ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ- ಡಿಸಿಎಂ ಡಿಕೆಶಿ

ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ಹಾಗೂ ಹಾರೋಹಳ್ಳಿ ತಾಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಈ ಹಿಂದೆ ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ, ರಾಮನಗರ, ಮಾಗಡಿ, ಕನಕಪುರ ಮತ್ತು ಚನ್ನಪಟ್ಟಣ ತಾಲೂಕುಗಳು ಬೆಂಗಳೂರು ಜಿಲ್ಲೆಯ ಭಾಗವಾಗಿದ್ದವು ಎಂದರು.

ತದನಂತರ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಚನ್ನಪಟ್ಟಣ, ರಾಮನಗರ, ಮಾಗಡಿ ಹಾಗೂ ಕನಕಪುರ ತಾಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಡಲಾಯಿತು ಎಂದು ಹೇಳಿದ್ದಾರೆ.

ನಂತರ ದೊಡ್ಡಬಳ್ಳಾಪುರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಹೊಸಕೋಟೆ, ನೆಲಮಂಗಲ ದೇವನಹಳ್ಳಿ, ದೊಡ್ಡಬಳ್ಳಾಪುರ ಒಳಗೊಂಡಂತೆ ಬೆಂಗಳೂರು ಗ್ರಾಮಂತರ ಜಿಲ್ಲೆಯನ್ನಾಗಿ ಮಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂಬ ಹೆಸರನ್ನು ಹಾಗೇ ಉಳಿಸಿಕೊಳ್ಳಲಾಯಿತು ಎಂದರು.

ಅದೇ ರೀತಿ ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ರಾಮನಗರ ತಾಲೂಕು ಸೇರಿಸಿ ಹೊಸದಾಗಿ ರಾಮನಗರ ಜಿಲ್ಲೆ ಮಾಡಲಾಯಿತು. ರಾಮನಗರ ಜಿಲ್ಲಾ ಕೇಂದ್ರವಾಯಿತು. ನಂತರ ಈ ಜಿಲ್ಲೆಗೆ ಹಾರೋಹಳ್ಳಿ ಹೊಸ ತಾಲ್ಲೂಕು ಸೇರ್ಪಡೆಯಾಯಿತು ಎಂದು ತಿಳಿಸಿದ್ದಾರೆ.

ಈಗ ಬೆಂಗಳೂರು ನಗರದ ಅಂತಾರಾಷ್ಟ್ರೀಯ ಖ್ಯಾತಿ, ಸಾರ್ವಭೌಮತೆ ಮತ್ತು ಘನತೆ ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ಹಾರೋಹಳ್ಳಿ ತಾಲೂಕುಗಳಿಗೆ ಲಭ್ಯ ಆಗಬೇಕೆಂಬುದು ಜನರ ಆಶಯ ಮತ್ತು ನನ್ನ ಚಿಂತನೆಯೂ ಕೂಡ ಎಂದು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಹೀಗಾಗಿ ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ಹಾಗೂ ರಾಮನಗರವನ್ನು ಇದರ ಜಿಲ್ಲಾ ಕೇಂದ್ರವಾಗಿ ಇರಿಸಲು ಚಿಂತನೆ ನಡೆಸಲಾಗಿದೆ. ಇದಕ್ಕಾಗಿ ಜನರ ಅಭಿಪ್ರಾಯವನ್ನು ಕೂಡ ಸಂಗ್ರಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

Ramesh Babu

Journalist

Recent Posts

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

1 hour ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

2 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

14 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

14 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

16 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

1 day ago