Categories: ರಾಜ್ಯ

ರಾಮಮಂದಿರ ಉದ್ಘಾಟನೆಯಿಂದ ಬಿಜೆಪಿಗೆ ರಾಜಕೀಯ ಲಾಭವಾಗಲ್ಲ- ರಾಮಮಂದಿರ ಕಟ್ಟಲು ನಮ್ಮದೇನು ವಿರೋಧವಿಲ್ಲ- ಸಿಎಂ ಸಿದ್ದರಾಮಯ್ಯ

ಜನವರಿ 22ರಂದು ರಾಮಮಂದಿರ ಉದ್ಘಾಟನೆಗೊಳ್ಳಲಿದ್ದು, ಇದರಿಂದ ಬಿಜೆಪಿಗೆ ರಾಜಕೀಯ ಲಾಭವಾಗಲ್ಲ. ವಿವಾದ ಬಹಳ ವರ್ಷಗಳಿಂದ ಇದ್ದು, ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ರಾಮಮಂದಿರ ಕಟ್ಟಲು ನಮ್ಮದೇನು ವಿರೋಧವಿಲ್ಲ. ಅದರಿಂದ ಮತದಾರರು ಬದಲಾಗುತ್ತಾರೆ ಎನ್ನುವುದು ಸುಳ್ಳು. ನಮ್ಮ ದೇಶದ ಜನ ವೈವಿಧ್ಯತೆಯಲ್ಲಿ ಏಕತೆಯನ್ನು ಕಂಡುಕೊಂಡಿದ್ದಾರೆ. ಬ್ರಿಟಿಷರ ಹಾಗೂ ಮೊಘಲರ ದಾಳಿಯಾದರೂ ಒಂದು ದೇಶವಾಗಿ ನಾವು ಉಳಿದುಕೊಂಡಿದ್ದೇವೆ. ಈ ದೇಶದಲ್ಲಿ ಅನೇಕ ಜಾತಿ, ಭಾಷೆಗಳು ಹಾಗೂ ಧರ್ಮಗಳಿದ್ದರೂ ದೇಶವಾಗಿ ಒಂದಾಗಿರುವುದು ಜನರ ನಡುವಿನ ಐಕ್ಯತೆ, ಒಗ್ಗಟ್ಟಿನಿಂದ. ಒಳಗೊಳ್ಳುವಿಕೆಯಲ್ಲಿ ನಂಬಿಕೆ ಇಟ್ಟವರು ದೇಶದಲ್ಲಿ ಹೆಚ್ಚಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಪಂಚ ರಾಜ್ಯಗಳ ಚುನಾವಣೆಗೆ ಸಂಬಂಧಿಸಿದಂತೆ ನನಗಿರುವ ಮಾಹಿತಿಯ ಪ್ರಕಾರ ಮೂರು ರಾಜ್ಯಗಳಲ್ಲಿ ನಮ್ಮ ಪಕ್ಷ ಗೆಲ್ಲಲಿದೆ. ಇದರ ಫಲಿತಾಂಶದಿಂದ ಲೋಕಸಭಾ ಚುನಾವಣೆ ಮುಂದೂಡಲಾಗುವುದಿಲ್ಲ ಏಕೆಂದರೆ ಈಗಾಗಲೇ ನವೆಂಬರ್ ಕೊನೆಯಲ್ಲಿದ್ದೇವೆ, ಚುನಾವಣಾ ನೀತಿ ಸಂಹಿತೆ ಮಾರ್ಚ್ ಅಂತ್ಯಕ್ಕೆ ಆಗಬಹುದು ಎಂಬ ನಿರೀಕ್ಷೆ ಇದೆ ಎಂದರು.

