2023-24ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ಓದುತ್ತಿರುವ ಕರ್ನಾಟಕ ರಾಜ್ಯದ ಅರ್ಹ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿವೇತನಕ್ಕಾಗಿ ಆನ್‌ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‌ನಲ್ಲಿ https://Sevasindhuservices.karnataka.gov.in/sevasindhu/departmentservices ಅರ್ಜಿಗಳನ್ನು ಸಲ್ಲಿಸಲು ಡಿ.20 ರವರೆಗೆ ನಿಗದಿಪಡಿಸಲಾಗಿತ್ತು.
ಮುಂದುವರೆದು ಈ ಅವಧಿಯನ್ನು 2023 ರ ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗಿದೆ.
ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿ ಆಗಿರಬೇಕು. ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು. (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಕ್, ಬೌದ್ಧ, ಪಾರ್ಸಿ). ವಿದ್ಯಾರ್ಥಿಯ ಕೋರ್ಸ್ ಪೂರ್ಣಕಾಲಿಕವಾಗಿರಬೇಕು. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯವು ಕನಿಷ್ಠ ರೂ.6.00/- ಲಕ್ಷಗಳನ್ನು ಮತ್ತು ಗರಿಷ್ಠ ರೂ.15.00/- ಲಕ್ಷಗಳನ್ನು ಮೀರಿರಬಾರದು. ವಿದ್ಯಾರ್ಥಿಯ ಗರಿಷ್ಠ ವಯೋಮಿತಿ 38 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಸಲು 2023 ರ ಡಿಸೆಂಬರ್ 31 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ, ಜಿಲ್ಲಾ ಮಾಹಿತಿ/ತಾಲ್ಲೂಕು ಮಾಹಿತಿ ಸಂಪರ್ಕಿಸುವುದು. ಜಿಲ್ಲಾ ಕಚೇರಿ, ದೇವನಹಳ್ಳಿ ದೂರವಾಣಿ ಸಂಖ್ಯೆ-080-29787455, ದೊಡ್ಡಬಳ್ಳಾಪುರ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ-9986874875, ನೆಲಮಂಗಲ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ-8660197516, ದೇವನಹಳ್ಳಿ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ- 8861926851, ಹೊಸಕೋಟೆ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ-7676905779 ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ-8277799990 ಅನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…
ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…