ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಎಂ ಎ ವಿದ್ಯಾರ್ಥಿ ಎಂ.ಚರಣ್ ಕುಮಾರ್ ಅವರು ಚೆನೈನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಅಂತರ್ ವಿಶ್ವವಿದ್ಯಾಲಯ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಚೆನೈಗೆ ತೆರಳಲಿದ್ದು, ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಹೆಚ್. ವಿ. ಪ್ರವೀಣ್ ಕುಮಾರ್ ಸಂಘದ ಪರವಾಗಿ ಅವರಿಗೆ ಹುರಿದುಂಬಿಸಿ ಅವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಂಘದ ಪರವಾಗಿ ಆರ್ಥಿಕವಾಗಿ ಸಹಾಯವಾಗಲೆಂದು ಪ್ರೋತ್ಸಹ ಧನದ ಚೆಕ್ ನೀಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ನಮ್ಮ ಸಂಘದ ವತಿಯಿಂದ ಕಾಲೇಜಿನಲ್ಲಿ ಖೋಖೊ ಹಾಗೂ ಕಬಡ್ಡಿ ಕ್ರೀಡೆಗಳನ್ನು ಆಯೋಜಿಸುವುದಾಗಿ ತಿಳಿಸಿದರು. ಇನ್ನೂ ಹೆಚ್ಚಿನ ರೀತಿಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ನಿರ್ವಹಣೆ ಮಾಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸದಾಶಿವ, ರಾಮ ಚಂದ್ರ ಗೌಡ, ಪ್ರಾಧ್ಯಾಪಕ ಶ್ರೀನಿವಾಸ್, ಸಂಘದ ಖಜಾಂಜಿ ಮಹೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…