ರಾಷ್ಟ್ರೀಯ ವಿದ್ಯುತ್ ಸುರಕ್ಷಾ ಸಪ್ತಾಹ: ನಗರದ ಪ್ರಮುಖ ವೃತ್ತ, ರಸ್ತೆಗಳಲ್ಲಿ ಸುರಕ್ಷತಾ ಜಾಥಾ

ರಾಷ್ಟ್ರೀಯ ವಿದ್ಯುತ್ ಸುರಕ್ಷಾ ಸಪ್ತಾಹದ ಅಂಗವಾಗಿ ಇಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ದೊಡ್ಡಬಳ್ಳಾಪುರ ಇವರಿಂದ ಸುರಕ್ಷತಾ ಜಾಥವನ್ನು ನಗರದ ಪ್ರಮುಖ ರಸ್ತೆ, ವೃತ್ತಗಳಲ್ಲಿ ಹಮ್ಮಿಕೊಳ್ಳಲಾಗಿತ್ತು.

ನಗರದ ಹಲವು ಭಾಗಗಳಲ್ಲಿ ವಿದ್ಯುತ್ ಪವರ್ ಮೆನ್ ಗಳು ಜಾಥವನ್ನು ನಡೆಸಿ ಸುರಕ್ಷತೆಯ ಘೋಷಣಾ ವಾಕ್ಯಗಳನ್ನು ಕೂಗುತ್ತಾ ಜನರಿಗೆ ವಿದ್ಯುತ್ತನ್ನು ಬಳಸುವಾಗ ಯಾವ ರೀತಿ ಎಚ್ಚರಿಕೆಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿದರು.

ಈ ಜಾಥವನ್ನು ಬೆವಿಕಂ ನೆಲಮಂಗಲ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಕುಮಾರನಾಯಕ್ ಹಾಗೂ ದೊಡ್ಡಬಳ್ಳಾಪುರ ಗ್ರಾಮಾಂತರ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮಂಜುನಾಥ್ ಮತ್ತು ನಗರ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವಿನಯ್ ಕುಮಾರ್ ನೇತೃತ್ವದಲ್ಲಿ ನಡೆಯಿತು.

ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಾ ಶ್ರೀ ಹಾಗೂ ನಗರಸಭೆಯ ಪೌರಾಯುಕ್ತ ಕಾರ್ತಿಕೇಶ್ವರ್ ರವರು ಈ ಸುರಕ್ಷತಾ ಜಾಥದಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *