
ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹಳ್ಳಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ಅವರು ರಾಷ್ಟ್ರಪತಿ ಪದಕದ ಮನ್ನಣೆ ಪಡೆದಿದ್ದಾರೆ.

ಇಂದು ಬೆಂಗಳೂರಿನ ರಾಜಭವನದಲ್ಲಿ ನಡೆಯುವ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭ 2025 ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪದಕವನ್ನು ವಿತರಣೆ ಮಾಡಲಿದ್ದಾರೆ.
ಇದಕ್ಕೂ ಮುನ್ನ ರಾಜ್ಯದಲ್ಲಿ ಪ್ರಥಮ ಬಾರಿಗೆ ಆರಂಭಿಸಲಾದ ಡಿಜಿ-ಐಜಿಪಿ ಪ್ರಶಂಸೆ ಪದಕ 2024-25ನೇ ಸಾಲಿನ ಪ್ರಶಸ್ತಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹಳ್ಳಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ಭಾಜನರಾಗಿದ್ದರು.