2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಸಚಿವಾಲಯ ಮತ್ತು ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಇಲಾಖೆಯ ವತಿಯಿಂದ ರಾಷ್ಟ್ರೀಯ ವಿದ್ಯಾರ್ಥಿವೇತನ ಯೋಜನೆಯಡಿ ಆನ್ಲೈನ್ ಮೂಲಕ (ವೆಬ್-ಸೈಟ್ http://scholarships.gov.in/) ಅರ್ಜಿ ಆಹ್ವಾನಿಸಲಾಗಿದ್ದು, ಪ್ರಿಮೆಟ್ರಿಕ್ ವ್ಯಾಸಂಗಕ್ಕೆ ಅರ್ಜಿ ಸಲ್ಲಿಸಲು ಕೊನೆಯ 2024ರ ಆಗಸ್ಟ್ 31 ರವೆರೆಗೆ ಹಾಗೂ ಪೋಸ್ಟ್ ಮೆಟ್ರಿಕ್ ಮತ್ತು ಟಾಪ್ ಕ್ಲಾಸ್ಗಳ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು 2024ರ ಅಕ್ಟೊಬರ್ 31 ರವರೆಗೂ ಕಾಲಾವಕಾಶವಿರುತ್ತದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿರುವ ಶಾಲಾ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ ಈ ಒಂದು ಸೌಲಭ್ಯವನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಕಚೇರಿ. ನಂ.3 ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಹಾಗೂ ವಿಕಲಚೇತನರ ಸಹಾಯವಾಣಿ ಸಂಖ್ಯೆ- 080-29787441 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…
View Comments
Pinshon Not continue please find its