ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಅತಿ ವೇಗವಾಗಿ ಬಂದ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತನನ್ನು ದೇವನಹಳ್ಳಿ ತಾಲ್ಲೂಕಿನ ನಿಲೇರಿ ಗ್ರಾಮದ ನಿವಾಸಿ ಶೇಖರ್ (28) ಎಂದು ಗುರುತಿಸಲಾಗಿದೆ.

ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಸಂಪೂರ್ಣ ಜಖಂಗೊಂಡಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಪಘಾತದ ದೃಶ್ಯ ಸಮೀಪದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಘಟನಾ ಸ್ಥಳಕ್ಕೆ ದೇವನಹಳ್ಳಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

7 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

17 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago