ರಾಮಾಯಣ ಮಹಾಕಾವ್ಯ ಜೀವನ ಮೌಲ್ಯಗಳನ್ನು  ಪ್ರತಿಬಿಂಬಿಸುವ ಕಾವ್ಯ- ಕಸಾಪ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್

ರಾಮಾಯಣ ಮಹಾಕಾವ್ಯ ಜೀವನ ಮೌಲ್ಯಗಳನ್ನು  ಪ್ರತಿಬಿಂಬಿಸುವ ಕಾವ್ಯವಾಗಿದೆ. ವಾಲ್ಮೀಕಿ ಅವರು  ರಾಮಾಯಣ ಕಾವ್ಯದಲ್ಲಿ ಭಾರತ ದೇಶದ ಚರಿತ್ರೆ, ಸಂಸ್ಕೃತಿ ಮತ್ತು ಪರಿಸರವನ್ನು ಸಮಗ್ರವಾಗಿ ಕಾಣಬಹುದಾಗಿದೆ  ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು  ಕನ್ನಡ ಸಾಹಿತ್ಯ ಪರಿಷತ್ತು  ವತಿಯಿಂದ  ಡಾ.ರಾಜ್ ಕುಮಾರ್  ಕಲಾಮಂದಿರದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.  ಮಹರ್ಷಿ ವಾಲ್ಮೀಕಿ ರಚಿಸಿರುವ ರಾಮಾಯಣ ಕಾವ್ಯ ಓದುವ ಮೂಲಕ  ಸಹೃದಯರು  ಬದುಕಿನ  ಸತ್ಯಗಳನ್ನು ಅರಿಯಬೇಕಾಗಿದೆ.  ರಾಮಾಯಣ ಕಾವ್ಯದ ಮೂಲಕ   ಸುಖ ದುಃಖಗಳು ಮನುಷ್ಯನ   ಬದುಕಿನ ಭಾಗ ಎನ್ನುವ ಸಂದೇಶ ನೀಡಲಾಗಿದೆ ಎಂದರು.

ನವೋದಯ ವಿದ್ಯಾಲಯ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ ಮಾತನಾಡಿ, ಮಹರ್ಷಿ ವಾಲ್ಮೀಕಿ ಗುರುವಾಗಿ, ಕವಿಯಾಗಿ ಭಾರತೀಯರಿಗೆ ಸ್ಫೂರ್ತಿಯಾಗಿದೆ. ವಾಲ್ಮೀಕಿ ರಾಮಾಯಣ ರಾಮನ ಪಯಣದ ಕಥೆಯಾಗಿದೆ. ಸದ್ಗುಣ ಮತ್ತು ದುರ್ಗುಣ ನಡುವಿನ ಸಂಘರ್ಷದಲ್ಲಿ ಸದ್ಗುಣಕ್ಕೆ ಜನಮನ್ನಣೆ ಮತ್ತು ಜಯವಿದೆ ಎಂಬ ಸಂದೇಶ ಕಾವ್ಯದಲ್ಲಿದೆ. ರಾಮಾಯಣ ಕಾವ್ಯದಲ್ಲಿ ಸಾರ್ವಕಾಲಿಕ ಸತ್ಯಗಳ ಅಂಶವಿದೆ. ಸತ್ವಯುತವಾದ ಮತ್ತು ಮೌಲ್ಯಯುತವಾದ ಸಾಹಿತ್ಯ ಸೃಷ್ಟಿಗೆ ಪ್ರೇರಣೆಯಾಗಿದೆ ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ಕಸಬಾ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಕೋಶಾಧ್ಯಕ್ಷ ಜಿ.ಸುರೇಶ್ ಮಾತನಾಡಿ,  ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯ ಮೇಲೆ ವಾಲ್ಮೀಕಿ ಮತ್ತು ರಾಯಾಯಣ ಕಾವ್ಯದ ಪ್ರಭಾವ ಇದೆ. ರಾಮಾಯಣ ‌ಬರೀ ರಾಜರ ಕಥೆಗಷ್ಟೇ ಸೀಮಿತವಾಗಿಲ್ಲ. ಧಾರ್ಮಿಕ ಮತ್ತು ಸಾಮಾಜಿಕ‌‌ ವಿಚಾರಗಳನ್ನು ಒಳಗೊಂಡ ಕಾವ್ಯವಾಗಿದೆ.  ರಾಮಾಯಣ ಕಾವ್ಯ ಹಲವು ವೈಶಿಷ್ಟ್ಯಗಳಿಂದ ಶತಶತಮಾನಗಳಿಂದ  ಜನಪ್ರಿಯ ಕಾವ್ಯವಾಗಿದೆ.  ವಾಲ್ಮೀಕಿ ಅವರು ಕವಿಗಳಿಗೆ ಸಾರ್ವಭೌಮ ಆಗಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ  ಬೆಂಗಳೂರು ಗ್ರಾಮಾಂತರ ಜಿಲ್ಲಾ  ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಕೋಶಾಧ್ಯಕ್ಷ ನಂ.ಮಹಾದೇವ್, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು,  ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾ ಮಹಾದೇವ, ಗೌರವ ಕಾರ್ಯದರ್ಶಿ ಎ.ಜಯರಾಮ್, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಪ್ರತಿನಿಧಿ ಸಫೀರ್, ಭಾರತ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ ವೆಂಕಟರಾಜು, ಕಲಾವಿದರಾದ ದರ್ಗಾಜೋಗಿಹಳ್ಳಿ ಮಲ್ಲೇಶ್, ಎಂ.ರಾಮಕೃಷ್ಣ, ಮುನಿರತ್ನಮ್ಮ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಭೂ ಮಾಪನ ಕಾರ್ಯ ಸ್ಥಗಿತ, ರೈತರ ಆಕ್ರೋಶ: ಪರ್ಯಾಯ ವ್ಯವಸ್ಥೆ ಮಾಡುವಂತೆ ಒತ್ತಾಯ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಪರವಾನಗಿ ಭೂ ಮಾಪಕರು ಎರಡು ತಿಂಗಳಿಂದ ಮುಷ್ಕರ ಹೂಡಿರುವುದರಿಂದ ಭೂ ಮಾಪನ ಇಲಾಖೆಯ…

30 minutes ago

ಮಹಿಳೆಯರ ಸಬಲೀಕರಣಕ್ಕೆ ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆ ಜಾರಿ- ಬಿಜೆಪಿ ರಾಜ್ಯ ವಕ್ತಾರರಾದ ಅಶ್ವಿನಿ ಶಂಕರ್

ಕೇಂದ್ರ ಸರ್ಕಾರ ಕಳೆದ ಒಂದು ದಶಕದಿಂದ ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಒಂದೊಂದೆ ಹೆಜ್ಜೆ ಇಟ್ಟುಕೊಂಡು ಬರುತ್ತಿದೆ ಎಂದು…

1 hour ago

ಆಶಾ ಭೋಸ್ಲೆ…..ಸುಮಾರು 12000ಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿಯಾಗಿದ್ದವರು- ಅವರಿಗೆ ‌ಭಾವಪೂರ್ಣ ಶ್ರದ್ಧಾಂಜಲಿ……

ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…

12 hours ago

Документ_9

Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…

15 hours ago

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ- ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…

23 hours ago

ಹೆಣ್ಣಿನ‌ ಹಿತರಕ್ಷಣೆಗಾಗಿ ಮಹಿಳಾ ಪೊಲೀಸ್ ಠಾಣೆ ಸದಾ ಸನ್ನದ್ಧ- ಮಹಿಳಾ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪಂಕಜಾ

ಹೆಣ್ಣಿನ‌ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…

1 day ago