ರಾಮಾಯಣ ಮಹಾಕಾವ್ಯ ಜೀವನ ಮೌಲ್ಯಗಳನ್ನು ಪ್ರತಿಬಿಂಬಿಸುವ ಕಾವ್ಯವಾಗಿದೆ. ವಾಲ್ಮೀಕಿ ಅವರು ರಾಮಾಯಣ ಕಾವ್ಯದಲ್ಲಿ ಭಾರತ ದೇಶದ ಚರಿತ್ರೆ, ಸಂಸ್ಕೃತಿ ಮತ್ತು ಪರಿಸರವನ್ನು ಸಮಗ್ರವಾಗಿ ಕಾಣಬಹುದಾಗಿದೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮಹರ್ಷಿ ವಾಲ್ಮೀಕಿ ರಚಿಸಿರುವ ರಾಮಾಯಣ ಕಾವ್ಯ ಓದುವ ಮೂಲಕ ಸಹೃದಯರು ಬದುಕಿನ ಸತ್ಯಗಳನ್ನು ಅರಿಯಬೇಕಾಗಿದೆ. ರಾಮಾಯಣ ಕಾವ್ಯದ ಮೂಲಕ ಸುಖ ದುಃಖಗಳು ಮನುಷ್ಯನ ಬದುಕಿನ ಭಾಗ ಎನ್ನುವ ಸಂದೇಶ ನೀಡಲಾಗಿದೆ ಎಂದರು.
ನವೋದಯ ವಿದ್ಯಾಲಯ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ ಮಾತನಾಡಿ, ಮಹರ್ಷಿ ವಾಲ್ಮೀಕಿ ಗುರುವಾಗಿ, ಕವಿಯಾಗಿ ಭಾರತೀಯರಿಗೆ ಸ್ಫೂರ್ತಿಯಾಗಿದೆ. ವಾಲ್ಮೀಕಿ ರಾಮಾಯಣ ರಾಮನ ಪಯಣದ ಕಥೆಯಾಗಿದೆ. ಸದ್ಗುಣ ಮತ್ತು ದುರ್ಗುಣ ನಡುವಿನ ಸಂಘರ್ಷದಲ್ಲಿ ಸದ್ಗುಣಕ್ಕೆ ಜನಮನ್ನಣೆ ಮತ್ತು ಜಯವಿದೆ ಎಂಬ ಸಂದೇಶ ಕಾವ್ಯದಲ್ಲಿದೆ. ರಾಮಾಯಣ ಕಾವ್ಯದಲ್ಲಿ ಸಾರ್ವಕಾಲಿಕ ಸತ್ಯಗಳ ಅಂಶವಿದೆ. ಸತ್ವಯುತವಾದ ಮತ್ತು ಮೌಲ್ಯಯುತವಾದ ಸಾಹಿತ್ಯ ಸೃಷ್ಟಿಗೆ ಪ್ರೇರಣೆಯಾಗಿದೆ ಎಂದರು.
ದೊಡ್ಡಬಳ್ಳಾಪುರ ತಾಲ್ಲೂಕು ಕಸಬಾ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಕೋಶಾಧ್ಯಕ್ಷ ಜಿ.ಸುರೇಶ್ ಮಾತನಾಡಿ, ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯ ಮೇಲೆ ವಾಲ್ಮೀಕಿ ಮತ್ತು ರಾಯಾಯಣ ಕಾವ್ಯದ ಪ್ರಭಾವ ಇದೆ. ರಾಮಾಯಣ ಬರೀ ರಾಜರ ಕಥೆಗಷ್ಟೇ ಸೀಮಿತವಾಗಿಲ್ಲ. ಧಾರ್ಮಿಕ ಮತ್ತು ಸಾಮಾಜಿಕ ವಿಚಾರಗಳನ್ನು ಒಳಗೊಂಡ ಕಾವ್ಯವಾಗಿದೆ. ರಾಮಾಯಣ ಕಾವ್ಯ ಹಲವು ವೈಶಿಷ್ಟ್ಯಗಳಿಂದ ಶತಶತಮಾನಗಳಿಂದ ಜನಪ್ರಿಯ ಕಾವ್ಯವಾಗಿದೆ. ವಾಲ್ಮೀಕಿ ಅವರು ಕವಿಗಳಿಗೆ ಸಾರ್ವಭೌಮ ಆಗಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಕೋಶಾಧ್ಯಕ್ಷ ನಂ.ಮಹಾದೇವ್, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾ ಮಹಾದೇವ, ಗೌರವ ಕಾರ್ಯದರ್ಶಿ ಎ.ಜಯರಾಮ್, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಪ್ರತಿನಿಧಿ ಸಫೀರ್, ಭಾರತ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ ವೆಂಕಟರಾಜು, ಕಲಾವಿದರಾದ ದರ್ಗಾಜೋಗಿಹಳ್ಳಿ ಮಲ್ಲೇಶ್, ಎಂ.ರಾಮಕೃಷ್ಣ, ಮುನಿರತ್ನಮ್ಮ ಮುಂತಾದವರು ಭಾಗವಹಿಸಿದ್ದರು.
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…