Categories: ತುಮಕೂರು

ರಾತ್ರಿ ವೇಳೆ ವಾಹನಗಳ ಅಡ್ಡಗಟ್ಟಿ ದರೋಡೆ ಮಾಡಲು ಹೊಂಚು ಹಾಕುತ್ತಿದ್ದ 5 ಜನ ಆಸಾಮಿಗಳ ಬಂಧನ

ಫೆ.23ರಂದು ರಾತ್ರಿ ಸುಮಾರು 8-30 ಗಂಟೆಯಲ್ಲಿ ತುಮಕೂರಿನ ತಿಲಕ್‌ಪಾರ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗಸಂದ್ರ ರಸ್ತೆಯಲ್ಲಿ ಯಾರೋ ಕೆಲವು ವ್ಯಕ್ತಿಗಳು ಮಾರಕಾಸ್ತ್ರಗಳನ್ನು ಹಿಡಿದುಕೊಂಡು ರಸ್ತೆಯಲ್ಲಿ ಬರುವ ಜನರನ್ನು ಅಡ್ಡಗಟ್ಟುತ್ತಿದ್ದಾರೆಂದು ತಿಲಕ್‌ಪಾರ್ಕ್ ಪೊಲೀಸ್ ಠಾಣಾ ಪಿ.ಎಸ್.ಐ ರವರಿಗೆ ಬಂದ ಮಾಹಿತಿ ಮೇರೆಗೆ ತತಕ್ಷಣ ಸ್ಥಳಕ್ಕೆ ಹೋಗಿ ಅವರನ್ನೆಲ್ಲಾ ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ವಿಚಾರಣೆ ನಡೆಸಿದಾಗ ಆರೋಪಿತರು ಈ ಹಿಂದೆ ಫೆ.19ರಂದು ರಾತ್ರಿ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಣಿಗಲ್ ಜಂಕ್ಷನ್ ಬಳಿ ರಿಂಗ್ ರಸ್ತೆಯಲ್ಲಿ ಲಾರಿಯನ್ನು ನಿಲ್ಲಿಸಿಕೊಂಡು ಮಲಗಿದ್ದ ಚಾಲಕನಿಗೆ ಚಾಕುವಿನಿಂದ ತಿವಿದು ಆತನ ಬಳಿ ಇದ್ದ ವಡವೆ, ನಗದು ಹಣ ಮತ್ತು ಮೊಬೈಲ್ ಗಳನ್ನು ಸುಲಿಗೆ ಮಾಡಿರುವುದಾಗಿ ಹಾಗೂ ಫೆ.17ರಂದು ತಿಲಕ್‌ ಪಾರ್ಕ ಪೊಲೀಸ್ ಠಾಣೆಯ ವ್ಯಾಪ್ತಿಯ ಗೋವಿಂದನಗರದಲ್ಲಿ ಹೊಸದಾಗಿ ರೈಲ್ವೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಮೊಬೈಲ್ ಫೋನ್‌ಗಳನ್ನು ರೈಲ್ವೆ ಕಾಮಗಾರಿಯ ಉಪಕರಣಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ವಿಚಾರಣೆಯಿಂದ ತಿಳಿದು ಬಂದಿರುತ್ತದೆ.

ಆರೋಪಿಗಳ ಹೆಸರು

1. ಫಯಾಜ್

2. ಮಂಜುನಾಥ @ ಮಂಜ

3. ಅಪ್ರೋಸ್ ಪಾಷ @ ಅಪ್ರೋಸ್

4. ಸುಹೇಲ್ ಪಾಷ @ ವೇಲು

5. ಖಾದ‌ರ್

ಈ ಮೇಲ್ಕಂಡ ಆರೋಪಿತರವರುಗಳಿಂದ 1,20,000/- ರೂ ಬೆಲೆಬಾಳುವ ರೈಲ್ವೆ ಟ್ರ್ಯಾಕ್ ಕಾಮಗಾರಿ ಉಪಕರಣಗಳು. 1,39,600/- ರೂ. ಬೆಲೆಬಾಳುವ 17 ಗ್ರಾಂ 450 ಮಿಲಿ ತೂಕದ ಚಿನ್ನದ ಕೊರಳ ಚೈನು, 2,500/- ರೂಪಾಯಿ ಬೆಲೆಬಾಳುವ 28 ಗ್ರಾಂ 870 ಮಿಲಿ ತೂಕದ ಬೆಳ್ಳಿಯ ಕೈ ಕಡಗ, 3000/- ಬೆಬೆ ಬಾಳುವ ಒಂದು ಕೈಗಡಿಯಾರ ಹಾಗೂ 30,000/- ರೂ ಬೆಲೆ ಬಾಳುವ 6 ಮೊಬೈಲ್ ಪೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

Ramesh Babu

Journalist

Recent Posts

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

3 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

4 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

15 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

19 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

21 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

21 hours ago