ಗ್ರಾಮೀಣ ಪ್ರದೇಶದ ಬಡ ಹಾಗೂ ಕಡು ಬಡವ ಮತ್ತು ದುರ್ಬಲ ವರ್ಗದ ಕುಟುಂಬಗಳ ಮಹಿಳೆಯರನ್ನು ಸ್ವಸಹಾಯ ಗುಂಪುಗಳ ಮೂಲಕ ಸಂಘಟಿಸಿ, ಅವರ ಜೀವನೋಪಾಯ ಚಟುವಟಿಕೆಯನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನವನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಜಿಲ್ಲೆಯ ಎಲ್ಲಾ ಸ್ವಸಹಾಯ ಗುಂಪುಗಳನ್ನು ರಾಷ್ಟ್ರೀಯ ಜೀವನೋಪಾಯ ಅಭಿಯಾನದ ವ್ಯಾಪ್ತಿಗೆ ತರುವ ಮೂಲಕ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟಗಳಾಗಿ ಸಮುದಾಯ ಸಂಸ್ಥೆಗಳನ್ನು ಬಲಪಡಿಸಿ ಮಹಿಳೆಯರಿಗೆ ಜೀವನೋಪಾಯವಷ್ಟೇ ಅಲ್ಲದೆ ಅವರ ಕುಟುಂಬಗಳ ಅಭಿವೃದ್ಧಿಗಾಗಿ ಸಮಗ್ರ ಸೇವೆಗಳನ್ನು ಒದಗಿಸುವ ವೇದಿಕೆಗಳಾಗಿ ನಿರ್ಮಿಸಲಾಗುತ್ತಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 101 ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳು ಮತ್ತು 652 ವಾರ್ಡ್ ಮಟ್ಟದ ಒಕ್ಕೂಟಗಳನ್ನು ರಚಿಸಿ, 5439 ಸ್ವಸಹಾಯ ಗುಂಪಿನ 67420 ಸದಸ್ಯರನ್ನು ಒಕ್ಕೂಟದ ವ್ಯಾಪ್ತಿಗೆ ತರಲಾಗಿರುತ್ತದೆ. ಸದರಿ ಸ್ವಸಹಾಯ ಗುಂಪುಗಳಲ್ಲಿ ಸಂಘಟನೆಗೊಳ್ಳುವ ಮೂಲಕ ನಿರಂತರ ಉಳಿತಾಯ, ನಿರಂತರ ಸಭೆ ಸೇರುವುದು ಮುಂತಾದ ದಶ ಸೂತ್ರಗಳನ್ನು ಪಾಲಿಸಿ ಅಭಿಯಾನದ ಬೆಂಬಲದೊಂದಿಗೆ ಒಂದಕ್ಕಿಂತ ಹೆಚ್ಚು ಜೀವನೋಪಾಯ ಚಟುವಟಿಕೆಗಳನ್ನು ಕೈಗೊಳ್ಳುವ ಮೂಲಕ ವರ್ಷಕ್ಕೆ ಕನಿಷ್ಠ 1.00 ಲಕ್ಷ ಆದಾಯವನ್ನು ಗಳಿಸುವತ್ತ ದಿಟ್ಟ ಹೆಜ್ಜೆಗಳ ಇಡುತ್ತಿದ್ದಾರೆ.
ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳ ಮೂಲಕ 2435 ಸ್ವಸಹಾಯ ಗುಂಪುಗಳಿಗೆ ರೂ.46.74 ಕೋಟಿಗಳ ಸಮುದಾಯ ಬಂಡವಾಳ ನಿಧಿಯನ್ನು ಸಾಲವಾಗಿ ಕೃಷಿ, ಕೃಷಿಯೇತರ ಹಾಗೂ ಸೇವಾ ವಲಯದ ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಕೈಗೊಂಡು ಜೀವನ ಮಟ್ಟದ ಸುಧಾರಣೆಗೆ ಸಹಕಾರಿಯಾಗಿದೆ.
ಜಿಲ್ಲೆಯ 101 ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳಿಗೆ ರೂ.101.00 ಲಕ್ಷಗಳ ದುರ್ಬಲ ವರ್ಗದವರ ನಿಧಿಯನ್ನು ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳಿಗೆ ತುರ್ತು ಪರಿಸ್ಥಿತಿ ನಿರ್ವಹಣೆ ಮಾಡಲು ಬಿಡುಗಡೆ ಮಾಡಲಾಗಿರುತ್ತದೆ.
ಗ್ರಾಮೀಣ ಮಹಿಳೆಯರ ಅಭ್ಯುದಯಕ್ಕಾಗಿ ಜಿಲ್ಲೆಯಲ್ಲಿ ವನ್ ಧನ್ ವಿಕಾಸ ಕೇಂದ್ರಗಳು, ಆರಂಭಿಕ ಗ್ರಾಮೀಣ ಉದ್ದಿಮೆಗಳ ಯೋಜನೆ, ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣ ಘಟಕಗಳ ಸ್ಥಾಪನೆ ಜೊತೆಗೆ ಪ್ರತಿಯೊಬ್ಬ ಸ್ವ ಸಹಾಯ ಗುಂಪಿನ ಮಹಿಳೆಯರು ಕನಿಷ್ಠ 2 ಜೀವನೋಪಾಯ ಚಟುವಟಿಕೆಗಳನ್ನು ಹೊಂದುವಲ್ಲಿ ಅಭಿಯಾನದ ನಿರಂತರ ಶ್ರಮ ಶ್ಲಾಘನೀಯವಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 101 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣ ಮಾಡಲಾಗಿರುವ ಘನ ತ್ಯಾಜ್ಯ ನಿರ್ವಹಣೆ ಸಂಬಂಧ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳೊಂದಿಗೆ ಒಡಂಬಡಿಕೆಯನ್ನು ಕೈಗೊಂಡು, ಸ್ವಸಹಾಯ ಗುಂಪುಗಳ ಸದಸ್ಯರ ಮೂಲಕ ನಿರ್ವಹಣೆಯನ್ನು ಮಾಡಲಾಗುತ್ತಿದೆ.
ತ್ಯಾಜ್ಯ ಸಾಗಾಣಿಕೆಗೆ ಬಳಕೆ ಮಾಡುತ್ತಿರುವ ಸ್ವಚ್ಛತಾ ವಾಹಿನಿಯ ಚಾಲನೆಯನ್ನು ಗ್ರಾಮೀಣ ಮಹಿಳೆಯರ ಮೂಲಕ ನಿರ್ವಹಣೆ ಮಾಡಲು ದಿಟ್ಟ ಹೆಜ್ಜೆ ಹಿಡಲಾಗಿರುತ್ತದೆ. 111 ಗ್ರಾಮೀಣ ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ತರಬೇತಿಯನ್ನು ನೀಡಿ, ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳ ಮೂಲಕ ನಿರ್ವಹಣೆ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಗ್ರಾಮ ಪಂಚಾಯಿತಿಗಳಲ್ಲಿ ಸುಸ್ಥಿರ ತ್ಯಾಜ್ಯ ನಿರ್ವಹಣೆ ಮಾಡಲು ಹಾಗೂ ಮಹಿಳೆಯರಿಗೆ ಜೀವನೋಪಾಯಕ್ಕೆ ಸಹಕಾರಿಯಾಗಿದೆ.
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…