ಬೇರೆ ರಾಜ್ಯಗಳ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹಿತ ಬಿಜೆಪಿ ನಾಯಕರು ಕರ್ನಾಟಕವನ್ನು ಟೀಕೆ ಮಾಡುತ್ತಿದ್ದಾರೆ. ಅದಕ್ಕೆ ಅವರು ಮಧ್ಯಪ್ರದೇಶದಲ್ಲಿ ನನ್ನ ಹಾಗೂ ಕರ್ನಾಟಕದ ಬಗ್ಗೆ ಮಾತನಾಡಿದ್ದಾರೆ. ಪ್ರಧಾನಮಂತ್ರಿಗಳು ನಮ್ಮ ಗ್ಯಾರಂಟಿಗಳಿಗೆ ವಿರೋಧ ಮಾಡಿದ್ದರು. ಈಗ ‘ವಿಕಸಿತ್ ಭಾರತ್’ ಎಂದು ವ್ಯಾನ್ ಕಳಿಸಿ ಅದರಲ್ಲಿ ಪ್ರಧಾನಮಂತ್ರಿಗಳ ಗ್ಯಾರಂಟಿ ಎಂದು ಬರೆದಿದ್ದಾರೆ. ಅದನ್ನು ಭಾರತದ ಸರ್ಕಾರ ಕಳುಹಿಸಿದೆ. ಮೊದಲು ನಮ್ಮ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿ ಈಗ ಅವರು ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಇದನ್ನು ರಾಜಕೀಯ ಇಬ್ಬಂದಿತನ ಎಂದು ಕರೆಯದೆ ಬೇರೇನು ಹೇಳಬೇಕು? ಎಂದು ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರಕ್ಕೆ ಬರಪರಿಹಾರ ನೀಡುವ ಸಂಬಂಧ ಕೇಂದ್ರವನ್ನು ಹಲವು ಬಾರಿ ಒತ್ತಾಯಿಸಿದ್ದೇವೆ. ಕೇಂದ್ರದಿಂದ 17,900 ಕೋಟಿ ರೂ.ಗಳ ಬರಪರಿಹಾರಕ್ಕೆ ಮನವಿ ಸಲ್ಲಿಸಲಾಗಿದೆ. ಕೇಂದ್ರ ಬರ ಅಧ್ಯಯನ ತಂಡ ಪರಿಶೀಲನೆ ನಡೆಸಿ ಒಂದು ತಿಂಗಳಾದರೂ ಕೂಡ ವರದಿಯನ್ನು ನೀಡಿಲ್ಲ ಹಾಗೂ ನಮ್ಮ ಸರ್ಕಾರದ ಮನವಿಗೆ ಕೇಂದ್ರ ಇದುವರೆಗೂ ಸ್ಪಂದಿಸಿಲ್ಲ. ಬರಪರಿಹಾರ ರಾಜ್ಯಕ್ಕೆ ನೀಡುವ ಭಿಕ್ಷೆಯಲ್ಲ. ಎನ್.ಡಿ.ಆರ್.ಎಫ್ ನಡಿ ಪರಿಹಾರವನ್ನು ನೀಡಬೇಕಿದ್ದು, ಅದನ್ನು ರಾಜ್ಯ ನೀಡಿರುವ ತೆರಿಗೆಯ ಮೊತ್ತವೇ ಆಗಿದೆ. ಬರಪರಿಹಾರಕ್ಕೆ ಸಂಬಂಧಿಸಿದಂತೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆಗಳನ್ನು ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ಮಾಜಿ ಮುಖ್ಯಮತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಇಂದು ಕೂಡ ಪತ್ರಿಕಾಗೋಷ್ಠಿ ಕರೆದು ಸುಳ್ಳು ಸುಳ್ಳು ಆರೋಪ ಮಾಡಿದ್ದಾರೆ. ವಿಧಾನಸಭಾ ಅಧಿವೇಶನದಲ್ಲಿ ಅವರು ಚರ್ಚೆ ಮಾಡಲಿ ಉತ್ತರ ಕೊಡುತ್ತೇವೆ. ಸರ್ಕಾರ ಓಡಿಹೋಗುವುದಿಲ್ಲ. ಕುಮಾರಸ್ವಾಮಿಯವರು ಯಾವಾಗ ಸತ್ಯ ಹೇಳಿದ್ದಾರೆ. ಯಾವಾಗಲೂ ಹಿಟ್ ಅಂಡ್ ರನ್ ಕೇಸ್ ಅವರದ್ದು. ಸುಳ್ಳನ್ನೆಲ್ಲಾ ತನಿಖೆ ಮಾಡಿಸಲು ಆಗುವುದಿಲ್ಲ. ಏನಾದರೂ ಆಧಾರ ಇದ್ದರೆ, ದಾಖಲಾತಿ ಇದ್ದರೆ ತನಿಖೆ ಮಾಡಬಹುದು ಎಂದಿದ್ದಾರೆ.

