ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: ಜಿಲ್ಲೆಯ 99,828 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ- ಸಚಿವ ಕೆ.ಎಚ್ ಮುನಿಯಪ್ಪ

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ದೇವನಹಳ್ಳಿಯ ತಾಲ್ಲೂಕಿನ ಆರೋಗ್ಯಾಧಿಕಾರಿಗಳ ಕಛೇರಿಯಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಪೋಷಕರು ಯಾವುದೇ ಭಯವಿಲ್ಲದೆಯೇ ಮಕ್ಕಳಿಗೆ ಪೋಲಿಯೋ ಹನಿಯನ್ನು ತಪ್ಪದೇ ಹಾಕಿಸುವ ಮೂಲಕ ಮಕ್ಕಳನ್ನು ಅಂಗವೈಕಲ್ಯದಿಂದ ಪಾರುಮಾಡಿ. ಪೋಲಿಯೋ ಹನಿ ಪಡೆಯದಿಲ್ಲದ ಯಾವ ಮಗುವು ಸುರಕ್ಷಿತವಲ್ಲ ಎಂಬ ಅಂಶವನ್ನು ಪೋಷಕರು ಮನಗಾಣಬೇಕು ಎಂದರು.

ಡಿಸೆಂಬರ್ 21 ರಿಂದ 24 ರವರೆಗೆ 2025ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು. ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಒಟ್ಟು 99828 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಮತ್ತು ಜಿಲ್ಲೆಯಲ್ಲಿ ಒಟ್ಟು 1374 ಕಠಿಣ ಪ್ರದೇಶಗಳನ್ನು (ಹೆಚ್.ಆರ್.ಎ) ಗುರುತಿಸಲಾಗಿದ್ದು, ಇವುಗಳ ಮೇಲೆ ಹೆಚ್ಚು ನಿಗಾವಹಿಸಿ ಜಿಲ್ಲೆಯಲ್ಲಿ ಯಾವುದೇ ಮಕ್ಕಳು ಯಾವುದೇ ಕಾರಣಕ್ಕೂ ಪೋಲಿಯೋ ಲಸಿಕೆಯಿಂದ ವಂಚಿತ ಆಗದಂತೆ ಕ್ರಮವಹಿಸಲಾಗಿದೆ.

ಎಲ್ಲಾ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಉಪಕೇಂದ್ರಗಳಲ್ಲಿ ಹಾಗೂ ಶಾಲೆಗಳಲ್ಲಿ/ಅಂಗನವಾಡಿ ಕೇಂದ್ರಗಳಲ್ಲಿ ಉಚಿತವಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗುವುದು.

ಜಿಲ್ಲೆಯಾದ್ಯಂತ ಒಟ್ಟು 476 ಬೂತ್‌ಗಳ ಜೊತೆಗೆ 85 ಟ್ರಾನ್ಸಿಟ್ ತಂಡಗಳ ವ್ಯವಸ್ಥೆ ಮಾಡಲಾಗಿದ್ದು, ಮಕ್ಕಳಿಗೆ ಲಸಿಕೆಯನ್ನು ಹಾಕಲು ಒಟ್ಟು 2148 ಲಸಿಕಾದಾರರನ್ನು ನಿಯೋಜಿಸಲಾಗಿದೆ. ಇದರ ಮೇಲ್ವಿಚಾರಣೆಗಾಗಿ ಒಟ್ಟು 106 ಮೇಲ್ವಿಚಾರಕರನ್ನು ನೇಮಿಸಿದ್ದು. ಜಿಲ್ಲೆಯಲ್ಲಿ ಗ್ರಾಮೀಣ / ನಗರ ಪ್ರದೇಶದ ಒಟ್ಟು 2,80,986 ಮನೆಗಳಿಗೆ ಭೇಟಿ ನೀಡಿ ಲಸಿಕೆ ನೀಡಲು ಗುರಿ ಹೊಂದಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ.ರಾಜಣ್ಣ, ಬಯಪ್ಪ ಅಧ್ಯಕ್ಷರಾದ ವಿ. ಶಾಂತಕುಮಾರ್, ಬಯಪ್ಪ ನಿರ್ದೇಶಕರಾದ ಪ್ರಸನ್ನಕುಮಾರ್, ಪುರಸಭೆ ಅಧ್ಯಕ್ಷರಾದ ಡಿ.ಎಂ ಮುನಿಕೃಷ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಲಕ್ಕಾ ಕೃಷ್ಣಾರೆಡ್ಡಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಸೀಮಾ ರುದ್ರಪ್ಪ ಮಾಬಳೆ, ದೇವನಹಳ್ಳಿ ತಹಶೀಲ್ದಾರ್ ಅನಿಲ್, ಕೆಪಿಸಿಸಿ ಸದಸ್ಯರಾದ ಚಿನ್ನಪ್ಪ, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಸಿ ಮಂಜುನಾಥ್, ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನ್ನೂರ ವೆಂಕಟೇಶ್ ಸೇರಿದಂತೆ ಆರೋಗ್ಯ ಇಲಾಖೆ ವೈದ್ಯರು ಹಾಗೂ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.

Ramesh Babu

Journalist

Recent Posts

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

10 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

12 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

14 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

19 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

22 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

2 days ago