ನಿಸಿದ್ದಾನೆ. ತದನಂತರ ಜೇಬಿನಲ್ಲಿದ್ದ ಮೊಬೈಲ್ ಎಸ್ಕೇಪ್ ಮಾಡಿ ಪರಾರಿಯಾಗುವ ವೇಳೆ ರೋಗಿ ಸಂಬಂಧಿಕನಿಗೆ ಎಚ್ಚರವಾಗಿ ಎದ್ದು ನೋಡಿದಾಗ ಕಳ್ಳನ ಕೈಚಳಕ ಗೊತ್ತಾಗಿದೆ. ಕೂಡಲೇ ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಕಳ್ಳ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕೂಡಲೇ ನನಗೆ ಎದೆ ನೋವು ಇದೆ ಎಂದು ನಾಟಕವಾಡುತ್ತಾ, ನನ್ನ ಜೇಬಿಗೆ ಇವರೇ ಮೊಬೈಲ್ ಇಟ್ಟು ನನ್ನ ಮೇಲೆ ಕಳ್ಳತನದ ಆರೋಪ ಮಾಡುತ್ತಿದ್ದಾರೆ ಎಂದು ತನ್ನ ವರಸೆ ಬದಲಾಯಿಸಿದ್ದಾನೆ ಎನ್ನಲಾಗಿದೆ.
ಕಳ್ಳನ ಈ ಕಳ್ಳಾಟಕ್ಕೆ ಹೆದರದೆ ಪೊಲೀಸರಿಗೆ ಒಪ್ಪಿಸಲಾಗಿದೆ. ನಗರ ಪೊಲೀಸರಿಂದ ತನಿಖೆ ಮುಂದುವರಿದಿದ್ದು. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…