
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕರ್ನಾಟಕ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಇಂದು ಸಭೆ ಸೇರಿದ್ದ ಸಚಿವ ಸಂಪುಟ, ಪ್ರಸ್ತಾವನೆಗೆ ಅನುಮೋದನೆ ನೀಡಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ಮಾತನಾಡಿ, ಜಿಲ್ಲೆಯ ಜನರು ಹಾಗೂ ಶಾಸಕರ ಬೇಡಿಕೆ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.