ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಬದ್ಧತೆ ಮತ್ತು ಪರಿಪೂರ್ಣ ವ್ಯಕ್ತಿತ್ವವನ್ನು ಮೂಡಿಸಲು ಸಹಕಾರಿ ಆಗುತ್ತದೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ನಾರನಹಳ್ಳಿ ಗ್ರಾಮದಲ್ಲಿ ದೊಡ್ಡಬೆಳವಂಗಲ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವತಿಯಿಂದ ನಡೆಯುತ್ತಿರುವ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು. ಸಮುದಾಯದ ನಡುವೆ ಕಲಿಯುವ ಅನುಭವ ಶಿಕ್ಷಣವು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮತ್ತು ಮಾನವೀಯ ಸಂಬಂಧಗಳನ್ನು ವೃದ್ಧಿಸುತ್ತದೆ. ನಿಸ್ವಾರ್ಥ ಸೇವಾಮನೋಭಾವ ಸಂತೋಷವನ್ನು ನೀಡುತ್ತದೆ ಎಂದರು.
ದೊಡ್ಡಬೆಳವಂಗಲ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಿ.ಎಸ್.ಸುನೀತ ಮಾತನಾಡಿ, ಮಹಾತ್ಮಗಾಂಧಿ ಅವರ 100ನೇ ಜನ್ಮ ದಿನದಂದು ರಾಷ್ಟ್ರೀಯ ಸೇವಾ ಯೋಜನೆಯನ್ನು 1969ರಲ್ಲಿ ಪ್ರಾರಂಭಲಾಗಿದೆ. ಸಮಾಜಸೇವೆಯಲ್ಲಿ ಮಹಾತ್ಮಗಾಂಧಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡವರು. ಅವರ ನೆನಪಿನಲ್ಲಿ ರೂಪಿಸುವ ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳ ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕೆ ಸಹಾಯವಾಗುತ್ತದೆ. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಶಿಸ್ತು, ಭಾವೈಕ್ಯತೆ ಮತ್ತು ಸಹಬಾಳ್ವೆಯನ್ನು ಕಲಿಯಲು ಶಿಬಿರ ಸಹಕಾರಿ ಆಗಲಿದೆ ಎಂದರು.
ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ಜಂಟಿ ಕಾರ್ಯದರ್ಶಿ ಟಿ.ಆರ್.ಶ್ರೀರಾಮೇಗೌಡ, ಕನ್ನಡಪರ ಹೋರಾಟಗಾರ ಹನುಮಂತರೆಡ್ಡಿ, ಹಾದ್ರಿಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಲಕ್ಷ್ಮಣ್, ಉಪಾಧ್ಯಕ್ಷೆ ಶಿಲ್ಪಾ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಾನಂದ, ಮಾಜಿ ಅಧ್ಯಕ್ಷ ಕೆಂಪೇಗೌಡ, ಗ್ರಾಮದ ಮುಖಂಡ ರಾಜಕುಮಾರ್, ಬಸವರಾಜು, ಪದವಿ ಪೂರ್ವ ಶಿಕ್ಷಣ ಇಲಾಖೆ ನಿವೃತ್ತ ಸಿಬ್ಬಂದಿ ರಂಗಾಚಾರ್, ಶಿಕ್ಷಕಿ ಭಾರತಿ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಕೇಶವಮೂರ್ತಿ, ಕಾಲೇಜಿನ ಉಪನ್ಯಾಸಕರು ಹಾಗೂ ಶಿಬಿರಾರ್ಥಿಗಳು ಭಾಗವಹಿಸಿದರು
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…