18 ವರ್ಷಗಳ ಬಳಿಕ ಚೊಚ್ಚಲ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಗೆ ಬಂದಿದ್ದ ಇಬ್ಬರು ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.
ಟ್ರೋಫಿ ಗೆದ್ದ ತಂಡವನ್ನು ಕಣ್ತುಂಬಿಕೊಳ್ಳಲು ನಗರದ ವಿವಿಧೆಡೆಯಿಂದ ಅಪಾರ ಸಂಖ್ಯೆಯಲ್ಲಿ ಯುವಕ, ಯುವತಿಯರು ಆಗಮಿಸುತ್ತಿದ್ದು, ಕ್ರೀಡಾಂಗಣದ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದು, ನೂಕುನುಗ್ಗಲಿನಿಂದ 10 ಮಂದಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಇವರಲ್ಲಿ ಮೂವರ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
18, 19, ಮತ್ತು 20ನೇ ಗೇಟ್ ಓಪನ್ ಆಗುತ್ತಿದ್ದಂತೆ ಅಭಿಮಾನಿಗಳು ಏಕಾಏಕಿ ಒಳನುಗ್ಗಿದ್ದು, ತಳ್ಳಾಟ, ನೂಕುನುಗ್ಗಲು ಉಂಟಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.
ಆರ್ ಸಿಬಿ ಆಟಗಾರರು ಆಗಮಿಸುವ ಗೇಟ್ ನಂಬರ್ 12 ರ ಬಳಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದ ವೇಳೆ ಭಾರಿ ನೂಕು ನುಗ್ಗಲು ಉಂಟಾಗಿದೆ. ಈ ವೇಳೆ ಮಹಿಳಾ ಅಭಿಮಾನಿಯೊಬ್ಬರು ಅಸ್ವಸ್ಥಗೊಂಡಿದ್ದು, ಅವರನ್ನು ಕಾರಿನಲ್ಲಿ ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆಯಲ್ಲಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ಅವರಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…