ರಾಷ್ಟ್ರೀಯ ವಿದ್ಯಾರ್ಥಿವೇತನಕ್ಕಾಗಿ ವಿಕಲಚೇತನರಿಂದ ಅರ್ಜಿ ಆಹ್ವಾನ

ಭಾರತ ಸರ್ಕಾರದ ನಿರ್ದೇಶಕರು, ಸಾಮಾಜಿಕ ನ್ಯಾಯ ಸಚಿವಾಲಯ ಮತ್ತು ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಇಲಾಖೆವತಿಯಿಂದ ಪ್ರಿ-ಮೆಟ್ರಿಕ್ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕಾಗಿ ಅರ್ಜಿಗಳನ್ನು ನವೆಂಬರ್ 30 ರೊಳಗೆ ಹಾಗೂ ಪೋಸ್ಟ್ ಮೆಟ್ರಿಕ್, ಟಾಪ್ ಕ್ಲಾಸ್ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 31 ರ ವರೆಗೆ ದಿನಾಂಕ ನಿಗದಿಪಡಿಸಲಾಗಿದೆ.

ರಾಷ್ಟ್ರೀಯ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿಕಲಚೇತನರು ವ್ಯಾಸಂಗ ಮಾಡುತ್ತಿರುವ ಶಾಲಾ ಕಾಲೇಜುಗಳ ಮೂಲಕ ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಬೇಕಾಗಿದ್ದು, ಅರ್ಜಿಗಳನ್ನು ಪರಿಶೀಲಿಸಿ ಆಯಾ ಶಾಲಾ ಕಾಲೇಜುಗಳವರು ಕೇಂದ್ರ ಸರ್ಕಾರದ ಪೋರ್ಟಲ್ ಮೂಲಕ ದಾಖಲಿಸಬೇಕಾಗಿರುತ್ತದೆ.

9 ಮತ್ತು 10ನೇ ತರಗತಿಯ ವಿಕಲಚೇತನ ವಿದ್ಯಾರ್ಥಿಗಳು NSP Portal ಮೂಲಕ ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಸಂಬಧಪಟ್ಟ ಶೈಕ್ಷಣಿಕ ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ (ಸಾರ್ವಜನಿಕ ಶಿಕ್ಷಣ ಇಲಾಖೆ) ಇಲಾಖೆಯ ಉಪ ನಿರ್ದೇಶಕರು ಹಾಗೂ ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳು, ಹಾಗೂ ಉನ್ನತ ಶಿಕ್ಷಣ ಕಾಲೇಜುಗಳು, ವಿಶ್ವವಿದ್ಯಾನಿಲಯಗಳ ಮುಖ್ಯಸ್ಥರೊಂದಿಗೆ ಸಮನ್ವಯತೆಯನ್ನು ಸಾಧಿಸಿ ಹೆಚ್ಚಿನ ಸಂಖ್ಯೆಯ ವಿಕಲಚೇತನ ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ (https://scholarships.gov.in/) ತಾಂತ್ರಾಂಶದಲ್ಲಿ ಅರ್ಜಿ ಸಲ್ಲಿಸಬೇಕು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಾಲಾ, ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿ‌, ವಿದ್ಯಾರ್ಥಿನಿಯರು ಅಗತ್ಯ ದಾಖಲಾತಿಗಳೊಂದಿಗೆ ನಿಗದಿತ ಅವಧಿಯಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಪಡೆಯಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ ಎನ್.ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

10.50 ಕೋಟಿ ಸಾಲ ವಂಚನೆ ಆರೋಪ: ಸೌಂದರ್ಯ ಸೌಹಾರ್ದ ಕ್ರೆಡಿಟ್‌ ಸೊಸೈಟಿ ಅಧ್ಯಕ್ಷನ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಸೂಕ್ತ ದಾಖಲೆಗಳನ್ನು ಪರಿಶೀಲಿಸದೆ 10.50 ಕೋಟಿ ಸಾಲ ಮಂಜೂರು ಮಾಡಿ ಸೌಂದರ್ಯ ಸೌಹಾರ್ದ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿಗೆ ಆರ್ಥಿಕ…

2 hours ago

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: ತಾಲ್ಲೂಕಿನ ಮಾಕಳಿ ರೈಲ್ವೆ ನಿಲ್ದಾಣದ ಸಮೀಪ ಹಿಂದೂಪುರ–ಯಲಹಂಕ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್…

11 hours ago

ಸೆ.28ರಿಂದ 30ರವರೆಗೆ ಬ್ಯಾಂಕ್ ನೌಕರರ ಮುಷ್ಕರ: ಭಾನುವಾರ ಬ್ಯಾಂಕ್‌ ಸೇವೆ ಲಭ್ಯ

ಬ್ಯಾಂಕ್ ನೌಕರರ ಒಕ್ಕೂಟವು ಸೆ.28ರಿಂದ 30ರವರೆಗೆ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಹಾಗೂ ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ…

1 day ago

ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ- ಸಚಿವ ಎನ್. ಚಲುವರಾಯಸ್ವಾಮಿ ಭರವಸೆ*

ಜನರು ನೀಡಿದ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು‌ ಎಂಬ ಉದ್ದೇಶದಿಂದ ನನಗಿರುವ ಅಧಿಕಾರವನ್ನು ಬಳಸಿಕೊಂಡು ನಿಮ್ಮ ಸೇವೆ ಮಾಡುತ್ತಿದ್ದೆನೆ ಎಂದು ಮಂಡ್ಯ…

1 day ago

ಹೈನುಗಾರಿಕೆಗೆ ಅಜೋಲಾ ಆಸರೆ: ಹಸಿರು ಮೇವಿನ ಕೊರತೆಗೆ ಪರ್ಯಾಯ: ಹಾಲು ನೀಡುವ ರಾಸುಗಳಿಗೆ ಪೌಷ್ಟಿಕ ಪೂರಕ ಆಹಾರ

ಬೆಂಗಳೂರು ಗ್ರಾಮಾಂತರ: ಮಳೆಯ ಕೊರತೆ ಹಾಗೂ ಹಸಿರು ಮೇವಿನ ಅಭಾವದಿಂದ ಜಾನುವಾರು ಸಾಕಾಣಿಕೆದಾರರು ಎದುರಿಸುತ್ತಿರುವ ಸಂಕಷ್ಟಕ್ಕೆ ಪರ್ಯಾಯವಾಗಿ, ಜಾನುವಾರುಗಳಿಗೆ ಸ್ಥಳೀಯವಾಗಿಯೇ…

1 day ago

ಸೆ. 28ಕ್ಕೆ ಅವತಿ ಬೆಟ್ಟದಲ್ಲಿ “ವಿಶ್ವ ಪ್ರವಾಸೋದ್ಯಮ ದಿನಾಚರಣೆ-2026″

ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ದೇವನಹಳ್ಳಿ ತಾಲ್ಲೂಕಿನ ಅವತಿಯ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ…

2 days ago