Categories: ರಾಮನಗರ

ರಾಮನಗರ ಕಲ್ಲು ಕ್ವಾರಿ ದುರಂತ: ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, 5 ಮಂದಿಗೆ ಗಂಭೀರ ಗಾಯ


ರಾಮನಗರ: ಬೆಂಗಳೂರು ದಕ್ಷಿಣ ತಾಲೂಕಿನ ಮಾದಾಪಟ್ಟಣದಲ್ಲಿರುವ ಕಾವೇರಿ ಜಲ್ಲಿ ಕ್ರಷರ್‌ನ ಕಲ್ಲು ಕ್ವಾರಿಯಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದ ಭೀಕರ ದುರಂತದಲ್ಲಿ ಬಂಡೆ ಕುಸಿದು ಏಳು ಕಾರ್ಮಿಕರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಳಿಗ್ಗೆ ಸುಮಾರು 7.30ರ ವೇಳೆಗೆ ಕಾರ್ಮಿಕರು ಎಂದಿನಂತೆ ಕ್ವಾರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ, ಇಟಾಚಿ ಯಂತ್ರದ ಮೇಲ್ಭಾಗದಿಂದ ಹಠಾತ್ತನೆ ಬೃಹತ್ ಬಂಡೆ ಕುಸಿದು ಬಿದ್ದಿದೆ. ಪರಿಣಾಮ ಸ್ಥಳದಲ್ಲೇ ಹಲವು ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದು, ಏಳು ಮಂದಿ ಮೃತಪಟ್ಟಿದ್ದಾರೆ. ಇನ್ನೂ ಕೆಲವರು ಬಂಡೆಯಡಿ ಸಿಲುಕಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಮಾಹಿತಿ ತಿಳಿಯುತ್ತಿದ್ದಂತೆಯೇ ತಾವರೆಕೆರೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರೆಲ್ಲರೂ ದಿನಗೂಲಿ ಕಾರ್ಮಿಕರಾಗಿದ್ದು, ಕ್ರಷರ್ ಸಮೀಪದಲ್ಲೇ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ. ಮೃತದೇಹಗಳನ್ನು ಹೊರತೆಗೆಯುವ ಕಾರ್ಯಾಚರಣೆ ಮುಂದುವರಿದಿದೆ.

ಪ್ರಾಥಮಿಕ ಮಾಹಿತಿಯಂತೆ, ಈ ಕಾವೇರಿ ಜಲ್ಲಿ ಕ್ರಷರ್ ಆನಂದಸ್ವಾಮಿ ಅವರಿಗೆ ಸೇರಿದ್ದು, ಪ್ರಕರಣ ಸಂಬಂಧ ಮಾಲೀಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದುರಂತದ ಕುರಿತು ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಈ ಘಟನೆ ಅತ್ಯಂತ ಆಘಾತಕಾರಿ ಮತ್ತು ನೋವಿನ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.

ಮೃತ ಕಾರ್ಮಿಕರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಅವರು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಕ್ವಾರಿಗಳಲ್ಲಿ ಸುರಕ್ಷತಾ ನಿಯಮಗಳ ಅನುಷ್ಠಾನ ಹಾಗೂ ಸರ್ಕಾರದ ಮೇಲ್ವಿಚಾರಣೆಯ ವೈಫಲ್ಯ ಈ ದುರಂತದಿಂದ ಪ್ರಶ್ನೆಗೆ ಒಳಗಾಗಿದೆ ಎಂದು ಹೇಳಿರುವ ಅವರು, ಸುರಕ್ಷತಾ ನಿಯಮಗಳ ಉಲ್ಲಂಘನೆ ಅಥವಾ ಅಧಿಕಾರಿಗಳ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದ್ದರೆ ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಅಲ್ಲದೆ, ಮೃತರ ಕುಟುಂಬಗಳಿಗೆ ಸರ್ಕಾರ ತಕ್ಷಣ ಸಮರ್ಪಕ ಪರಿಹಾರ ಘೋಷಿಸಬೇಕು, ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು ಹಾಗೂ ರಾಜ್ಯದ ಎಲ್ಲಾ ಕ್ವಾರಿಗಳಲ್ಲಿ ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ ಇಂತಹ ದುರಂತಗಳು ಮರುಕಳಿಸದಂತೆ ಶಾಶ್ವತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

41 minutes ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

13 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

18 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

19 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

1 day ago

ದೇವನಹಳ್ಳಿ ಬಳಿ ಭೀಕರ ಅಪಘಾತ: ಓರ್ವ ಸಾವು: ಹಲವರಿಗೆ ಗಾಯ

ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…

1 day ago