ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಇನ್ಸ್ ಪೆಕ್ಟರ್ ಎಂ.ಆರ್.ಹರೀಶ್ ಅವರು ಅತ್ಯುತ್ತಮ ಸೇವೆಗಾಗಿ 2024ನೇ ಸಾಲಿನ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.
2003ನೇ ಬ್ಯಾಚ್ ಅಧಿಕಾರಿಯಾದ ಹರೀಶ್ ಅವರು ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದರು. ಕಳೆದ ಎರಡು ವರ್ಷಗಳ ಹಿಂದೆ ದೊಡ್ಡಬಳ್ಳಾಪುರ ವೃತ್ತದ ಸರ್ಕಲ್ ಇನ್ ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದರು.
ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೇರಿಸಿದ ಬಳಿಕ ದೊಡ್ಡಬೆಳವಂಗಲ ಠಾಣೆಯ ಪೊಲೀಸ್ ಇನ್ ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
ಅಪರಾಧಿಗಳ ಪತ್ತೆಗಾಗಿ ಅತಿ ಬಯೋಮೆಟ್ರಿಕ್ ಬಳಸಿದವರಲ್ಲಿ ಪೊಲೀಸ್ ಠಾಣೆಗಳಲ್ಲಿ ದೊಡ್ಡಬೆಳವಂಗಲ ಠಾಣೆ ಮೂರನೇ ಸ್ಥಾನ ಕಾಯ್ದುಕೊಂಡಿದೆ. ರಾತ್ರಿ ವೇಳೆ ಹೆದ್ದಾರಿಯಲ್ಲಿ ಸಾಗುವ ಲಾರಿಗಳನ್ನು ತಡೆದು ಬಯೋಮೆಟ್ರಿಕ್ ಮೂಲಕ ಅಪರಾಧಿಗಳ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.