ರಾತ್ರೋರಾತ್ರಿ ಮನಗೆ ನುಗ್ಗಿ ಮಹಿಳೆ ಮಕ್ಕಳು ಎನ್ನದೆ ಮನೆಯೊಳಗೆ ನುಗ್ಗಿ ದಾಂಧಲೆ: ಹಲ್ಲೆ ಮಾಡುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆ

ಮನೆ ಮಂದಿ ಎಲ್ಲರು ಊಟ ಮಾಡಿ, ನೆಮ್ಮದಿಯಿಂದ ನಿದ್ದೆಗೆ ಜಾರಿದ್ದರು, ಮಧ್ಯರಾತ್ರಿ ಸುಮಾರು 11 ಆಗುತ್ತಿದ್ದಂತೆ ಮನೆಯ ಬಳಿ ಜೋರಾದ ಶಬ್ಧ ಕೇಳುತ್ತಿತ್ತು, ಸ್ವಲ್ಪ ಸಮಯದ ನಂತರ ಮನೆ ಬಾಗಿಲು ಬಡಿಯಲು ಪ್ರಾರಂಭ ಮಾಡಿದರು, ಯಾರು ಎಂದು ಬಾಗಿಲು ತೆಗದಿದ್ದೇ ತಡ ಮಹಿಳೆ ಮಕ್ಕಳು ಎನ್ನದೇ ಹಲ್ಲೆ ಮಾಡಿದ್ದಾರೆ. ಏಕೆ, ಯಾರಿಂದ, ಯಾರಿಗೆ ಹಲ್ಲೆ ಆಗಿದೆ ಎಂಬ ಕಂಪ್ಲೀಟ್ ವರದಿ ಇಲ್ಲಿದೆ ನೋಡಿ…

ಹೌದು, ಮನೆಯ ಮುಂದೆ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಬಡಿಗೆಗಳು, ಮನೆಯ ತುಂಬೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಬಳೆಯ ಚೂರುಗಳು, ಈ ಎಲ್ಲಾ  ದೃಶ್ಯಗಳು ಕಂಡು ಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮೇಲಿನ ನಾಯಕರಂಡನಹಳ್ಳಿ ಬಳಿ. ಹೌದು ರಾತ್ರಿ ಮಲಗಿದ್ದ‌ ಕುಟುಂಬದ ಮೇಲೆ ಏಕಾಏಕಿ 20ಕ್ಕೂ ಹೆಚ್ಚು ಜನರು ಮನೆಗೆ ನುಗ್ಗಿ ಮನಸ್ಸೋಯಿಚ್ಚೆ ಹಲ್ಲೆ‌ ಮಾಡಿದ್ದಾರೆ.  ಗೋಪಾಲ್ ನಾಯಕ್ ಎಂಬ ವ್ಯಕ್ತಿ ಗುಂಪು ಕಟ್ಟಿಕೊಂಡು ಏಕಾಏಕಿ ಅಶ್ವತಮ್ಮ ಮತ್ತು ಸುಬ್ರಮಣಿ ಎಂಬುವವರ ಮೇಲೆ ಹಲ್ಲೆ ಮಾಡಿದ್ದಾರೆ.

ಇನ್ನೂ, ಇವರಿಬ್ಬರ ಜಗಳಕ್ಕೆ ಕಾರಣವಾಗಿದ್ದು ಜಮೀನಿಗೆ ಓಡಾಡುವ ರಸ್ತೆಯ ವಿಚಾರಕ್ಕೆ. ಗೋಪಾಲ್  ನಾಯಕ್ ಅವರ ಜಮೀನಿಗೆ ರಸ್ತೆ ಸಮಸ್ಯೆಯಿದ್ದು, ಸುಮಾರು ದಿನಗಳಿಂದ ವ್ಯಾಜ್ಯ ನಡೆಯುತ್ತಿತ್ತು. ಈ ಹಿಂದೆಯೂ ಕೂಡ ಇದೇ ವಿಚಾರಕ್ಕೆ ದೂರು ಕೂಡ ದಾಖಲಾಗಿತ್ತು. ಇದೇ ದ್ವೇಷವನ್ನು ಇಟ್ಟುಕೊಂಡು ಈಗ ರಾತ್ರೋರಾತ್ರಿ ಮನೆಗೆ ನುಗ್ಗಿ ದೌರ್ಜನ್ಯವನ್ನು ಮಾಡುತ್ತಿದ್ದಾರೆ ಎನ್ನಲಾಗಿದೆ. ಮಹಿಳೆ ಮಕ್ಕಳು ಎನ್ನದೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ಸ್ಥಳ ಪರಿಶೀಲನೆ ಮಾಡಿದ್ದಾರೆ. ಗಲಾಟೆಯಿಂದಾಗಿ ಅಶ್ವತಮ್ಮ ಮತ್ತು ಸುಬ್ರಮಣಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಒಟ್ಟಾರೆ ಕೂತು ಮಾತನಾಡಿಕೊಂಡು ಬಗೆ ಹರಿಸಿಕೊಳ್ಳಬಹುದಾದ ಸಮಸ್ಯೆಗೆ, ಜಗಳ ಮಾಡಿಕೊಂಡು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

Ramesh Babu

Journalist

Recent Posts

ತಹಶೀಲ್ದಾರ್‌ ಕಚೇರಿಗೆ ಶಾಸಕ ಕೊತ್ತೂರು ಮಂಜುನಾಥ್‌ ದಿಢೀರ್‌ ಭೇಟಿ: ಅಧಿಕಾರಿಗಳಿಗೆ ತರಾಟೆ, ತ್ವರಿತವಾಗಿ ಕಡತ ವಿಲೇವಾರಿಗೆ ಸೂಚನೆ

ಕೋಲಾರ: ಶಾಸಕ ಕೊತ್ತೂರು ಮಂಜುನಾಥ್‌ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್‌ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ…

2 hours ago

ಅಂತರ್ಜಲ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿತ: ಒಂದು ತಿಂಗಳಲ್ಲಿ 1.15 ಮೀ. ನೀರಿನ ಮಟ್ಟ ಕುಸಿತ: ಬೋರ್‌ವೆಲ್‌ಗಳು ಬರಿದಾದ ನೀರು: ರೈತ ಕಂಗಾಲು

ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ‌. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ‌. ವರ್ಷದಿಂದ ವರ್ಷಕ್ಕೆ ಏರುತ್ತಿರುವ…

4 hours ago

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

10 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

11 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

13 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

22 hours ago