ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ


ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ ಮತ್ತು ಸಾಂಸ್ಕೃತಿಕ ರಂಗ (ರಿ) ವತಿಯಿಂದ, ಶ್ರೀ ಕ್ಷೇತ್ರ ಧರ್ಮಸ್ಥಳದ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ ‘ಸಾಹಿತ್ಯ ಸೌರಭ’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಕವಿ ರವಿಕುಮಾರ್ ಕೆ.ಎಂ. ಅವರ ಚೊಚ್ಚಲ ಕವನ ಸಂಕಲನ ‘ಅಂಚಿನ ತೊರೆ’ ಲೋಕಾರ್ಪಣೆಗೊಂಡಿತು.

ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಜ್ಞಾನಗಂಗಾ ಸಾಹಿತ್ಯ ಮತ್ತು ಸಾಂಸ್ಕೃತಿಕ ರಂಗದ ಅಧ್ಯಕ್ಷ ಮಣ್ಣೆ ಮೋಹನ್ ಹಾಗೂ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಂದ್ರ ಅಡಿಗ ಅವರು ಕೃತಿಯನ್ನು ಲೋಕಾರ್ಪಣೆ ಮಾಡಿ ಲೇಖಕರನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಹೊಸ ತಲೆಮಾರಿನ ಕವಿಗಳು ಸಮಾಜಮುಖಿ ಸಾಹಿತ್ಯದ ಮೂಲಕ ಕನ್ನಡ ಸಾಹಿತ್ಯವನ್ನು ಇನ್ನಷ್ಟು ಶ್ರೀಮಂತಗೊಳಿಸುವ ಕೆಲಸ ಮಾಡಬೇಕು ಎಂದು ಆಶಯ ವ್ಯಕ್ತಪಡಿಸಿದರು.
ಕವಿ ರವಿಕುಮಾರ್ ಕೆ.ಎಂ. ಅವರು ಮಾತನಾಡಿ, ತಮ್ಮ ಚೊಚ್ಚಲ ಕವನ ಸಂಕಲನದ ಲೋಕಾರ್ಪಣೆ ಸಾಹಿತ್ಯ ಜೀವನದ ಮಹತ್ವದ ಮೈಲಿಗಲ್ಲಾಗಿದ್ದು, ಈ ಗೌರವಕ್ಕೆ ಕಾರಣರಾದ ಆಯೋಜಕರು, ಗಣ್ಯರು ಹಾಗೂ ಸಾಹಿತ್ಯಾಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರದ ನಾರಾಯಣಸ್ವಾಮಿ ಎಂ., ಮಹೇಶ್ ದಶಮನಿ, ರವಿಕುಮಾರ್ ಅದ್ದೇಕೊಪ್ಪ, ಅನಿಲ್ ಸೇರಿದಂತೆ ಅನೇಕ ಕವಿಗಳು, ಲೇಖಕರು, ಸಾಹಿತ್ಯಾಸಕ್ತರು, ಗಣ್ಯರು ಹಾಗೂ ಕನ್ನಡಾಭಿಮಾನಿಗಳು ಉಪಸ್ಥಿತರಿದ್ದು, ‘ಅಂಚಿನ ತೊರೆ’ ಕೃತಿಯ ಯಶಸ್ಸಿಗೆ ಶುಭ ಹಾರೈಸಿದರು.

Leave a Reply

Your email address will not be published. Required fields are marked *

error: Content is protected !!