ರಾಮಾಯಣ ಮಹಾಕಾವ್ಯದಲ್ಲಿ‌ ದೇಶದ ಚರಿತ್ರೆ, ಸಂಸ್ಕೃತಿ, ಪರಿಸರ ಅಡಗಿದೆ- ಕವಿ ಈರಣ್ಣ ಸಬರದ

ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಕಾವ್ಯದಲ್ಲಿ ಭಾರತ ದೇಶದ ಚರಿತ್ರೆ, ಸಂಸ್ಕೃತಿ ಮತ್ತು ಪರಿಸರವನ್ನು ಸಮಗ್ರವಾಗಿ ಕಟ್ಟಿಕೊಟ್ಟಿದ್ದಾರೆ ಎಂದು ಜವಾಹರ ನವೋದಯ ವಿದ್ಯಾಲಯ ಪ್ರಾಧ್ಯಾಪಕ ಮತ್ತು ಕವಿ ಈರಣ್ಣ ಸಬರದ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ವಾಲ್ಮೀಕಿ ಕವಿಗಳ ಕವಿ ಮತ್ತು ಭುವನದ ಭಾಗ್ಯ ಎಂದು ಕನ್ನಡದ ಕವಿಗಳು ಪ್ರಶಂಸೆ ಮಾಡಿದ್ದಾರೆ. ರಾಮಯಾಣದ ಕಥೆ ಜಾನಪದ ಮತ್ತು ಶಿಷ್ಟಸಾಹಿತ್ಯ ಎರಡರಲ್ಲೂ ಇದೆ. ರಾಮಾಯಣ ಕಾವ್ಯದಲ್ಲಿ ಸಾರ್ವಕಾಲಿಕ ಸತ್ಯಗಳ ಅಂಶವಿದೆ. ಲವಕುಶರಿಗೆ ಶಿಕ್ಷಣ ನೀಡುವ ಶಿಕ್ಷಣ ತಜ್ಞರು ವಾಲ್ಮೀಕಿ. ಲವಕುಶರು ಶ್ರೇಷ್ಠ  ಗಾಯನದ ಮೂಲಕ ರಾಮಾಯಣವನ್ನು ಹಾಡುತ್ತಾರೆ. ರಾಮಾಯಣ ಕಾವ್ಯದ ಮೂಲಕ ಸುಖ-ದುಃಖಗಳನ್ನು  ಬದುಕಿನ ಭಾಗ ಎಂಬ ಸಂದೇಶ ನೀಡಲಾಗಿದೆ ಎಂದರು.

ರಾಮಾಯಣ ಕಾವ್ಯ ಮೊದಲ ಎರಡು ಸಾಲುಗಳು ಶೋಕದಿಂದ ಶ್ಲೋಕವಾದ ಸಾಲುಗಳು. ಇಂದು ರಾಮಾಯಣ ಕಾವ್ಯ ಭಾರತದ ಎಲ್ಲಾ ಭಾಷೆಗಳ ಜೊತೆಗೆ ವಿದೇಶ ಭಾಷೆಗಳಲ್ಲಿ ಇವೆ. ವಾಲ್ಮೀಕಿ ರಾಮಾಯಣದ ಆಧಾರದ ಮೇಲೆ ವಿವಿಧ ಭಾಷೆಗಳಲ್ಲಿ ಕಾವ್ಯ, ನಾಟಕ, ಕಾದಂಬರಿ ಮತ್ತು ಕತೆಗಳನ್ನು ಅನೇಕರು ರಚಿಸಿದ್ದಾರೆ. ಇಂದಿಗೂ ಸಹ ರಾಮಾಯಣ ಮಹಾಕಾವ್ಯವು ಜಗತ್ತಿನಲ್ಲಿ ಸತ್ವಯುತವಾದ ಮತ್ತು ಮೌಲ್ಯಯುತವಾದ ಸಾಹಿತ್ಯ ಸೃಷ್ಟಿಗೆ ಪ್ರೇರಣೆಯಾಗಿದೆ ಎಂದರು.

ಮುಖ್ಯ ಶಿಕ್ಷಕರಾದ ಆರ್.ನಾರಾಯಣಸ್ವಾಮಿ ಮಾತನಾಡಿ, ರಾಮಾಯಣ ಮಹಾಕಾವ್ಯ ಜೀವನಮೌಲ್ಯಗಳನ್ನು  ಪ್ರತಿಬಿಂಬಿಸುವ  ಕಾವ್ಯವಾಗಿದೆ. ಸಾಹಿತ್ಯ ಕೃತಿಗಳು ವಿದ್ಯಾರ್ಥಿಗಳಿಗೆ ಎಂದಿಗೂ ಮಾರ್ಗದರ್ಶನ ನೀಡುತ್ತವೆ.  ವಿದ್ಯಾರ್ಥಿಗಳು ಕನ್ನಡ ಸಾಹಿತ್ಯವನ್ನು ಅಧ್ಯಯನವನ್ನು  ನಿರಂತರವಾಗಿ ಮಾಡಬೇಕು. ವಿದ್ಯಾರ್ಥಿಗಳು ವಿನಯದೊಂದಿಗೆ ವಿದ್ಯೆಯನ್ನು ಕಲಿಯಬೇಕು.   ವಿದ್ಯಾರ್ಥಿಗಳು ಸಾಧನೆ ಕಡೆಗೆ ಗಮನ ನೀಡಬೇಕು. ಸಾಧನೆ  ಮಾಡುವ ವ್ಯಕ್ತಿಗಳನ್ನು ಸಮಾಜ ಗೌರವಿಸುತ್ತದೆ.  ಮಹತ್ವವನ್ನು  ವಿದ್ಯಾರ್ಥಿಗಳು  ಪಠ್ಯ ಚಟುವಟಿಕೆಗಳಿಗೆ ನೀಡುವ ಮಹತ್ವವನ್ನು ಪಠ್ಯೇತರ ಚಟುವಟಿಕೆಗಳಿಗೂ ನೀಡಬೇಕೆಂದರು.

ಕಾರ್ಯಕ್ರಮದಲ್ಲಿ ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ  ಕೃಷ್ಣಪ್ಪ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಸಾಸಲು ಹೋಬಳಿ ಅಧ್ಯಕ್ಷ ಜಿ.ಎಂ.ನಾಗರಾಜು, ಪ್ರೇರಣಾ ಸಂಸ್ಥೆ ಅಧ್ಯಕ್ಷೆ ನೇತ್ರಾವತಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಮಾಳಯ್ಯ, ಉಪಾಧ್ಯಕ್ಷೆ ಶ್ಯಾಮಲಾ, ಮಾಜಿ ಅಧ್ಯಕ್ಷ  ಕೃಷ್ಣಮೂರ್ತಿ, ಸದಸ್ಯ ನಾರಾಯಣಸ್ವಾಮಿ, ಯೋಗನರಸಿಂಹಮೂರ್ತಿ, ಭಾಸ್ಕರ್, ಯಲ್ಲಪ್ಪಭರಣ್ಣನವರ್, ಹಳೆಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪವನ್,  ಸಹಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

10 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

12 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

14 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

19 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

22 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

2 days ago