ಡಾ.ಬಿ.ಆರ್.ಅಂಬೇಡ್ಕರ್ ರವರ 132ನೇ ಜನ್ಮ ದಿನಾಚರಣೆಯನ್ನು ರಾಷ್ಟ್ರಪತಿ ಭವನದಲ್ಲಿರುವ ಲಾನ್ಸ್‌ನಲ್ಲಿಂದು ಸರಳವಾಗಿ ಆಚರಿಸಲಾಯಿತು.
ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪುಷ್ಪನಮನ ಸಲ್ಲಿಸಿ ಗೌರವ ಸಲ್ಲಿಸಿದರು.
ಈ ವೇಳೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧನ್ ಖರ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.