ಭಾರತ ಸರ್ಕಾರದ ನಿರ್ದೇಶಕರು, ಸಾಮಾಜಿಕ ನ್ಯಾಯ ಸಚಿವಾಲಯ ಮತ್ತು ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಇಲಾಖೆವತಿಯಿಂದ ಪ್ರಿ-ಮೆಟ್ರಿಕ್ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕಾಗಿ ಅರ್ಜಿಗಳನ್ನು ನವೆಂಬರ್ 30 ರೊಳಗೆ ಹಾಗೂ ಪೋಸ್ಟ್ ಮೆಟ್ರಿಕ್, ಟಾಪ್ ಕ್ಲಾಸ್ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 31 ರ ವರೆಗೆ ದಿನಾಂಕ ನಿಗದಿಪಡಿಸಲಾಗಿದೆ.
ರಾಷ್ಟ್ರೀಯ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿಕಲಚೇತನರು ವ್ಯಾಸಂಗ ಮಾಡುತ್ತಿರುವ ಶಾಲಾ ಕಾಲೇಜುಗಳ ಮೂಲಕ ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಬೇಕಾಗಿದ್ದು, ಅರ್ಜಿಗಳನ್ನು ಪರಿಶೀಲಿಸಿ ಆಯಾ ಶಾಲಾ ಕಾಲೇಜುಗಳವರು ಕೇಂದ್ರ ಸರ್ಕಾರದ ಪೋರ್ಟಲ್ ಮೂಲಕ ದಾಖಲಿಸಬೇಕಾಗಿರುತ್ತದೆ.
9 ಮತ್ತು 10ನೇ ತರಗತಿಯ ವಿಕಲಚೇತನ ವಿದ್ಯಾರ್ಥಿಗಳು NSP Portal ಮೂಲಕ ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಸಂಬಧಪಟ್ಟ ಶೈಕ್ಷಣಿಕ ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ (ಸಾರ್ವಜನಿಕ ಶಿಕ್ಷಣ ಇಲಾಖೆ) ಇಲಾಖೆಯ ಉಪ ನಿರ್ದೇಶಕರು ಹಾಗೂ ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳು, ಹಾಗೂ ಉನ್ನತ ಶಿಕ್ಷಣ ಕಾಲೇಜುಗಳು, ವಿಶ್ವವಿದ್ಯಾನಿಲಯಗಳ ಮುಖ್ಯಸ್ಥರೊಂದಿಗೆ ಸಮನ್ವಯತೆಯನ್ನು ಸಾಧಿಸಿ ಹೆಚ್ಚಿನ ಸಂಖ್ಯೆಯ ವಿಕಲಚೇತನ ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ (https://scholarships.gov.in/) ತಾಂತ್ರಾಂಶದಲ್ಲಿ ಅರ್ಜಿ ಸಲ್ಲಿಸಬೇಕು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಾಲಾ, ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಅಗತ್ಯ ದಾಖಲಾತಿಗಳೊಂದಿಗೆ ನಿಗದಿತ ಅವಧಿಯಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಪಡೆಯಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ ಎನ್.ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…