ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಬದ್ಧತೆ ಮತ್ತು ಪರಿಪೂರ್ಣ ವ್ಯಕ್ತಿತ್ವವನ್ನು ಮೂಡಿಸಲು ಸಹಕಾರಿ; ಪಿ.ಗೋವಿಂದ ರಾಜು

ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಬದ್ಧತೆ ಮತ್ತು ಪರಿಪೂರ್ಣ ವ್ಯಕ್ತಿತ್ವವನ್ನು ಮೂಡಿಸಲು ಸಹಕಾರಿ ಆಗುತ್ತದೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ನಾರನಹಳ್ಳಿ ಗ್ರಾಮದಲ್ಲಿ ದೊಡ್ಡಬೆಳವಂಗಲ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವತಿಯಿಂದ ನಡೆಯುತ್ತಿರುವ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು. ಸಮುದಾಯದ ನಡುವೆ ಕಲಿಯುವ ಅನುಭವ ಶಿಕ್ಷಣವು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮತ್ತು ಮಾನವೀಯ ಸಂಬಂಧಗಳನ್ನು ವೃದ್ಧಿಸುತ್ತದೆ. ನಿಸ್ವಾರ್ಥ ಸೇವಾಮನೋಭಾವ ಸಂತೋಷವನ್ನು ನೀಡುತ್ತದೆ ಎಂದರು.

ದೊಡ್ಡಬೆಳವಂಗಲ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಿ.ಎಸ್.ಸುನೀತ ಮಾತನಾಡಿ, ಮಹಾತ್ಮಗಾಂಧಿ ಅವರ 100ನೇ ಜನ್ಮ ದಿನದಂದು ರಾಷ್ಟ್ರೀಯ ಸೇವಾ ಯೋಜನೆಯನ್ನು 1969ರಲ್ಲಿ ಪ್ರಾರಂಭಲಾಗಿದೆ. ಸಮಾಜಸೇವೆಯಲ್ಲಿ ಮಹಾತ್ಮಗಾಂಧಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡವರು. ಅವರ ನೆನಪಿನಲ್ಲಿ ರೂಪಿಸುವ ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳ ಸರ್ವಾಂಗೀಣ ‌ವ್ಯಕ್ತಿತ್ವ ವಿಕಸನಕ್ಕೆ ಸಹಾಯವಾಗುತ್ತದೆ. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಶಿಸ್ತು, ಭಾವೈಕ್ಯತೆ ಮತ್ತು ಸಹಬಾಳ್ವೆಯನ್ನು ಕಲಿಯಲು ಶಿಬಿರ ಸಹಕಾರಿ ಆಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ಜಂಟಿ ಕಾರ್ಯದರ್ಶಿ ಟಿ.ಆರ್.ಶ್ರೀರಾಮೇಗೌಡ, ಕನ್ನಡಪರ ಹೋರಾಟಗಾರ ಹನುಮಂತರೆಡ್ಡಿ, ಹಾದ್ರಿಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಲಕ್ಷ್ಮಣ್, ಉಪಾಧ್ಯಕ್ಷೆ ಶಿಲ್ಪಾ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಾನಂದ, ಮಾಜಿ ಅಧ್ಯಕ್ಷ ಕೆಂಪೇಗೌಡ, ಗ್ರಾಮದ ಮುಖಂಡ ರಾಜಕುಮಾರ್, ಬಸವರಾಜು, ಪದವಿ ಪೂರ್ವ ಶಿಕ್ಷಣ ಇಲಾಖೆ ನಿವೃತ್ತ ಸಿಬ್ಬಂದಿ ರಂಗಾಚಾರ್, ಶಿಕ್ಷಕಿ ಭಾರತಿ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಕೇಶವಮೂರ್ತಿ, ಕಾಲೇಜಿನ ಉಪನ್ಯಾಸಕರು ಹಾಗೂ ಶಿಬಿರಾರ್ಥಿಗಳು ಭಾಗವಹಿಸಿದರು

Leave a Reply

Your email address will not be published. Required fields are marked *