ಹೆಚ್.ಡಿ ಕುಮಾರಸ್ವಾಮಿಯವರು ಅವರ ಭ್ರಷ್ಟಾಚಾರಗಳ ಬಗ್ಗೆ ತನಿಖೆ ಮಾಡುವಂತೆ ಸವಾಲು ಹಾಕಿದ್ದಾರೆ. ತನಿಖೆ ಮಾಡಬೇಕಾಗಿ ಬಂದರೆ ಮಾಡುತ್ತೇವೆ, ಅದರಲ್ಲಿ ಹಿಂದೆ ಹೋಗುವ ಪ್ರಶ್ನೆಯೇ ಇಲ್ಲ. ಕುಮಾರಸ್ವಾಮಿಯಾಗಲಿ, ನಮ್ಮ ಪಕ್ಷದವರಾಗಲಿ ತಪ್ಪು ಮಾಡಿದರೆ ಶಿಕ್ಷೆ ಅನುಭವಿಸಲೇಬೇಕು ಎಂದು ಹೇಳಿದ್ದಾರೆ.

ಜೆಡಿಎಸ್ ಅಥವಾ ಬಿಜೆಪಿಯ ನಾಯಕರು ಕಾಂಗ್ರೆಸ್ ನ ಸಿದ್ಧಾಂತ ಹಾಗೂ ನಾಯಕತ್ವವನ್ನು ಒಪ್ಪಿ ಬಂದಲ್ಲಿ ಅವರನ್ನು ಸ್ವಾಗತಿಸಲಾಗುವುದು. ರಾಜ್ಯದ ಒಟ್ಟು 224 ಸ್ಥಾನದಲ್ಲಿ 136 ನ್ನು ಕಾಂಗ್ರೆಸ್ ಪಡೆದಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಕಾಂಗ್ರೆಸ್‌ನ ಶಕ್ತಿಯನ್ನು ವಿಸ್ತರಿಸಬೇಕಿದೆ. ಕೋಮುವಾದಿ ಪಕ್ಷಗಳು ಮತ್ತೆ ಅಧಿಕಾರಕ್ಕೆ ಬರಬಾರದು. ಜೆಡಿಎಸ್ ನ ಕುಮಾರಸ್ವಾಮಿಯವರು ಕೇವಲ ದ್ವೇಷ ಹಾಗೂ ಅಸೂಯೆಗಳ ರಾಜಕಾರಣ ಮಾಡುತ್ತಾರೆ. ನನ್ನ ಮಗ ಯತೀಂದ್ರ ಆಶ್ರಯ ಸಮಿತಿ ಅಧ್ಯಕ್ಷನಾಗಿದ್ದು, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದರೆ, ಅವರ ಮೇಲೆ ವೃಥಾ ಆರೋಪ ಮಾಡುವ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ನನ್ನ ರಾಜಕೀಯ ಜೀವನದಲ್ಲಿ ಇದುವರೆಗೂ ದ್ವೇಷದ ರಾಜಕಾರಣವನ್ನು ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ. ಕುಮಾರಸ್ವಾಮಿಯವರಿಗೆ ಸುಳ್ಳು ಹೇಳುವುದು ಬಿಟ್ಟರೆ ಬೇರೇನೂ ತಿಳಿದಿಲ್ಲ. ಸುಳ್ಳೇ ಅವರ ಮನೆದೇವರು ಎಂದು ಗುಡುಗಿದ್ದಾರೆ.

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

1 hour ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

13 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

17 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

20 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

22 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago