ದೇವನಹಳ್ಳಿ: ಮೇ.6ರ ರಾತ್ರಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಹಿಟ್ ಅಂಡ್ ರನ್ ಗೆ ದೇವನಹಳ್ಳಿ ತಾಲೂಕಿನ ಮುದುಗುರ್ಕಿ ಗ್ರಾಮದ ವ್ಯಕ್ತಿ ಸುಧಾಕರ್(35) ಸಾವನ್ನಪ್ಪಿದ್ದ. ಈ ಹಿನ್ನೆಲೆ ಸತತವಾಗಿ ಅಪಘಾತಗಳಿಂದ ನಲುಗಿಹೋಗಿರುವ ಗ್ರಾಮಸ್ಥರಿಂದ ಇಂದು (ಮೇ.7) ರಾಷ್ಟ್ರೀಯ ಹೆದ್ದಾರಿಯಲ್ಲಿ ಶವ ಇಟ್ಟು ಪ್ರತಿಭಟನೆ ನಡೆಸಿದರು.
ಮೃತ ಸುಧಾಕರ್ ಅತ್ತೆ, ತಾಯಿ, ಅಕ್ಕ ಇದೇ ಸ್ಥಳದಲ್ಲಿ ಅಪಘಾತದಿಂದ ಸಾವನ್ನಪ್ಪಿದ್ದರು. ಇದೀಗ ಹಿಟ್ ಅಂಡ್ ರನ್ ಗೆ ಸುಧಾಕರ್ ಕೂಡ ಮೃತನಾಗಿದ್ದಾನೆ.
ಬೆಂಗಳೂರು ಟೂ ಬಳ್ಳಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಡಿಕ್ಕಿ ವ್ಯಕ್ತಿಗೆ ಹೊಡೆದು ಎಸ್ಕೇಪ್ ಆಗಿದೆ. ಇದೇರೀತಿ ಮುದುಗುರ್ಕಿ ಗ್ರಾಮದ ಅನೇಕ ಜನ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಅಪಘಾತಗಳಿಂದ ಪಾರಾಗಲು ಅಂಡರ್ ಪಾಸ್ ನಿರ್ಮಾಣಕ್ಕೆ ಒತ್ತಾಯಿಸಿ ಗ್ರಾಮಸ್ಥರೆಲ್ಲ ಸೇರಿ ರಸ್ತೆ ಮಧ್ಯೆ ಶವವಿಟ್ಟು ಪ್ರತಿಭಟನೆ ಮಾಡಿದ್ದಾರೆ.
ಮೃತರ ಕುಟುಂಬಕ್ಕೆ ಪರಿಹಾರವನ್ನು ಒದಗಿಸುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದರು. ರಸ್ತೆ ಮಧ್ಯದಿಂದ ಶವ ಎತ್ತಿಸಲು ಕೆಲಕಾಲ ಅಧಿಕಾರಿಗಳು ಹರಸಾಹಸಪಟ್ಟರು.
ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು, ದೇವನಹಳ್ಳಿ ತಹಶೀಲ್ದಾರ್ ಅನಿಲ್, ಬೆಂ ಗ್ರಾ ಎಎಸ್ ಪಿ 2 ಎ ವಿ ಲಕ್ಷ್ಮಿನಾರಾಯಣ, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಮಂಜುನಾಥ್ ಟಿ.ಆರ್, ಪೊಲೀಸ್ ಅಧಿಕಾಗಳು ಆಗಮಿಸಿ ಹೆದ್ದಾರಿಯಲ್ಲಿ ಅಪಘಾತಗಳು ನಡೆಯದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಭರವಸೆ ನೀಡಿದರು. ಅಧಿಕಾರಿಗಳ ಭರವಸೆ ಮೇರೆಗೆ ಪ್ರತಿಭಟನಾ ಸ್ಥಳದಿಂದ ಶವವನ್ನು ತೆಗೆದರು.
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…