ರಾತ್ರೋರಾತ್ರಿ ರೈಲ್ವೆ ಸಾಮಾಗ್ರಿಗಳ ಕಳವು ಯತ್ನ: ಕಳವು ವೇಳೆ ಸಿಕ್ಕಿಬಿದ್ದ ಖದೀಮರು: ಕಳ್ಳತನ ಕೃತ್ಯ ಸೆರೆ ಹಿಡಿದ ಸೆಕ್ಯುರಿಟಿ ಗಾರ್ಡ್

ನಗರದ ರೈಲ್ವೆ ನಿಲ್ದಾಣದ ರೈಲ್ವೆ ಅಂಡರ್ ಪಾಸ್ ಬಳಿ ರೈಲ್ವೆ ಸಾಮಾಗ್ರಿಗಳನ್ನ ಕದಿಯಲು ಕಳ್ಳರು ಮುಂದಾಗಿದ್ದರು. ರಾತ್ರಿ ಪಾಳಿಯಲ್ಲಿದ್ದ ಸೆಕ್ಯೂರಿಟಿ ಗಾರ್ಡ್ ಕಳ್ಳರ ಕೃತ್ಯವನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿದಲ್ಲದೆ ಕಳ್ಳರನ್ನ ರೆಡ್ ಹ್ಯಾಂಡಾಗಿ ಹಿಡಿದು ಪೊಲೀಸ್ ವಶಕ್ಕೆ ನೀಡಿದ್ದಾರೆ.

ಆಗಸ್ಟ್ 22 ರಾತ್ರಿ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಸದ್ಯ ಇಬ್ಬರು ಕಳ್ಳರು ದೊಡ್ಡಬಳ್ಳಾಪುರ ನಗರ ಪೊಲೀಸರ ವಶದಲ್ಲಿದ್ದು ವಿಚಾರಣೆ ಮಾಡಲಾಗುತ್ತಿದೆ, ಕೆ.ಆರ್ ಪುರಂನ ಎಂ.ವಿ ಕನ್ಟ್ರಕ್ಷನ್ ರೈಲ್ವೆ ಅಂಡರ್ ಪಾಸ್ ಕಾಮಾಗಾರಿಯನ್ನ 9 ತಿಂಗಳಿಂದ ಮಾಡುತ್ತಿದ್ದು, ಕಳೆದ 3 ತಿಂಗಳಿನಿಂದ ಕಾಮಾಗಾರಿಯ ಸ್ಥಳದಲ್ಲಿ ಕಬ್ಬಿಣದ ಕಂಬಿಗಳು ಮತ್ತು ಮೋಲ್ಡ್ ಶೀಟ್ ಗಳ ಕಳ್ಳತನವಾಗುತ್ತಿತ್ತು, ಗುತ್ತಿದಾರರಾದ ರಾಮ್ ಬಾಬು ಕಳ್ಳರಿಗೆ ಕಡಿವಾಣ ಹಾಕಲು ಕಾಮಾಗಾರಿ ಸ್ಥಳದಲ್ಲಿ ಸೆಕ್ಯೂರಿಟಿ ಗಾರ್ಡ್ ಗಳನ್ನ ನಿಯೋಜನೆ ಮಾಡಿದ್ದರು.

ಆಗಸ್ಟ್ 22 ರಾತ್ರಿ 2 ಗಂಟೆ ಸಮಯದಲ್ಲಿ ಟೆಂಪೋದಲ್ಲಿ ಇಬ್ಬರು ಕಳ್ಳರು ಬಂದಿದ್ದಾರೆ, ಕಾಮಾಗಾರಿ ಸ್ಥಳದಲ್ಲಿ ಟೆಂಪೋ ನಿಲ್ಲಿಸಿದ ಕಳ್ಳರು ರೈಲ್ವೆ ಇಲಾಖೆಗೆ ಸೇರಿದ ಕಬ್ಬಿಣದ ವಸ್ತುಗಳನ್ನ ಟೆಂಪೋಗೆ ತುಂಬಲು ಮುಂದಾಗಿದ್ದಾರೆ, ರಾತ್ರಿ ಪಾಳಿಯಲ್ಲಿದ್ದ ಸೆಕ್ಯೂರಿಟಿ ಗಾರ್ಡ್ ಕಳ್ಳರ ಕೃತ್ಯವನ್ನ ತನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾನೆ, ಕಳ್ಳತನ ಕೃತ್ಯದ ಬಗ್ಗೆ ಇನ್ನುಳಿದ ಸೆಕ್ಯೂರಿಟಿ ಗಾರ್ಡ್ ಗಳಿಗೆ ಹೇಳಿ ಸ್ಥಳಕ್ಕೆ ಕರೆಸಿಕೊಂಡಿದ್ದಾನೆ, ಎಲ್ಲರು ಒಟ್ಟಾಗಿ ಕಳವು ಮಾಲು ಸಮೇತ ಇಬ್ಬರು ಕಳ್ಳರನ್ನ ಹಿಡಿದಿದ್ದಾರೆ, ನಂತರ ಪೊಲೀಸರಿಗೆ ಮಾಹಿತಿ ಮುಟ್ಟಿಸಿ ಕಳ್ಳರನ್ನು ಪೊಲೀಸ್ ವಶಕ್ಕೆ ನೀಡಿದ್ದಾರೆ, ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

5 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

6 hours ago

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

14 hours ago

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

19 hours ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

1 day ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

1 day ago